AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nothing Phone 2: ಶವೋಮಿ, ಸ್ಯಾಮ್​ಸಂಗ್​ಗೆ ಶುರುವಾಯಿತು ನಡುಕ: ಬರುತ್ತಿದೆ ನಥಿಂಗ್‌ ಫೋನ್ 2 ಸ್ಮಾರ್ಟ್​ಫೋನ್

ಸ್ಮಾರ್ಟ್​ಫೋನ್ ಜಗತ್ತಿನಲ್ಲಿ ಇತಿಹಾಸ ಸೃಷ್ಟಿಸಲು ನಥಿಂಗ್ ಪುನಃ ಬಂದಿದೆ. ತನ್ನ ವಿಭಿನ್ನ ಶೈಲಿಯ ಡಿಸೈನ್​ಗಳಿಗೆ ಹೆಸರಾಗಿರುವ ನಥಿಂಗ್ ಇದೀಗ ಹೊಸ ನಥಿಂಗ್‌ ಫೋನ್ (2) ಬಿಡುಗಡೆ ಮಾಡಲು ಎಲ್ಲ ತಯಾರಿ ನಡೆಸಿದೆ.

Nothing Phone 2: ಶವೋಮಿ, ಸ್ಯಾಮ್​ಸಂಗ್​ಗೆ ಶುರುವಾಯಿತು ನಡುಕ: ಬರುತ್ತಿದೆ ನಥಿಂಗ್‌ ಫೋನ್ 2 ಸ್ಮಾರ್ಟ್​ಫೋನ್
nothing phone (2)
Follow us
Vinay Bhat
|

Updated on:Jun 13, 2023 | 11:32 AM

ಸ್ಮಾರ್ಟ್​ಫೋನ್ ಮಾರುಕಟ್ಟೆಯನ್ನು ಆಳುತ್ತಿರುವ ಶವೋಮಿ (Xiaomi), ಸ್ಯಾಮ್​ಸಂಗ್, ರಿಯಲ್ ಮಿ ಯಂತಹ ಪ್ರಸಿದ್ಧ ಬ್ರ್ಯಾಂಡ್​ಗಳಿಗೆ ಈಗ ಮತ್ತೊಮ್ಮೆ ನಡುಕ ಶುರುವಾಗಿದೆ. ಇದಕ್ಕೆ ಕಾರಣ ನಥಿಂಗ್. ಒನ್‍ ಪ್ಲಸ್‍ (OnePlus) ಕಂಪನಿಯ ಸಹಸ್ಥಾಪಕ ಕಾರ್ಲ್‍ ಪೇ ಒಡೆತನದ ನಥಿಂಗ್‍ ಕಂಪನಿ ಕಳೆದ ವರ್ಷ ತನ್ನ ಮೊಟ್ಟ ಮೊದಲ ಸ್ಮಾರ್ಟ್​​ಫೋನ್‍ ನಥಿಂಗ್ ಫೋನ್ 1 ಅನ್ನು ಹೊರತಂದು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿತ್ತು. ಇದೀಗ ಸ್ಮಾರ್ಟ್​ಫೋನ್ ಜಗತ್ತಿನಲ್ಲಿ ಇತಿಹಾಸ ಸೃಷ್ಟಿಸಲು ನಥಿಂಗ್ ಪುನಃ ಬಂದಿದೆ. ತನ್ನ ವಿಭಿನ್ನ ಶೈಲಿಯ ಡಿಸೈನ್​ಗಳಿಗೆ ಹೆಸರಾಗಿರುವ ನಥಿಂಗ್ ಇದೀಗ ಹೊಸ ನಥಿಂಗ್‌ ಫೋನ್ (2) (Nothing Phone (2)) ಬಿಡುಗಡೆ ಮಾಡಲು ಎಲ್ಲ ತಯಾರಿ ನಡೆಸಿದೆ.

ಕಳೆದ ವರ್ಷ ರಿಲೀಸ್ ಆದ ನಥಿಂಗ್ ಫೋನ್ 1 ಗೆ ಎಲ್ಲರೂ ಫಿದಾ ಆಗಿದ್ದರು. ಅದರಂತೆ ಇದರ ಮುಂದುವರಿದ ಸರಣಿಯಾಗಿ ನಥಿಂಗ್ ಫೋನ್ (2) ಅನ್ನು ಲಾಂಚ್ ಮಡಲಾಗುತ್ತಿದ್ದು, ಈಗಾಗಲೇ ಇದು ಮಾರುಕಟ್ಟೆಯಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಇದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ನಿಂದ ಪ್ರಮಾಣೀಕರಣವನ್ನು ಪಡೆದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಈ ಸ್ಮಾರ್ಟ್‌ಫೋನ್‌ ದೇಶದಲ್ಲಿ ಲಾಂಚ್ ಆಗಲಿದೆ.

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಅಚ್ಚರಿಯ ಫೀಚರ್: ಆಂಡ್ರಾಯ್ಡ್ ಬಳಕೆದಾರರಿಗೆ ಸಂತಸದ ಸುದ್ದಿ

ಇದನ್ನೂ ಓದಿ
Image
Tech Tips: ಫೇಸ್​ಬುಕ್,​ ಇನ್​ಸ್ಟಾಗ್ರಾಮ್​ನಲ್ಲಿ ಹಣ ಕೊಟ್ಟು ಬ್ಲೂ ಟಿಕ್ ಪಡೆಯುವುದು ಹೇಗೆ?: ಇಲ್ಲಿದೆ ಟ್ರಿಕ್
Image
Realme GT Neo 5 Pro: ಬಿಡುಗಡೆಗೆ ಸಜ್ಜಾಗಿ ನಿಂತಿದೆ ರೋಚಕತೆ ಸೃಷ್ಟಿಸಿರುವ ರಿಯಲ್‌ ಮಿ GT ನಿಯೋ 5 ಪ್ರೊ ಸ್ಮಾರ್ಟ್​ಫೋನ್
Image
Google Pixel: ಎಫ್1 ಇನ್ಫೋ ಜೊತೆ ಗೂಗಲ್ ಸಹಭಾಗಿತ್ವ: ಪಿಕ್ಸೆಲ್ ಸ್ಮಾರ್ಟ್​ಫೋನ್​ಗಳ ಸರ್ವೀಸ್ ಸಮಸ್ಯೆಗೆ ಸಿಕ್ಕಿತು ಪರಿಹಾರ
Image
Best Camera Phones: 50,000 ರೂ. ಒಳಗೆ ಸಿಗುತ್ತಿರುವ ಬೆಸ್ಟ್ ಕ್ಯಾಮೆರಾ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ

ಕಂಪನಿ ಈ ಫೋನಿನ ಫೀಚರ್ಸ್ ಅಥವಾ ಬೆಲೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಆದರೆ, ಮೂಲಗಳ ಪ್ರಕಾರ ನಥಿಂಗ್ ಫೋನ್ (2) ಬೆಲೆ 40,000 ರೂ. ಆಸುಪಾಸಿನಲ್ಲಿ ಕಾಣಿಸಿಕೊಳ್ಳಬಹುದು ಎನ್ನಲಾಗಿದೆ. ನಥಿಂಗ್ ಫೋನ್ (1) ಫೋನ್‌ಗೆ 30,499 ರೂ. ಗಳನ್ನು ನಿಗದಿ ಮಾಡಲಾಗಿತ್ತು.

ಲೀಕ್ ಆಗಿರುವ ಮಾಹಿತಿಯ ಪ್ರಕಾರ ನಥಿಂಗ್ ಫೋನ್ (2) ಸ್ಮಾರ್ಟ್‌ಫೋನ್ 6.67 ಇಂಚಿನ OLED ಡಿಸ್‌ಪ್ಲೇ ಹೊಂದಿರಲಿದ್ದು, ಇದು 120Hz ರಿಫ್ರೆಶ್ ರೇಟ್‌ ನೀಡಲಿದೆ ಎಂದು ತಿಳಿದುಬಂದಿದೆ. ಆದರೆ, ಬ್ರೈಟ್‌ನೆಸ್‌ ವಿವರ ಹಾಗೂ ಫಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಸೇರಿದಂತೆ ಇನ್ನಿತರೆ ವಿವರ ತಿಳಿದುಬಂದಿಲ್ಲ. ಬಲಿಷ್ಠವಾದ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜನ್ 1 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ ಟ್ರಿಪಲ್‌ ಕ್ಯಾಮೆರಾ ರಚನೆ ಹೊಂದಿರಲಿದೆ ಎಂದು ಹೇಳಲಾಗುತ್ತಿದೆ. ಈ ಫೋನಿನ ಹಿಂಭಾಗದಲ್ಲರುವ ಎಲ್ಲ ಮೂರು ಕ್ಯಾಮೆರಾಗಳು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇರಲಿದೆಯಂತೆ. ಅದರಂತೆ ಮುಂಭಾಗ ಸೆಲ್ಪಿ ಮತ್ತು ವಿಡಿಯೋ ಕರೆಗಳಿಗಾಗಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ಪಡೆದುಕೊಳ್ಳಲಿದೆ ಎನ್ನುವ ವದಂತಿಗಳಿವೆ.

ನಥಿಂಗ್ ಫೋನ್ (2) 4700mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿರಲಿದ್ದು, ಫಾಸ್ಟ್‌ ಚಾರ್ಜಿಂಗ್‌ ಬೆಂಬಲ ಪಡೆದಿರಲಿದೆ ಎಂದು ತಿಳಿದುಬಂದಿದೆ. ಆದರೆ, ಇದು ಎಷ್ಟು ವೋಲ್ಟ್​ನದ್ದು ಎಂಬುದು ಬಹಿರಂಗವಾಗಿಲ್ಲ. ಈ ಫೋನ್ ಒನ್​ಪ್ಲಸ್ 11R ಮತ್ತು ಪಿಕ್ಸೆಲ್ 7a ಗೆ ಕಠಿಣ ಪೈಪೋಟಿ ನೀಡಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:31 am, Tue, 13 June 23

Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ತುಂಬ ಆ್ಯಕ್ಟೀವ್ ಆಗಿದ್ದ ರಾಕೇಶ್​ಗೆ ಹೃದಯಾಘಾತ, ನಂಬೋಕೆ ಆಗಲಿಲ್ಲ: ರಘು
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ