OnePlus 10R 5G: ನಥಿಂಗ್ ಫೋನ್ ರಿಲೀಸ್ ಬೆನ್ನಲ್ಲೇ ಒನ್​ಪ್ಲಸ್​ 10R 5G ಮೇಲೆ ಬಂಪರ್ ಡಿಸ್ಕೌಂಟ್: ಮಿಸ್ ಮಾಡ್ಬೇಡಿ ಆಫರ್

OnePlus 10R 5G Price Drop: ಬರೋಬ್ಬರಿ 150W SuperVOOC ವೇಗದ ಚಾರ್ಜಿಂಗ್ ಜೊತೆಗೆ 80W SuperVOOC ಚಾರ್ಜಿಂಗ್‌ ಆವೃತ್ತಿಯಲ್ಲಿ ಬಿಡುಗಡೆ ಆದ ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್​ಗೆ ಈಗಲೂ ಬೇಡಿಕೆಯಿದ್ದು ಸೇಲ್ ಕಾಣುತ್ತಿದೆ.

OnePlus 10R 5G: ನಥಿಂಗ್ ಫೋನ್ ರಿಲೀಸ್ ಬೆನ್ನಲ್ಲೇ ಒನ್​ಪ್ಲಸ್​ 10R 5G ಮೇಲೆ ಬಂಪರ್ ಡಿಸ್ಕೌಂಟ್: ಮಿಸ್ ಮಾಡ್ಬೇಡಿ ಆಫರ್
OnePlus 10R
Follow us
| Updated By: Vinay Bhat

Updated on:Jul 16, 2022 | 6:48 AM

ಒನ್‍ ಪ್ಲಸ್‍ (OnePlus) ಕಂಪನಿಯ ಸಹಸ್ಥಾಪಕ ಕಾರ್ಲ್‍ ಪೇ ಒಡೆತನದ ನಥಿಂಗ್‍ ಕಂಪನಿ ತನ್ನ ಮೊಟ್ಟ ಮೊದಲ ಸ್ಮಾರ್ಟ್​​ಫೋನ್‍ ನಥಿಂಗ್ ಫೋನ್ 1 (Nothing Phone 1) ಅನ್ನು ಮೂರು ದಿನಗಳ ಹಿಂದೆಯಷ್ಟೆ ಅನಾವರಣ ಮಾಡಿತ್ತು. ಸದ್ಯ ಈ ಫೋನ್​ಗೆ ಅತ್ಯುತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದ್ದು ಬಂಪರ್ ಸೇಲ್ ಆಗುವುದು ಖಚಿತ. ಹೀಗಿರುವಾಗ ಒನ್​ಪ್ಲಸ್ ಕಂಪನಿ ತನ್ನ ಒನ್​ಪ್ಲಸ್ 10ಆರ್ 5ಜಿ (OnePlus 10R 5G) ಸ್ಮಾರ್ಟ್​​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದೆ. ಬರೋಬ್ಬರಿ 150W SuperVOOC ವೇಗದ ಚಾರ್ಜಿಂಗ್ ಜೊತೆಗೆ 80W SuperVOOC ಚಾರ್ಜಿಂಗ್‌ ಆವೃತ್ತಿಯಲ್ಲಿ ಬಿಡುಗಡೆ ಆದ ಈ ಫೋನ್​ಗೆ ಈಗಲೂ ಬೇಡಿಕೆಯಿದ್ದು ಸೇಲ್ ಕಾಣುತ್ತಿದೆ. ಈ ಫೋನ್ ಭಾರತದಲ್ಲಿ 38,999 ರೂ. ಗೆ ಅನಾವರಣಗೊಂಡಿತ್ತು. ಇದೀಗ ಈ ಫೋನ್ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಲಾಗಿದೆ. ಇದು 8GB RAM ಮತ್ತು 128GB ಸ್ಟೋರೇಜ್ ಆಯ್ಕೆ ಹೊಂದಿದೆ.

  1. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ 3,000 ರೂ. ಗಳ ಡಿಸ್ಕೌಂಟ್​ನಲ್ಲಿ ಕಾಣಿಸಿಕೊಂಡಿದೆ. ಜೊತೆಗೆ ICICI ಕಾರ್ಡ್​ ಮೂಲ ಖರೀದಿಸಿದರೆ 1,000 ರೂ. ಗಳ ರಿಯಾಯಿತಿ ಸಿಗಲಿದೆ. ಹೀಗಾಗಿ 38,999 ರೂ. ಬೆಲೆಯ ಈ ಫೋನನ್ನು 34,999 ರೂ. ಗೆ ನಿಮ್ಮದಾಗಿಸಬಹುದು.
  2. ಅಂತೆಯೆ 42,999 ರೂ. ಗೆ ಲಾಂಚ್ ಆದ 80W SuperVOOC ಚಾರ್ಜಿಂಗ್‌ ಆವೃತ್ತಿ ಈಗ 38,999 ರೂ. ಗೆ ಮಾರಾಟ ಆಗುತ್ತಿದೆ. 150W SuperVOOC ವೇಗದ ಚಾರ್ಜಿಂಗ್ ಆವೃತ್ತಿ ಮೂಲಬೆಲೆ 43,999 ರೂ. ಆಗಿದ್ದು, ಇದೀಗ ಇದರ ಬೆಲೆ 39,999 ರೂ. ಆಗಿದೆ.
  3. ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ 1,080×2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.
  4. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌ ನೀಡಲಾಗಿದ್ದು ಆಂಡ್ರಾಯ್ಡ್ 12 ಆಧಾರಿತ OxygenOS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಪ್ರೊಸೆಸರ್‌ 20% ಸುಧಾರಿತ GPU ಕಾರ್ಯಕ್ಷಮತೆ, 25% ಸುಧಾರಿತ ವಿದ್ಯುತ್ ದಕ್ಷತೆ ಮತ್ತು 80% ಉತ್ತಮ AI ಕಾರ್ಯಕ್ಷಮತೆಯನ್ನು ನೀಡುತ್ತದೆ.
  5. ಇದನ್ನೂ ಓದಿ
    Image
    ಫೋನ್ ಸ್ಟೋರೇಜ್ ಫುಲ್ ಆಗಿದ್ದರೆ ಟೆನ್ಶನ್ ಬೇಡ: ಈ ಸಿಂಪಲ್ ಟ್ರಿಕ್ ಫಾಲೋ ಮಾಡಿ ಸಾಕು
    Image
    Best Smartphone: 20,000 ರೂ. ಒಳಗೆ ಲಭ್ಯವಿರುವ 108MP ಕ್ಯಾಮೆರಾದ ಬೆಸ್ಟ್ ಸ್ಮಾರ್ಟ್​​ಫೋನ್​ಗಳು ಇಲ್ಲಿದೆ ನೋಡಿ
    Image
    WhatsApp: ವಾಟ್ಸ್​ಆ್ಯಪ್​​​ನಿಂದ ಬೆರಗುಗೊಳಿಸುವ ಫೀಚರ್: ಸ್ಟೇಟಸ್​​ ಹಾಕುವಾಗ ಬರುತ್ತದೆ ಹೊಸ ಆಯ್ಕೆ
    Image
    Bill Gates: ಬಿಲ್ ಗೇಟ್ಸ್ ಶಾಕಿಂಗ್ ಹೇಳಿಕೆ: ನನಗೆ ಯಾವ ಸಂಪತ್ತು ಬೇಡ, ವಿಶ್ವ ಶ್ರೀಮಂತರ ಪಟ್ಟಿಯಿಂದ ಹೊರಗುಳಿಯುತ್ತೇನೆ
  6. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೋನಿ IMX355 ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ GC02M1 ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಇದರಲ್ಲಿ ಅತ್ಯುತ್ತಮ ಕ್ಯಾಮೆರಾ ಕ್ವಾಲಿಟಿ ನೀಡಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL S5K3P9 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅಳವಡಿಸಲಾಗಿದೆ.
  7. ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 150W SuperVOOC ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಇನ್ನು 80W SuperVOOC ವೇಗದ ಚಾರ್ಜಿಂಗ್ ಹೊಂದಿರುವ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
  8. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿದಂತೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆ ಸೇರಿಸಲಾಗಿದೆ.

Published On - 6:45 am, Sat, 16 July 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ