AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OnePlus 10T: 150W ಫಾಸ್ಟ್ ಚಾರ್ಜರ್​ನ ಒನ್​ಪ್ಲಸ್ 10T ಸ್ಮಾರ್ಟ್​​ಫೋನ್ ಭಾರತದಲ್ಲಿ ಬಿಡುಗಡೆ: ಬೆಲೆ ಎಷ್ಟು?

ಒನ್​ಪ್ಲಸ್ ಇದೀಗ ಒನ್​ಪ್ಲಸ್ 10ಟಿ 5ಜಿ (OnePlus Nord 10T 5G) ಫೋನನ್ನು ರಿಲೀಸ್ ಮಾಡಿದೆ. ಸಾಕಷ್ಟು ಬಲಿಷ್ಠವಾಗಿರುವ ಈ ಸ್ಮಾರ್ಟ್​​ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್‌ ಜೊತೆಗೆ 150W ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ.

OnePlus 10T: 150W ಫಾಸ್ಟ್ ಚಾರ್ಜರ್​ನ ಒನ್​ಪ್ಲಸ್ 10T ಸ್ಮಾರ್ಟ್​​ಫೋನ್ ಭಾರತದಲ್ಲಿ ಬಿಡುಗಡೆ: ಬೆಲೆ ಎಷ್ಟು?
OnePlus 10T 5G
TV9 Web
| Updated By: Vinay Bhat|

Updated on:Aug 04, 2022 | 12:08 PM

Share

ಈ ಆಗಸ್ಟ್ ತಿಂಗಳಲ್ಲಿ ಭಾರತಕ್ಕೆ ಸಾಕಷ್ಟು ಸ್ಮಾರ್ಟ್​​ಫೋನ್​ಗಳು (Smartphone) ಲಗ್ಗೆಯಿಡಲಿದೆ. ಇದರ ಮೊದಲ ಭಾಗವಾಗಿ ಒನ್​ಪ್ಲಸ್ ಕಂಪನಿ ತನ್ನ ಹೊಸ ಫೋನೊಂದನ್ನು ಭಾರತದಲ್ಲಿ ಅನಾವರಣ ಮಾಡಿದೆ. ದೇಶದಲ್ಲಿ ಒಂದರ ಹಿಂದೆ ಒಂದರಂತೆ ವಿಶೇಷವಾದ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು ಬಿಡುಗಡೆ ಮಾಡುತ್ತಿರುವ ಒನ್​ಪ್ಲಸ್ ಇದೀಗ ಒನ್​ಪ್ಲಸ್ 10ಟಿ 5ಜಿ (OnePlus Nord 10T 5G) ಫೋನನ್ನು ರಿಲೀಸ್ ಮಾಡಿದೆ. ಸಾಕಷ್ಟು ಬಲಿಷ್ಠವಾಗಿರುವ ಈ ಸ್ಮಾರ್ಟ್​​ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಜೊತೆಗೆ 150W ವೇಗದ ಚಾರ್ಜಿಂಗ್ (150W Fast Charging) ಬೆಂಬಲವನ್ನು ನೀಡುವ ಒನ್‌ಪ್ಲಸ್‌ ಕಂಪನಿಯ ಮೊದಲ ಸ್ಮಾರ್ಟ್‌ಫೋನ್‌ ಎನಿಸಿಕೊಂಡಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಇತರೆ ಫೀಚರ್ಸ್​ ಏನು? ಎಂಬ ಕುರಿತ ಎಲ್ಲ ಮಾಹಿತಿ ಇಲ್ಲಿದೆ.

  1. ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ 2,412×1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಬಲವನ್ನು ಪಡೆದುಕೊಂಡಿರುವ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120hz ಸ್ಕ್ರೀನ್ ರಿಫ್ರೆಶ್ ರೇಟ್‌ ಅನ್ನು ಸಹ ನೀಡಲಿದೆ.
  2. ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಕ್ಸಿಜನ್ OS 12.1 ಜೊತೆಗೆ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ರನ್‌ ಆಗಲಿದೆ. ಅಲ್ಲದೆ ಈ ವರ್ಷದ ಅಂತ್ಯದ ವೇಳೆಗೆ ಈ ಫೋನ್‌ OxygenOS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದೆ.
  3. ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ.
  4. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್‌ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ.
  5. ಇದನ್ನೂ ಓದಿ
    Image
    Amazon Great Freedom Festival 2022 Sale: ಅಮೆಜಾನ್​ನಿಂದ ಸರ್​ಪ್ರೈಸ್: ನೂತನ ಸೇಲ್​ಗೂ ಮುನ್ನ ನೀಡಿದೆ ಬಂಪರ್ ಆಫರ್
    Image
    5G Service: ಆಗಸ್ಟ್​ನಿಂದ ಭಾರತದಲ್ಲಿ ಏರ್​ಟೆಲ್ 5G ಸೇವೆ: ಮೊದಲ ಗುತ್ತಿಗೆ ಎರಿಕ್​ಸನ್ ಪಾಲು
    Image
    ಗೂಗಲ್ ಎಚ್ಚರಿಕೆ: ನಿಮ್ಮ ಮೊಬೈಲ್​ನಲ್ಲಿ ಈ ಆ್ಯಪ್​ ಇದ್ದರೆ ತಕ್ಷಣವೇ ಡಿಲೀಟ್ ಮಾಡಿ..!
    Image
    Galaxy A22 5G: ಗ್ಯಾಲಕ್ಸಿ A22 ಖರೀದಿಗೆ ಇದೇ ಬೆಸ್ಟ್ ಟೈಮ್: ಸ್ಯಾಮ್​ಸಂಗ್​ನ ಮತ್ತೊಂದು ​​ಫೋನ್ ಬೆಲೆಯಲ್ಲಿ ಇಳಿಕೆ
  6. 4800mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು ಇದು 150W SUPERVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕೇವಲ 19 ನಿಮಿಷಗಳಲ್ಲಿ ಫೋನ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.
  7. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿದೆ. ಇನ್ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಮತ್ತು ಫೇಸ್ ಅನ್‌ಲಾಕ್ ಫೀಚರ್ ನೀಡಲಾಗಿದೆ.
  8. ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ ಮೂರು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 8GB RAM ಮತ್ತು 128GB ಇಂಟರ್‌ ಸ್ಟೋರೇಜ್ ಮಾದರಿಗೆ 49,999ರೂ. ಬೆಲೆಯಲ್ಲಿ ಪ್ರಾರಂಭವಾಗುತ್ತದೆ.
  9. 12GB RAM + 256GB ಸ್ಟೋರೇಜ್ ಮಾದರಿಗೆ 54,999ರೂ. ಮತ್ತು 16GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯು 55,999ರೂ. ಬೆಲೆ ನಿಗದಿ ಮಾಡಲಾಗಿದೆ. ಇದೇ ಆಗಸ್ಟ್ 6 ರಂದು ಅಮೆಜಾನ್​ನಲ್ಲಿ ಮೊದಲ ಸೇಲ್ ಕಾಣಲಿದೆ.

Published On - 12:08 pm, Thu, 4 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ