ಅಭಿಮಾನಿಗಳ ನಿದ್ದೆ ಕದ್ದಿದ್ದ ಕೆಂಪು ಬಣ್ಣದ ಒನ್​ಪ್ಲಸ್ 11R 5G ಸ್ಮಾರ್ಟ್​ಫೋನ್ ಬಿಡುಗಡೆ

OnePlus 11R 5G Now Available Solar Red Colour: ಒನ್​ಪ್ಲಸ್ 11R 5G ಸ್ಮಾರ್ಟ್​ಫೋನ್ ಸೋಲಾರ್ ರೆಡ್ ಎಂಬ ಹೊಸ ಬಣ್ಣದ ರೂಪಾಂತರದಲ್ಲಿ ಬಿಡುಗಡೆ ಆಗಿದೆ. ಇದು 18GB ರೂಪಾಂತರದಲ್ಲಿ ಮಾತ್ರ ಲಭ್ಯವಿದೆ. ಈ ಫೋನಿನ ಬೆಲೆಯು ರೂ. 34,999 ಆಗಿದೆ. ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸಮಯದಲ್ಲಿ ಫೋನ್ ಭಾರತದಲ್ಲಿ ಮಾರಾಟ ಕಾಣಲಿದೆ.

ಅಭಿಮಾನಿಗಳ ನಿದ್ದೆ ಕದ್ದಿದ್ದ ಕೆಂಪು ಬಣ್ಣದ ಒನ್​ಪ್ಲಸ್ 11R 5G ಸ್ಮಾರ್ಟ್​ಫೋನ್ ಬಿಡುಗಡೆ
OnePlus 11R 5G Solar Red
Follow us
Vinay Bhat
|

Updated on: Oct 06, 2023 | 3:44 PM

ಒನ್​ಪ್ಲಸ್ ಕಂಪನಿ ಈ ವರ್ಷ ಫೆಬ್ರವರಿಯಲ್ಲಿ ಒನ್​ಪ್ಲಸ್ 11R 5G (OnePlus 11R 5G) ಸ್ಮಾರ್ಟ್​ಫೋನ್ ಅನ್ನು ಎರಡು ಬಣ್ಣದ ಆಯ್ಕೆಗಳಲ್ಲಿ ಬಿಡುಗಡೆ ಮಾಡಿತ್ತು. ಈಗ, ಕಂಪನಿಯು ಈ ಹ್ಯಾಂಡ್‌ಸೆಟ್ ಅನ್ನು ಸೋಲಾರ್ ರೆಡ್ ಎಂಬ ಹೊಸ ಬಣ್ಣದ ರೂಪಾಂತರದಲ್ಲಿ ಪರಿಚಯಿಸಿದೆ. ಇದು ಸ್ನಾಪ್‌ಡ್ರಾಗನ್ 8+ Gen 1 SoC ಮತ್ತು ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯೊಂದಿಗೆ ಬರುತ್ತದೆ. ಇ-ಕಾಮರ್ಸ್ ಸೈಟ್ ನೀಡುವ ಅತಿದೊಡ್ಡ ಮಾರಾಟಗಳಲ್ಲಿ ಒಂದಾದ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸಮಯದಲ್ಲಿ ಫೋನ್ ಭಾರತದಲ್ಲಿ ಮಾರಾಟ ಕಾಣಲಿದೆ.

ಭಾರತದಲ್ಲಿ ಒನ್​ಪ್ಲಸ್ 11R 5G ಬೆಲೆ:

ಒನ್​ಪ್ಲಸ್ 11R 5G ಸ್ಮಾರ್ಟ್​ಫೋನ್​ನ 8GB + 12GB ರೂಪಾಂತರದ ಬೆಲೆ ರೂ. 39,999 ಇದೆ. ಅಂತೆಯೆ 16GB + 256GB ಮತ್ತು 18GB + 512GB ಸ್ಟೋರೇಜ್​ಗೆ ಕ್ರಮವಾಗಿ ರೂ. 44,999 ಮತ್ತು ರೂ. 45,999. ಹೊಸ ಸೋಲಾರ್ ರೆಡ್ ಕಲರ್‌ 18GB ರೂಪಾಂತರದಲ್ಲಿ ಮಾತ್ರ ಲಭ್ಯವಿದೆ. ಈ ಫೋನಿನ ಬೆಲೆಯು ರೂ. 34,999 ಆಗಿದೆ. ಈ ಫೋನ್ ಪ್ರಸ್ತುತ ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ – ಗ್ಯಾಲಟಿಕ್ ಸಿಲ್ವರ್, ಸೋನಿಕ್ ಬ್ಲ್ಯಾಕ್ ಮತ್ತು ಸೋಲಾರ್ ರೆಡ್.

ಒನ್​ಪ್ಲಸ್ 11R 5G ಫೀಚರ್ಸ್:

ಒನ್​ಪ್ಲಸ್ 11R 5G ಫೋನ್ 6.74-ಇಂಚಿನ ಪೂರ್ಣ-HD+ (2772×1240) AMOLED ಡಿಸ್‌ಪ್ಲೇಯನ್ನು ಹೊಂದಿದ್ದು, 40Hz-120Hz ನ ಅಡಾಪ್ಟಿವ್ ಡೈನಾಮಿಕ್ ರಿಫ್ರೆಶ್ ದರದೊಂದಿಗೆ ಬರುತ್ತದೆ. 1000Hz ವರೆಗಿನ ಟಚ್ ಸ್ಯಾಂಪಲ್ ದರ ಮತ್ತು ಪಿಕ್ಸೆಲ್ 5 ಸಾಂದ್ರತೆಯ ಗರಿಷ್ಠ ಸಾಂದ್ರತೆ ಇದೆ. ಈ ಫೋನ್ ಕ್ವಾಲ್ಕಂ ಸ್ನಾಪ್​ಡ್ರಾಗನ್ 8+ Gen 1 SoC ನಿಂದ ಚಾಲಿತವಾಗಿದೆ ಮತ್ತು ಆಂಡ್ರಾಯ್ಡ್ 13-ಆಧಾರಿತ OxygenOS ನೊಂದಿಗೆ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ
Image
ಪಿನ್ ಚಾಟ್: ವಾಟ್ಸ್​ಆ್ಯಪ್​ನಿಂದ ಸದ್ದಿಲ್ಲದೆ ಅಚ್ಚರಿಯ ಫೀಚರ್
Image
ಪೋಕೋ X5 ಪ್ರೊ ಮೇಲೆ ದಾಖಲೆಯ ರಿಯಾಯಿತಿ: ಈ ಆಫರ್ ಮಿಸ್ ಮಾಡ್ಬೇಡಿ
Image
ವಿಶ್ವಕಪ್ ಶುರುವಾಗುತ್ತಿದ್ದಂತೆ ಜಿಯೋದಿಂದ ಊಹಿಸಲಾಗದ ಆಫರ್
Image
ಏಷ್ಯನ್ ಗೇಮ್ಸ್​ನಲ್ಲಿ ಫೈನಲ್​ಗೆ ಲಗ್ಗೆಯಿಟ್ಟ ಭಾರತ ಕ್ರಿಕೆಟ್ ತಂಡ

ಆನ್​ಲೈನ್ ವಂಚಕರಿಂದ ಹಣ ಕಳೆದುಕೊಂಡರೆ ತಕ್ಷಣ ಹೀಗೆ ಮಾಡಿ: ಹಣ ಪುನಃ ಪಡೆಯಬಹುದು

ಕ್ಯಾಮೆರಾ ವಿಚಾರಕ್ಕೆ ಬಂದರೆ, ಒನ್​ಪ್ಲಸ್ 11R 5Gಯ ಟ್ರಿಪಲ್ ಹಿಂಬದಿಯ ಕ್ಯಾಮೆರಾ ಘಟಕವು 50-ಮೆಗಾಪಿಕ್ಸೆಲ್ ಸೋನಿ IMX890 ಪ್ರಾಥಮಿಕ ಸಂವೇದಕದಿಂದ ಕೂಡಿದೆ. ಜೊತೆಗೆ 8-ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸಂವೇದಕ ಮತ್ತು 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ. ಮುಂಭಾಗದ ಕ್ಯಾಮೆರಾ ಡಿಸ್ ಪ್ಲೇಯ ಮೇಲ್ಭಾಗದಲ್ಲಿದ್ದು, ಪಂಚ್-ಹೋಲ್ ಸ್ಲಾಟ್​ನೊಂದಿಗೆ 16-ಮೆಗಾಪಿಕ್ಸೆಲ್ ಸಂವೇದಕವನ್ನು ಹೊಂದಿದೆ.

ಈ ಸ್ಮಾರ್ಟ್​ಫೋನ್ 100W SUPERVOOC S ಫ್ಲ್ಯಾಷ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಇದು 5G, 4G, Wi-Fi, ಬ್ಲೂಟೂತ್ 5.3, NFC ಮತ್ತು GPS ಸಂಪರ್ಕವನ್ನು ಸಹ ಬೆಂಬಲಿಸುತ್ತದೆ. ಭದ್ರತೆಗಾಗಿ, ಹ್ಯಾಂಡ್‌ಸೆಟ್‌ನಲ್ಲಿ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕವನ್ನು ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್