OnePlus Nord 2T 5G: 16GB RAM, 150W ಫಾಸ್ಟ್ ಚಾರ್ಜಿಂಗ್: ಒನ್ಪ್ಲಸ್ ನಾರ್ಡ್ 2T ಸ್ಮಾರ್ಟ್‌ಫೋನ್ ಬೆಲೆ ಬಹಿರಂಗ
ಆಗಸ್ಟ್ ತಿಂಗಳಲ್ಲಿ ಬಿಡುಗಡೆಗೊಳ್ಳಲಿರುವ ಒನ್ಪ್ಲಸ್ ನಾರ್ಡ್ 2T ಬರೋಬ್ಬರಿ 128GB RAM ಆಯ್ಕೆಯೊಂದಿಗೆ ಬರಲಿದೆ. ಅಷ್ಟೇ ಅಲ್ಲದೆ 150W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ನೀಡಲಿದೆ ಎಂದು ಹೇಳಲಾಗಿದೆ.
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಒನ್ಪ್ಲಸ್ (OnePlus) ಕಂಪನಿ ಶವೋಮಿಯನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟಕ್ಕೇರುವ ಎಲ್ಲ ಸಾಧ್ಯತೆ ಎದ್ದು ಕಾಣುತ್ತಿದೆ. ದೇಶದಲ್ಲಿ ಒಂದರ ಹಿಂದೆ ಒಂದರಂತೆ ವಿಶೇಷವಾದ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿರುವ ಒನ್ಪ್ಲಸ್ ಇದೀಗ ಮತ್ತೊಂದು ಮೊಬೈಲ್ ಅನಾವರಣಕ್ಕೆ ಸಿದ್ಧತೆ ನಡೆಸುತ್ತಿದೆ. ಅದುವೇ ಒನ್ಪ್ಲಸ್ ನಾರ್ಡ್ 2ಟಿ 5ಜಿ (OnePlus Nord 2T). ಆಗಸ್ಟ್ ತಿಂಗಳಲ್ಲಿ ಬಿಡುಗಡೆಗೊಳ್ಳಲಿರುವ ಈ ಸ್ಮಾರ್ಟ್‌ಫೋನ್ (Smartphone) ಬರೋಬ್ಬರಿ 128GB RAM ಆಯ್ಕೆಯೊಂದಿಗೆ ಬರಲಿದೆ. ಅಷ್ಟೇ ಅಲ್ಲದೆ 150W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ನೀಡಲಿದೆ ಎಂದು ಹೇಳಲಾಗಿದೆ. ಇದರ ಜೊತೆಗೆ ಈ ಒನ್ಪ್ಲಸ್ ನಾರ್ಡ್ 2T ಸ್ಮಾರ್ಟ್ಫೋನಿನ ಬೆಲೆ ಸೇರಿದಂತೆ ಕೆಲ ಫೀಚರ್ಗಳು ಆನ್ಲೈನ್ನಲ್ಲಿ ಸೋರಿಕೆಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ ನೋಡಿ.
- ಒನ್ಪ್ಲಸ್ ನಾರ್ಡ್ 2T ಸ್ಮಾರ್ಟ್‌ಫೋನ್ ಭಾರತದಲ್ಲಿ ಒಟ್ಟು ಮೂರು ಮಾದರಿಯ ಆಯ್ಕೆಯಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ. ಇದರಲ್ಲಿ ಒಂದು 16GB RAM ಆಯ್ಕೆ ಇದ್ದರೆ ನಂತರ 8GB RAM ಮತ್ತು 128GB ಸ್ಟೋರೇಜ್ ಆಯ್ಕೆ ಹಾಗೂ 12GB RAM ಮತ್ತು 256GB ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆಯಂತೆ.
- ಒನ್ಪ್ಲಸ್ ನಾರ್ಡ್ 2T ಫೋನಿಗೆ ಭಾರತದಲ್ಲಿ ಆರಂಭಿಕ ಬೆಲೆ 49,999 ರೂ. ಎಂಬ ಸಂಗತಿ ಸೋರಿಕೆಯಾಗಿದೆ. ಇದರ ಜೊತೆಗೆ 1,500 ರೂ. ಗಳ ಕಾರ್ಡ್ ಆಫರ್ ಕೂಡ ಇರಲಿದೆಯಂತೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಸೇಲ್ ಕಾಣಲಿದೆ.
- ಈ ಸ್ಮಾರ್ಟ್‌ಫೋನ್ 1,440*3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ FHD+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಪಡೆದಿದೆ. 120Hz ರಿಫ್ರೆಶ್ ರೇಟ್ನಿಂದ ಕೂಡಿದೆ.
- ಆಕ್ಟಾ–ಕೋರ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಆಕ್ಸಿಜನ್ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
- ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ–ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೊ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ.
- ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
- ದೀರ್ಘ ಸಮಯ ಬಾಳಿಕೆ ಬರುವ ಬಲಿಷ್ಠವಾದ 4,800mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು ಬರೋಬ್ಬರಿ 150W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದುಕೊಂಡಿದೆ. ಇನ್ನು 50W ಏರ್‌ವೂಕ್ ವಾಯರ್‌ಲೆಸ್ ಚಾರ್ಜಿಂಗ್ ಇದ್ದರೂ ಅಚ್ಚರಿ ಪಡಬೇಕಿಲ್ಲ.
ಇದನ್ನೂ ಓದಿ