OnePlus 12 Series: ಎರಡೇ ದಿನ ಬಾಕಿ: ಭಾರತಕ್ಕೆ ಬರುತ್ತಿದೆ ಒನ್​ಪ್ಲಸ್​ನ ಎರಡು ಬಲಿಷ್ಠ ಸ್ಮಾರ್ಟ್​ಫೋನ್ಸ್: ಯಾವುದು ನೋಡಿ

OnePlus 12 and OnePlus 12R: ಒನ್​ಪ್ಲಸ್ ಕಂಪನಿಯ ಅಧಿಕೃತ ಯೂಟ್ಯೂಬ್ ಚಾನಲ್‌ನಲ್ಲಿ ಒನ್​ಪ್ಲಸ್ 12 ಮತ್ತು ಒನ್​ಪ್ಲಸ್ 12R ಸ್ಮಾರ್ಟ್​ಫೋನ್​ನ ಬಿಡುಗಡೆ ಕಾರ್ಯಕ್ರಮವನ್ನು ವೀಕ್ಷಿಸಬಹುದು. ಇದಕ್ಕಾಗಿ ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಸಮಯವನ್ನು ನಿಗದಿಪಡಿಸಲಾಗಿದೆ.

OnePlus 12 Series: ಎರಡೇ ದಿನ ಬಾಕಿ: ಭಾರತಕ್ಕೆ ಬರುತ್ತಿದೆ ಒನ್​ಪ್ಲಸ್​ನ ಎರಡು ಬಲಿಷ್ಠ ಸ್ಮಾರ್ಟ್​ಫೋನ್ಸ್: ಯಾವುದು ನೋಡಿ
oneplus 12 series

Updated on: Jan 21, 2024 | 12:09 PM

ಈ ವಾರ ಸ್ಯಾಮ್​ಸಂಗ್ ಕಂಪನಿ ತನ್ನ ಗ್ಯಾಲಕ್ಸಿ S24 ಸರಣಿಯನ್ನು ಬಿಡುಗಡೆ ಮಾಡಿದ ನಂತರ, ಚೀನಾದ ಸ್ಮಾರ್ಟ್‌ಫೋನ್ ತಯಾರಕ ಒನ್​ಪ್ಲಸ್ ಟೆಕ್ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ. ಜನವರಿ ಆರಂಭದಿಂದ, ಭಾರತ ಸೇರಿದಂತೆ ಪ್ರಪಂಚದಾದ್ಯಂತ ಭಾರೀ ಸದ್ದು ಮಾಡುತ್ತಿರುವ ಒನ್​ಪ್ಲಸ್ 12 (OnePlus 12) ಮತ್ತು ಒನ್​ಪ್ಲಸ್ 12R ಅನ್ನು ಒನ್​ಪ್ಲಸ್ ಕಂಪನಿ ಬಿಡುಗಡೆ ಮಾಡಲು ತಯಾರಾಗಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಇದೇ ಜನವರಿ 23 ರಂದು ಜಾಗತಿಕವಾಗಿ ಅನಾವರಣಗೊಳ್ಳಲಿದೆ. ಬಿಡುಗಡೆಯಾಗಲಿದೆ.

ಒನ್​ಪ್ಲಸ್ ಕಂಪನಿಯ ಅಧಿಕೃತ ಯೂಟ್ಯೂಬ್ ಚಾನಲ್‌ನಲ್ಲಿ ಬಿಡುಗಡೆ ಕಾರ್ಯಕ್ರಮವನ್ನು ವೀಕ್ಷಿಸಬಹುದು. ಇದಕ್ಕಾಗಿ ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಸಮಯವನ್ನು ನಿಗದಿಪಡಿಸಲಾಗಿದೆ. ಈವೆಂಟ್ ಲೈವ್‌ಸ್ಟ್ರೀಮ್ ವೀಕ್ಷಿಸಬಹುದು. ಒನ್​ಪ್ಲಸ್ 12 ಮತ್ತು ಒನ್​ಪ್ಲಸ್ 12R ಸ್ಮಾರ್ಟ್​ಫೋನ್​ಗಳ ಕೆಲ ಫೀಚರ್ಸ್ ಸೋರಿಕೆ ಆಗಿದ್ದು, ಈ ಕುರಿತ ಮಾಹಿತಿ ಇಲ್ಲಿದೆ.

ವೊಡಾಫೋನ್-ಐಡಿಯಾ ಬಳಕೆದಾರರಿಗೆ ಗುಡ್ ನ್ಯೂಸ್: ಈ ರೀಚಾರ್ಜ್ ಪ್ಲಾನ್‌ನಲ್ಲಿ ಹೆಚ್ಚಿನ ಡೇಟಾ

ಇದನ್ನೂ ಓದಿ
ಚಾರ್ಜರ್ ಅಸಲಿ ಅಥವಾ ನಕಲಿ ಫೋನ್ ಗುರುತಿಸುವುದು ಹೇಗೆ?: ಇಲ್ಲಿದೆ ಟ್ರಿಕ್
ಒಲ್ಡ್ ಮೊಬೈಲ್ ಮಾರಾಟ ಮಾಡುವ ಮುನ್ನ ಇಲ್ಲಿ ನೋಡಿ
ನಿಮ್ಮ ಸ್ಮಾರ್ಟ್​ಫೋನ್ ಮಾರಾಟ ಮಾಡುವ ಮುನ್ನ ಎಚ್ಚರ: ತಪ್ಪದೆ ಹೀಗೆ ಮಾಡಿ
ಲೇಟೆಸ್ಟ್ ಸ್ಮಾರ್ಟ್​ಫೋನ್ ಲಾಂಚ್ ಮಾಡಿದ ಸ್ಯಾಮ್​ಸಂಗ್

ಒನ್​ಪ್ಲಸ್ 12

ಒನ್​ಪ್ಲಸ್ 12 ಸ್ಮಾರ್ಟ್​ಫೋನ್ 6.82 ಇಂಚಿನ ಡಿಸ್ಪ್ಲೇಯನ್ನು ಹೊಂದಿರಲಿದ್ದು ಅದು LTPO ಪ್ಯಾನೆಲ್ ಆಗಿರುತ್ತದೆ. ಇದು 120Hz ರಿಫ್ರೆಶ್ ರೇಟ್ ಮತ್ತು QuadHD ಪ್ಲಸ್ ರೆಸಲ್ಯೂಶನ್ ಹೊಂದಿದೆ. ಕ್ವಾಲ್ಕಂ ಸ್ನಾಪ್​ಡ್ರಾಗನ್ 8 Gen 3 SoC ಫೋನ್‌ನಲ್ಲಿ ಲಭ್ಯವಿದೆ. ಕ್ಯಾಮೆರಾ ಕುರಿತು ಮಾತನಾಡುವುದಾದರೆ, ಇದು 50 ಮೆಗಾಪಿಕ್ಸೆಲ್ ವೈಡ್ ಕ್ಯಾಮೆರಾ, 48 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ ಮತ್ತು 64 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಕ್ಯಾಮೆರಾದೊಂದಿಗೆ ಟ್ರಿಪಲ್ ಕ್ಯಾಮೆರಾವನ್ನು ಹೊಂದಿದೆ.

ಈ ಫೋನ್​ನಲ್ಲಿ ಸೆಲ್ಫಿಗಾಗಿ 32 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದು 5,400mAh ಬ್ಯಾಟರಿಯನ್ನು ಹೊಂದಿದೆ. ಈ ಫೋನ್ 100W ವೈರ್ಡ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.

ಒನ್​ಪ್ಲಸ್ 12R

ಒನ್​ಪ್ಲಸ್ 12R ಸ್ಮಾರ್ಟ್​ಫೋನ್ ಮೇಲೆ ಎಲ್ಲರ ಕಣ್ಣಿದೆ. ಈ ಫೋನ್ ಚೀನಾದಲ್ಲಿ ಬಿಡುಗಡೆಯಾದ ಒನ್​ಪ್ಲಸ್ Ace 3 ಯ ಮರುಬ್ರಾಂಡೆಡ್ ಆವೃತ್ತಿಯಾಗಿದೆ. ಇದರ ವಿಶೇಷತೆಗಳ ಕುರಿತು ಮಾತನಾಡುತ್ತಾ, 6.78 ಇಂಚಿನ LTPO ಡಿಸ್ಪ್ಲೇಯನ್ನು ಹೊಂದಿದೆ. ಇದು OLED ಪ್ಯಾನೆಲ್ ಆಗಿದೆ. 120Hz ರಿಫ್ರೆಶ್ ರೇಟ್ ಮತ್ತು 1.5K ರೆಸಲ್ಯೂಶನ್ ಹೊಂದಿದೆ.

ಕ್ಯಾಮೆರಾದ ಬಗ್ಗೆ ಮಾತನಾಡುವುದಾದರೆ, ಇದು ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. 50 ಮೆಗಾಪಿಕ್ಸೆಲ್ ವೈಡ್ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಮುಂಭಾಗದಲ್ಲಿ, ಈ ಫೋನ್ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾದೊಂದಿಗೆ ಬರುತ್ತದೆ. ಕ್ವಾಲ್ಕಂ ಸ್ನಾಪ್​ಡ್ರಾಗನ್ 8 Gen 2 ಪ್ರೊಸೆಸರ್ ನೀಡಲಾಗಿದೆ. ಇದು 5500 mAh ನ ದೊಡ್ಡ ಬ್ಯಾಟರಿಯನ್ನು ಹೊಂದಿದ್ದು, 100W ವೇಗದ ಚಾರ್ಜಿಂಗ್ ಬೆಂಬಲವಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ