AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nothing Phone 2a: ದಾಖಲೆ ಸೃಷ್ಟಿಸಿದ ನಥಿಂಗ್ ಫೋನ್ 2a: 60 ನಿಮಿಷಗಳಲ್ಲಿ 60,000 ಫೋನ್ ಮಾರಾಟ

Nothing Phone 2a Sale Record: ಇತ್ತೀಚೆಗಷ್ಟೆ ಹೊಸದಾಗಿ ಬಿಡುಗಡೆಯಾದ ನಥಿಂಗ್ ಫೋನ್ 2a ಸ್ಮಾರ್ಟ್‌ಫೋನ್ ಸೇಲ್ ಆರಂಭವಾದ 60 ನಿಮಿಷಗಳಲ್ಲಿ 60,000 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಭರ್ಜರಿ ಬೇಡಿಕೆಯ ಹಿನ್ನೆಲೆಯಲ್ಲಿ ದಾಖಲೆಯ ಮಾರಾಟ ಕಂಡು ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದ್ದಾರೆ.

Nothing Phone 2a: ದಾಖಲೆ ಸೃಷ್ಟಿಸಿದ ನಥಿಂಗ್ ಫೋನ್ 2a: 60 ನಿಮಿಷಗಳಲ್ಲಿ 60,000 ಫೋನ್ ಮಾರಾಟ
Nothing phone 2a
Vinay Bhat
|

Updated on: Mar 17, 2024 | 1:05 PM

Share

ಲಂಡನ್ ಮೂಲದ ಕಾರ್ಲ್ ಪೀ ಒಡೆತನದ ಪ್ರಸಿದ್ಧ ನಥಿಂಗ್‌ ಕಂಪನಿಯ ಫೋನುಗಳಿಗೆ ಮಾರುಕಟ್ಟೆಯಲ್ಲಿ ಭರ್ಜರಿ ಡಿಮ್ಯಾಂಡ್ ಇದೆ. ಈ ಮಾದರಿಯಿಂದ ಇಲ್ಲಿಯವರೆಗೆ ಬಿಡುಗಡೆಯಾದ ಫೋನ್‌ಗಳು ಭಾರೀ ಮಾರಾಟ ಕಂಡಿದೆ. ಇತ್ತೀಚೆಗಷ್ಟೆ ನಥಿಂಗ್ ಬ್ರ್ಯಾಂಡ್​ನಿಂದ ಹೊಸ ಫೋನ್ ಬಿಡುಗಡೆ ಆಗಿತ್ತು. ಬಜೆಟ್ ಬೆಲೆಯಲ್ಲಿ ಈ ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ನಥಿಂಗ್ ಫೋನ್ 2a (Nothing Phone 2a) ಹೆಸರಿನಲ್ಲಿ ತಂದಿರುವ ಈ ಫೋನ್ ಕೂಡ ಭರ್ಜರಿ ಸೇಲ್ ಕಾಣುತ್ತಿದೆ. ಅತ್ಯುತ್ತಮ ಫೀಚರ್​ಗಳಿಂದ ಕೂಡಿರುವ ಈ ಫೋನಿಗೆ ಒಳ್ಳೆಯ ಪ್ರತಿಕ್ರಿಯೆ ಕೇಳಿಬರುತ್ತಿದೆ.

ಹೊಸದಾಗಿ ಬಿಡುಗಡೆಯಾದ ನಥಿಂಗ್ ಫೋನ್ 2a ಸ್ಮಾರ್ಟ್‌ಫೋನ್ ಸೇಲ್ ಆರಂಭವಾದ 60 ನಿಮಿಷಗಳಲ್ಲಿ 60,000 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಭರ್ಜರಿ ಬೇಡಿಕೆಯ ಹಿನ್ನೆಲೆಯಲ್ಲಿ ದಾಖಲೆಯ ಮಾರಾಟ ಕಂಡು ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಕಂಪನಿಯ ಪ್ರತಿನಿಧಿಗಳು ತಿಳಿಸಿದ್ದಾರೆ.

ವೋಟರ್ ಐಡಿಗೆ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?: ಇಲ್ಲಿದೆ ಮಾಹಿತಿ

ಈ ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ಬಿಳಿ ಬಣ್ಣದ ರೂಪಾಂತರದಲ್ಲಿ ತರಲಾಗಿದೆ. ಈ ಫೋನ್ ಆರಂಭಿಕ ಬೆಲೆ ರೂ. 19,999. ಈ ಫೋನ್ 8GB RAM, 128GB ಸ್ಟೋರೇಜ್, 8GB RAM, 256GB ಸ್ಟೋರೇಜ್, 12GB RAM, 256GB ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆ ಆಗಿದೆ.

ಈ ಫೋನ್‌ನ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಇದು 6.7 ಇಂಚಿನ AMOLED ಡಿಸ್​ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮನ್ಶನ್ 7200 ಪ್ರೊ ಚಿಪ್‌ಸೆಟ್ ಪ್ರೊಸೆಸರ್‌ನಿಂದ ಚಾಲಿತವಾಗಿದೆ. ಇದು 50 MP ಹಿಂಬದಿಯ ಕ್ಯಾಮೆರಾ ಮತ್ತು 32 MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್ ಮೂಲಕ ರನ್ ಆಗುತ್ತದೆ, 45W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5000mAh ಬ್ಯಾಟರಿಯನ್ನು ಹೊಂದಿದೆ.

ಮುಂದಿನ ವಾರ ಬಿಡುಗಡೆ ಆಗಲಿವೆ ಸಾಲು ಸಾಲು ಸ್ಮಾರ್ಟ್​ಫೋನ್​ಗಳು: ಯಾವುವು ನೋಡಿ

ಭಾರತದಲ್ಲಿ ನಥಿಂಗ್ ಫೋನ್ 2a ಬೆಲೆಯ ಸಂಪೂರ್ಣ ವಿವರ:

ನಥಿಂಗ್ ಫೋನ್ 2a ಸ್ಮಾರ್ಟ್​ಫೋನ್ ದೇಶದಲ್ಲಿ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಮಾಡಲಾಗಿತ್ತು. ಇದರ ಬೇಸ್ 8GB RAM + 128GB ಸ್ಟೋರೇಜ್ ಕಾನ್ಫಿಗರೇಶನ್‌ಗೆ 23,999 ರೂ. ಇದೆ. ಅಂತೆಯೆ 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ರೂಪಾಂತರಕ್ಕೆ ಕ್ರಮವಾಗಿ ರೂ. 25,999 ಮತ್ತು 27,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಮಾರ್ಚ್ 12 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಕಾಣುತ್ತಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮನ್​ ಕಿ ಬಾತ್​ , ಪ್ರಧಾನಿ ದೇಶದ ಜನತೆಯೊಂದಿಗೆ ನಡೆಸುವ ಸಾಮೂಹಿಕ ಸಂವಾದ
ಮನ್​ ಕಿ ಬಾತ್​ , ಪ್ರಧಾನಿ ದೇಶದ ಜನತೆಯೊಂದಿಗೆ ನಡೆಸುವ ಸಾಮೂಹಿಕ ಸಂವಾದ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ