OnePlus 10R: ಭರ್ಜರಿ ಆಫರ್​​ನೊಂದಿಗೆ 150W ಫಾಸ್ಟ್​ ಚಾರ್ಜರ್​ನ ಒನ್‌ಪ್ಲಸ್‌ 10R ಫೋನ್ ಮಾರಾಟ ಆರಂಭ

OnePlus 10R Sale: ಬರೋಬ್ಬರಿ 150W SuperVOOC ವೇಗದ ಚಾರ್ಜಿಂಗ್​ನೊಂದಿಗೆ ಬಿಡುಗಡೆ ಆದ ಒನ್‌ಪ್ಲಸ್‌ 10R ಸ್ಮಾರ್ಟ್‌ಫೋನ್ ಇಂದು (ಮೇ 4) ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಮಧ್ಯಾಹ್ನ 12ಯಿಂದ ಸೇಲ್‌ ಪ್ರಾರಂಭಿಸಿದೆ.

OnePlus 10R: ಭರ್ಜರಿ ಆಫರ್​​ನೊಂದಿಗೆ 150W ಫಾಸ್ಟ್​ ಚಾರ್ಜರ್​ನ ಒನ್‌ಪ್ಲಸ್‌ 10R ಫೋನ್ ಮಾರಾಟ ಆರಂಭ
OnePlus 10R
Follow us
TV9 Web
| Updated By: Vinay Bhat

Updated on:May 04, 2022 | 1:58 PM

ಪ್ರಸಿದ್ಧ ಒನ್​ಪ್ಲಸ್ ಕಂಪನಿ ಭಾರತದಲ್ಲಿ ತಿಂಗಳಿಗೆ ಒಂದರಂತೆ ಹೊಸ ಹೊಸ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಕಳೆದ ತಿಂಗಳು ದೇಶದಲ್ಲಿ ಬಿಡುಗಡೆ ಮಾಡಿದ್ದ ಬಹುನಿರೀಕ್ಷಿತ ಒನ್​ಪ್ಲಸ್ 10 ಪ್ರೊ 5ಜಿ (OnePlus 10 Pro 5G) ಸ್ಮಾರ್ಟ್​​ಫೋನ್ ಈಗಲೂ ಧೂಳೆಬ್ಬಿಸುತ್ತಿದೆ. ಇದರ ಬೆನ್ನಲ್ಲೇ ಕಳೆದ ವಾರ ಮತ್ತೊಂದು ಹೊಸ ಮೊಬೈಲ್ ಮಾರುಕಟ್ಟೆಗೆ ಪರಿಚಯಿಸಿತ್ತು. ಅದುವೇ ಒನ್‌ಪ್ಲಸ್‌ 10ಆರ್ (OnePlus 10R). ಈ ಸ್ಮಾರ್ಟ್‌ಫೋನ್‌ ಇದೀಗ ಭಾರತದಲ್ಲಿ ಮೊದಲ ಸೇಲ್ ಕಾಣುತ್ತಿದೆ. ಬರೋಬ್ಬರಿ 150W SuperVOOC ವೇಗದ ಚಾರ್ಜಿಂಗ್​ನೊಂದಿಗೆ ಬಿಡುಗಡೆ ಆದ ಈ ಸ್ಮಾರ್ಟ್‌ಫೋನ್ ಇಂದು (ಮೇ 4) ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಲಕ ಮಧ್ಯಾಹ್ನ 12ಯಿಂದ ಸೇಲ್‌ ಪ್ರಾರಂಭಿಸಿದೆ. ಇದರಲ್ಲಿ 80W SuperVOOC ಚಾರ್ಜಿಂಗ್‌ ಆವೃತ್ತಿಯಲ್ಲಿ ಪರಿಚಯಿಸಲಾಗಿದೆ. ಹಾಗಾದ್ರೆ ಈ ಬೊಂಬಾಟ್ ಸ್ಮಾರ್ಟ್​​ಫೋನ್​​ನ ಬೆಲೆ ಎಷ್ಟು?, ಆಫರ್ ಏನಿದೆ?, ಇದರ ಫೀಚರ್ಸ್​​ ಹೇಗಿದೆ ಎಂಬುದನ್ನು ನೋಡೋಣ.

  1. ಭಾರತದಲ್ಲಿ ಒನ್‌ಪ್ಲಸ್‌ 10R 5G 80W SuperVOOC ಚಾರ್ಜಿಂಗ್‌ ಮಾದರಿಯ ಸ್ಮಾರ್ಟ್‌ಫೋನಿನ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 38,999 ರೂ. ನಿಗದಿ ಮಾಡಲಾಗಿದೆ. ಹಾಗೆಯೇ 12GB RAM ಮತ್ತು 256GB ರೂಪಾಂತರದ ಬೆಲೆ 42,999 ರೂ.
  2. ಒನ್‌ಪ್ಲಸ್‌ 10R 5G ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 12GB RAM + 256GB ಕಾನ್ಫಿಗರೇಶನ್‌ ಬೆಲೆ 43,999 ರೂ. ಆಗಿದೆ. ಇದರಲ್ಲಿ 80W ಚಾರ್ಜಿಂಗ್‌ ಆಯ್ಕೆಯ ಫೋನ್‌ ಫಾರೆಸ್ಟ್ ಗ್ರೀನ್ ಮತ್ತು ಸಿಯೆರಾ ಬ್ಲಾಕ್ ಬಣ್ಣಗಳಲ್ಲಿ ಬರಲಿದೆ. ಆದರೆ 150W ಚಾರ್ಜಿಂಗ್ ಹೊಂದಿರುವ ಫೋನ್‌ ಸಿಯೆರಾ ಬ್ಲ್ಯಾಕ್‌ ಬಣ್ಣದಲ್ಲಿ ಲಭ್ಯವಾಗಲಿದೆ.
  3. ಈ ಸ್ಮಾರ್ಟ್​​ಫೋನ್ ಇಂದಿನಿಂದ ಅಮೆಜಾನ್, ಒನ್​ಪ್ಲಸ್ ಸ್ಟೋರ್, ಒನ್​ಪ್ಲಸ್ ಆ್ಯಪ್ ಮೂಲಕ ಖರೀದಿಗೆ ಸಿಗಲಿದೆ. ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್​ ಮೂಲಕ ಖರೀದಿ ಮಾಡಿದೆಡ 2,000 ರೂ. ಗಳ ರಿಯಾಯಿತಿ ಸಿಗಲಿದೆ.
  4. ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ 1,080×2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ.
  5. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌ ನೀಡಲಾಗಿದ್ದು ಆಂಡ್ರಾಯ್ಡ್ 12 ಆಧಾರಿತ OxygenOS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಪ್ರೊಸೆಸರ್‌ 20% ಸುಧಾರಿತ GPU ಕಾರ್ಯಕ್ಷಮತೆ, 25% ಸುಧಾರಿತ ವಿದ್ಯುತ್ ದಕ್ಷತೆ ಮತ್ತು 80% ಉತ್ತಮ AI ಕಾರ್ಯಕ್ಷಮತೆಯನ್ನು ನೀಡುತ್ತದೆ.
  6. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೋನಿ IMX355 ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ GC02M1 ಮ್ಯಾಕ್ರೋ ಲೆನ್ಸ್‌ ಹೊಂದಿದೆ. ಇದರಲ್ಲಿ ಅತ್ಯುತ್ತಮ ಕ್ಯಾಮೆರಾ ಕ್ವಾಲಿಟಿ ನೀಡಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL S5K3P9 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅಳವಡಿಸಲಾಗಿದೆ.
  7. ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 150W SuperVOOC ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಇನ್ನು 80W SuperVOOC ವೇಗದ ಚಾರ್ಜಿಂಗ್ ಹೊಂದಿರುವ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
  8. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿದಂತೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆ ಸೇರಿಸಲಾಗಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:58 pm, Wed, 4 May 22

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?