OnePlus 10 Pro 5G: ಧಮಾಕ ಆಫರ್: 32 ನಿಮಿಷದಲ್ಲಿ ಫುಲ್ ಚಾರ್ಜ್ ಆಗುವ ಈ ಫೋನ್ ಕಡಿಮೆ ಬೆಲೆಗೆ ಲಭ್ಯ

Amazon Offers: ಇದೀಗ ಅಮೆಜಾನ್​​ನಲ್ಲಿ ಒನ್‌ಪ್ಲಸ್‌ 10 ಪ್ರೊ ಫೋನಿನ 8GB RAM ರೂಪಾಂತರವನ್ನು 61,999 ರೂ. ಗೆ ಖರೀದಿಸಬಹುದು. ಅದೇ ರೀತಿ 12GB + 256GB ವೇರಿಯಂಟ್‌ ಬೆಲೆಯು 66,999 ರೂ. ಆಗಿದೆ.

OnePlus 10 Pro 5G: ಧಮಾಕ ಆಫರ್: 32 ನಿಮಿಷದಲ್ಲಿ ಫುಲ್ ಚಾರ್ಜ್ ಆಗುವ ಈ ಫೋನ್ ಕಡಿಮೆ ಬೆಲೆಗೆ ಲಭ್ಯ
Oneplus 10 Pro 5G
Follow us
| Updated By: Vinay Bhat

Updated on: Nov 19, 2022 | 6:55 AM

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಯಾವುದೇ ಮೇಳಗಳು ನಡೆಯುತ್ತಿಲ್ಲ. ಆದರೂ ಆಯ್ದ ಕೆಲ ಸ್ಮಾರ್ಟ್​ಫೋನ್​ಗಳು ಬಂಪರ್ ಡಿಸ್ಕೌಂಟ್​ನಲ್ಲಿ ಮಾರಾಟ ಆಗುತ್ತಿದೆ. ಭಾರತದಲ್ಲಿ ಈ ವರ್ಷ ಲಾಂಚ್ ಆಗಿದ್ದ ಒನ್​ಪ್ಲಸ್ ಕಂಪನಿಯ ಪವರ್​ಫುಲ್ ಸ್ಮಾರ್ಟ್​ಫೋನ್ ಒನ್​ಪ್ಲಸ್ 10 ಪ್ರೊ 5ಜಿ (OnePlus 10 Pro 5G) ಈಗ ಅಮೆಜಾನ್​ನಲ್ಲಿ (Amazon) ಭರ್ಜರಿ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಫೋನ್​ನಲ್ಲಿ ಕೇವಲ 32 ನಿಮಿಷಗಳಲ್ಲಿ ಶೂನ್ಯದಿಂದ 100% ಚಾರ್ಜ್ ಆಗುತ್ತದೆ ಎಂಬುದು ವಿಶೇಷ. ಹಾಗಾದರೆ ಈ ಫೋನ್ ಅನ್ನು ಆಫರ್​ನಲ್ಲಿ (Offer) ಎಷ್ಟು ಬೆಲೆಗೆ ಖರೀದಿಸಬಹುದು ಎಂಬುದನ್ನು ನೋಡೋಣ.

ಏನಿದೆ ಆಫರ್?:

ಭಾರತದಲ್ಲಿ ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ಒಟ್ಟು ಎರಡು ಮಾದರಿಯಲ್ಲಿ ಅನಾವರಣಗೊಂಡಿತ್ತು. ಇದರ ಬೇಸ್ ಮಾಡೆಲ್‌ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 66,999 ರೂ. ಮತ್ತು 12GB RAM ಮತ್ತು 256GB ಸ್ಟೋರೇಜ್ ಮಾಡೆಲ್‌ ಆಯ್ಕೆಗೆ 71,999 ರೂ. ಬೆಲೆ ಇದೆ. ಇದೀಗ ಅಮೆಜಾನ್​​ನಲ್ಲಿ ಈ ಫೋನಿನ 8GB RAM ರೂಪಾಂತರವನ್ನು 61,999 ರೂ. ಗೆ ಖರೀದಿಸಬಹುದು. ಅದೇ ರೀತಿ 12GB + 256GB ವೇರಿಯಂಟ್‌ ಬೆಲೆಯು 66,999 ರೂ. ಆಗಿದೆ. ಅಲ್ಲದೆ ಯ್ದ ಕ್ರೆಡಿಟ್ ಕಾರ್ಡ್​ಗಳಿಗೆ 2,000 ರೂ. ಗಳ ಡಿಸ್ಕೌಂಟ್ ಸಿಗಲಿದೆ. 25,000 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಕೂಡ ನೀಡಲಾಗಿದೆ.

ಇದನ್ನೂ ಓದಿ
Image
Tech Tips: ಹೊಸ ಫೀಚರ್ ಪರಿಚಯಿಸಿದ WhatsApp, ನಿಮ್ಮ ವಾಟ್ಸಾಪ್​ನಲ್ಲೂ ಸಮೀಕ್ಷೆ ಮಾಡಬಹುದು, ಹಂತಗಳು ಇಲ್ಲಿದೆ.
Image
Tech Tips: ತಪ್ಪಿಯೂ ಹೀಗೆ ಮಾಡಬೇಡಿ: ನಿಮ್ಮ ಸ್ಮಾರ್ಟ್​ಫೋನ್ ಬ್ಲಾಸ್ಟ್ ಆಗಬಹುದು: ಎಚ್ಚರ
Image
RIP Twitter: ಮುಳುಗುತ್ತಿದೆ ಟ್ವಿಟ್ಟರ್​: ನೌಕರರ ಸಾಮೂಹಿಕ ರಾಜೀನಾಮೆ: ಕಚೇರಿಗಳು ತಾತ್ಕಾಲಿಕ ಬಂದ್
Image
Realme 10 Pro: ರಿಯಲ್ ಮಿಯಿಂದ ಒಂದಲ್ಲ ಎರಡು 108MP ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?

ಏನು ವಿಶೇಷತೆ?:

ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ ಇದು 1,440×3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ QHD+ ಲಿಕ್ವಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ sRGB ಬಣ್ಣದ ಹರವುಗಳನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದಿದೆ. ಆಕ್ಟಾಕೋರ್ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಆಕ್ಸಿಜನ್‌ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ದೀರ್ಘ ಸಮಯ ಬಾಳಿಕೆ ಬರುವ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 80W ಸೂಪರ್‌ವೂಕ್‌ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್‌ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದರ ಜೊತೆಗೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆಗಳನ್ನು ನೀಡಲಾಗಿದೆ.

ಖರೀದಿಸಬಹುದೇ?:

ಈ ಸ್ಮಾರ್ಟ್‌ಫೋನ್‌ ಅತ್ಯಂತ ಬಲಿಷ್ಠವಾದ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಹೊಂದಿದ್ದು, ನಾಲ್ಕು ಪಟ್ಟು ವೇಗದ ಕೃತಕ ಬುದ್ಧಿಮತ್ತೆ (AI) ಸಂಸ್ಕರಣೆ ಮತ್ತು ಕೊನೆಯ ತಲೆಮಾರಿನ ಸ್ನಾಪ್‌ಡ್ರಾಗನ್ ಚಿಪ್‌ಗಿಂತ 25% ಹೆಚ್ಚು ಪರಿಣಾಮಕಾರಿ ಗ್ರಾಫಿಕ್ಸ್ ಕಾರ್ಯಕ್ಷಮತೆಯನ್ನು ನೀಡಲಿದೆ. ಹೀಗಾಗಿ ಗೇಮಿಂಗ್​ಗೆ ಈ ಫೋನ್ ಹೇಳಿಮಾಡಿಸಿದಂತಿದೆ. ಅಲ್ಲದೆ IMX789 ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾ ನೀಡಲಾಗಿದ್ದು ಫೋಟೋಗ್ರಫಿ ಅದ್ಭುತವಾಗಿ ಮೂಡಿಬರುತ್ತದೆ. ಚಾರ್ಜಿಂಗ್ ಬಗ್ಗೆ ಎರಡು ಮಾತಿಲ್ಲ. 55,000 ರೂ. ಗೆ ನೀವು ಫೋನನ್ನು ಖರೀದಿಸಿದರೆ ಯಾವುದೇ ಮೊಸವಿಲ್ಲ.

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು