AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nothing Phone 2: ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಇತಿಹಾಸ ಸೃಷ್ಟಿಸಲು ಬರುತ್ತಿದೆ ನಥಿಂಗ್‌ ಫೋನ್‌ (2)

ನಥಿಂಗ್‌ ಫೋನ್‌ (2) ಅಧಿಕೃತವಾಗಿ ಭಾರತವೂ ಸೇರಿದಂತೆ ಜಾಗತಿಕ ಮಾರುಕಟ್ಟೆಗೆ ಮುಂದಿನ ತಿಂಗಳು ಜುಲೈ 11 ರಂದು ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್‌ ಲಾಂಚ್‌ ಈವೆಂಟ್ ಜುಲೈ ಎರಡನೇ ವಾರದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.

Nothing Phone 2: ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಇತಿಹಾಸ ಸೃಷ್ಟಿಸಲು ಬರುತ್ತಿದೆ ನಥಿಂಗ್‌ ಫೋನ್‌ (2)
nothing phone (2)
Vinay Bhat
|

Updated on: Jun 17, 2023 | 6:55 AM

Share

ಒನ್‍ ಪ್ಲಸ್‍ (OnePlus) ಕಂಪನಿಯ ಸಹಸ್ಥಾಪಕ ಕಾರ್ಲ್‍ ಪೇ ಒಡೆತನದ ನಥಿಂಗ್‍ ಕಂಪನಿ ಕಳೆದ ವರ್ಷ ತನ್ನ ಮೊಟ್ಟ ಮೊದಲ ಸ್ಮಾರ್ಟ್​​ಫೋನ್‍ ನಥಿಂಗ್ ಫೋನ್ 1 ಅನ್ನು ಹೊರತಂದು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿತ್ತು. ಇದೀಗ ಸ್ಮಾರ್ಟ್​ಫೋನ್ ಜಗತ್ತಿನಲ್ಲಿ ಇತಿಹಾಸ ಸೃಷ್ಟಿಸಲು ನಥಿಂಗ್ ಪುನಃ ಬಂದಿದೆ. ತನ್ನ ವಿಭಿನ್ನ ಶೈಲಿಯ ಡಿಸೈನ್​ಗಳಿಗೆ ಹೆಸರಾಗಿರುವ ನಥಿಂಗ್ ಇದೀಗ ಹೊಸ ನಥಿಂಗ್‌ ಫೋನ್ (2) (Nothing Phone (2)) ಬಿಡುಗಡೆ ಮಾಡಲು ಎಲ್ಲ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಜುಲೈ 11 ರಂದು ಬಿಡುಗಡೆ ಆಗೋದು ಖಚಿತವಾಗಿದೆ.

ನಥಿಂಗ್‌ ಫೋನ್‌ (2) ಅಧಿಕೃತವಾಗಿ ಭಾರತವೂ ಸೇರಿದಂತೆ ಜಾಗತಿಕ ಮಾರುಕಟ್ಟೆಗೆ ಮುಂದಿನ ತಿಂಗಳು ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್‌ ಲಾಂಚ್‌ ಈವೆಂಟ್ ಜುಲೈ ಎರಡನೇ ವಾರದಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಒಟ್ಟು ಮೂರು ರೂಪಾಂತರಗಳ ಆಯ್ಕೆಯಲ್ಲಿ ಬರಲಿದೆ. ಇದು ವೈಟ್‌ ಮತ್ತು ಬ್ಲಾಕ್‌ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಫ್ಲಿಪ್​ಕಾರ್ಟ್​ನಲ್ಲಿ ಸೇಲ್ ಕಾಣಲಿದೆ.

ಕಳೆದ ವರ್ಷ ರಿಲೀಸ್ ಆದ ನಥಿಂಗ್ ಫೋನ್ 1 ಗೆ ಎಲ್ಲರೂ ಫಿದಾ ಆಗಿದ್ದರು. ಅದರಂತೆ ಇದರ ಮುಂದುವರಿದ ಸರಣಿಯಾಗಿ ನಥಿಂಗ್ ಫೋನ್ (2) ಅನ್ನು ಲಾಂಚ್ ಮಡಲಾಗುತ್ತಿದ್ದು, ಈಗಾಗಲೇ ಇದು ಮಾರುಕಟ್ಟೆಯಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಇದು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ನಿಂದ ಪ್ರಮಾಣೀಕರಣವನ್ನು ಪಡೆದಿದೆ.

ಇದನ್ನೂ ಓದಿ
Image
Realme 11 Pro: 5G: ಭಾರತದಲ್ಲಿ ಖರೀದಿಗೆ ಸಿಗುತ್ತಿದೆ 200MP ಕ್ಯಾಮೆರಾದ ಹೊಸ ರಿಯಲ್ ಮಿ 11 ಪ್ರೊ+ 5G ಸ್ಮಾರ್ಟ್​ಫೋನ್
Image
Father’s Day 2023: ನಿಮ್ಮ ತಂದೆಗೆ ಈ ವಿಶೇಷ ಉಡುಗೊರೆ ಕೊಡಲು ಮರೆಯದಿರಿ
Image
Redmi 12: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಬಜೆಟ್ ಬೆಲೆಯ ರೆಡ್ಮಿ 12 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ?
Image
Samsung Galaxy F13: ಬೆಸ್ಟ್ ಆಫರ್ ಪ್ರೈಸ್​ಗೆ ಸೇಲ್ ಆಗುತ್ತಿದೆ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌

Reliance JioTag: ಏರ್​ಟ್ಯಾಗ್​ಗೆ ಸೆಡ್ಡು ಹೊಡೆಯಲು ಬಂತು ರಿಲಯನ್ಸ್ ಜಿಯೋಟ್ಯಾಗ್

ಕಂಪನಿ ಈ ಫೋನಿನ ಫೀಚರ್ಸ್ ಅಥವಾ ಬೆಲೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಆದರೆ, ಮೂಲಗಳ ಪ್ರಕಾರ ನಥಿಂಗ್ ಫೋನ್ (2) ಬೆಲೆ 40,000 ರೂ. ಆಸುಪಾಸಿನಲ್ಲಿ ಕಾಣಿಸಿಕೊಳ್ಳಬಹುದು ಎನ್ನಲಾಗಿದೆ. ನಥಿಂಗ್ ಫೋನ್ (1) ಫೋನ್‌ಗೆ 30,499 ರೂ. ಗಳನ್ನು ನಿಗದಿ ಮಾಡಲಾಗಿತ್ತು.

ಲೀಕ್ ಆಗಿರುವ ಮಾಹಿತಿಯ ಪ್ರಕಾರ ನಥಿಂಗ್ ಫೋನ್ (2) ಸ್ಮಾರ್ಟ್‌ಫೋನ್ 6.67 ಇಂಚಿನ OLED ಡಿಸ್‌ಪ್ಲೇ ಹೊಂದಿರಲಿದ್ದು, ಇದು 120Hz ರಿಫ್ರೆಶ್ ರೇಟ್‌ ನೀಡಲಿದೆ ಎಂದು ತಿಳಿದುಬಂದಿದೆ. ಆದರೆ, ಬ್ರೈಟ್‌ನೆಸ್‌ ವಿವರ ಹಾಗೂ ಫಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಸೇರಿದಂತೆ ಇನ್ನಿತರೆ ವಿವರ ತಿಳಿದುಬಂದಿಲ್ಲ. ಬಲಿಷ್ಠವಾದ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜನ್ 1 ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ ಟ್ರಿಪಲ್‌ ಕ್ಯಾಮೆರಾ ರಚನೆ ಹೊಂದಿರಲಿದೆ ಎಂದು ಹೇಳಲಾಗುತ್ತಿದೆ. ಈ ಫೋನಿನ ಹಿಂಭಾಗದಲ್ಲರುವ ಎಲ್ಲ ಮೂರು ಕ್ಯಾಮೆರಾಗಳು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇರಲಿದೆಯಂತೆ. ಅದರಂತೆ ಮುಂಭಾಗ ಸೆಲ್ಪಿ ಮತ್ತು ವಿಡಿಯೋ ಕರೆಗಳಿಗಾಗಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ಪಡೆದುಕೊಳ್ಳಲಿದೆ ಎನ್ನುವ ವದಂತಿಗಳಿವೆ.

ನಥಿಂಗ್ ಫೋನ್ (2) 4700mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿರಲಿದ್ದು, ಫಾಸ್ಟ್‌ ಚಾರ್ಜಿಂಗ್‌ ಬೆಂಬಲ ಪಡೆದಿರಲಿದೆ ಎಂದು ತಿಳಿದುಬಂದಿದೆ. ಆದರೆ, ಇದು ಎಷ್ಟು ವೋಲ್ಟ್​ನದ್ದು ಎಂಬುದು ಬಹಿರಂಗವಾಗಿಲ್ಲ. ಈ ಫೋನ್ ಒನ್​ಪ್ಲಸ್ 11R ಮತ್ತು ಪಿಕ್ಸೆಲ್ 7a ಗೆ ಕಠಿಣ ಪೈಪೋಟಿ ನೀಡಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು