Kannada News Technology OnePlus 10T Sale started via Amazon price can be reduced by almost Rs 5000 check offer and specs
OnePlus 10T: ಮೊದಲ ಸೇಲ್ನಲ್ಲೇ ಬಂಪರ್ ಆಫರ್: ಹೊಸ ಒನ್‌ಪ್ಲಸ್ 10T ಮೇಲೆ 5,000 ರೂ. ಡಿಸ್ಕೌಂಟ್
OnePlus 10T First Sale: ಸಾಕಷ್ಟು ಬಲಿಷ್ಠವಾಗಿರುವ ಒನ್‌ಪ್ಲಸ್ 10ಟಿ 5ಜಿ (OnePlus Nord 10T 5G) ಇಂದು ಮೊದಲ ಸೇಲ್ ಕಾಣುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಖರೀದಿಗೆ ಸಿಗುತ್ತಿದ್ದು, ಬಂಪರ್ ಆಫರ್ ಕೂಡ ನೀಡಲಾಗಿದೆ.
OnePlus 10T
Follow us on
ಆಗಸ್ಟ್ ತಿಂಗಳ ಮೊದಲ ವಾರದಲ್ಲೇ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಅನೇಕ ಮೊಬೈಲ್ಗಳು ಲಗ್ಗೆಯಿಟ್ಟಿವೆ. ಇದರಲ್ಲಿ ಒನ್‌ಪ್ಲಸ್ ಕಂಪನಿಯ ಫೋನ್ ಕೂಡ ಇದೆ. ಭಾರತದಲ್ಲಿ ದೇಶದಲ್ಲಿ ಒಂದರ ಹಿಂದೆ ಒಂದರಂತೆ ವಿಶೇಷವಾದ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿರುವ ಒನ್‌ಪ್ಲಸ್ ಕಂಪನಿ ಮೊನ್ನೆಯಷ್ಟೆ ಒನ್‌ಪ್ಲಸ್10ಟಿ 5ಜಿ (OnePlus Nord 10T 5G) ಫೋನನ್ನು ರಿಲೀಸ್ ಮಾಡಿತ್ತು. ಸಾಕಷ್ಟು ಬಲಿಷ್ಠವಾಗಿರುವ ಈ ಸ್ಮಾರ್ಟ್‌ಫೋನ್ ಇಂದು ಮೊದಲ ಸೇಲ್ ಕಾಣುತ್ತಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ (Amazon) ಖರೀದಿಗೆ ಸಿಗುತ್ತಿದ್ದು, ಬಂಪರ್ ಆಫರ್ ಕೂಡ ನೀಡಲಾಗಿದೆ. ಈ ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8+ Gen 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. ಜೊತೆಗೆ 150W ವೇಗದ ಚಾರ್ಜಿಂಗ್ (150W Fast Charging) ಬೆಂಬಲವನ್ನು ಪಡೆದುಕೊಂಡಿದೆ.
ಭಾರತದಲ್ಲಿ ಒನ್‌ಪ್ಲಸ್ 10T ಸ್ಮಾರ್ಟ್‌ಫೋನ್ ಮೂರು ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಮಾದರಿಗೆ 49,999ರೂ. ಬೆಲೆಯಲ್ಲಿ ಪ್ರಾರಂಭವಾಗುತ್ತದೆ.
ಅಂತೆಯೆ 12GB RAM + 256GB ಸ್ಟೋರೇಜ್ ಮಾದರಿಗೆ 54,999ರೂ. ಮತ್ತು 16GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯು 55,999ರೂ. ಬೆಲೆ ನಿಗದಿ ಮಾಡಲಾಗಿದೆ.
ಆಕರ್ಷಕ ಆಫರ್ ಕೂಡ ನೀಡಲಾಗಿದ್ದು, ICICI ಬ್ಯಾಂಕ್ ಡೆಬಿಡ್ ಅಥವಾ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 5000 ರೂ. ಗಳ ಡಿಸ್ಕೌಂಟ್ ಸಿಗಲಿದೆ. 3000 ರೂ. ವರೆಗೆ ಎಕ್ಸ್ಚೇಂಜ್ ಆಫರ್ ನೀಡಲಾಗಿದೆ.
ಈ ಸ್ಮಾರ್ಟ್‌ಫೋನ್ 2,412×1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಬಲವನ್ನು ಪಡೆದುಕೊಂಡಿರುವ 6.7 ಇಂಚಿನ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120hz ಸ್ಕ್ರೀನ್ ರಿಫ್ರೆಶ್ ರೇಟ್ ಅನ್ನು ಸಹ ನೀಡಲಿದೆ.
ಇದನ್ನೂ ಓದಿ
ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಕ್ಸಿಜನ್ OS 12.1 ಜೊತೆಗೆ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ರನ್ ಆಗಲಿದೆ. ಅಲ್ಲದೆ ಈ ವರ್ಷದ ಅಂತ್ಯದ ವೇಳೆಗೆ ಈ ಫೋನ್ OxygenOS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದೆ.
ಒನ್‌ಪ್ಲಸ್ 10T ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ.
ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ–ವೈಡ್ ಲೆನ್ಸ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 16MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ.
4800mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು ಇದು 150W SUPERVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕೇವಲ 19 ನಿಮಿಷಗಳಲ್ಲಿ ಫೋನ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.
ಕನೆಕ್ಟಿವಿಟಿ ಆಯ್ಕೆಗಳಲ್ಲಿ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿದೆ. ಇನ್–ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಫೇಸ್ ಅನ್‌ಲಾಕ್ ಫೀಚರ್ ನೀಡಲಾಗಿದೆ.