AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OnePlus 9 Pro: ಶಾಕಿಂಗ್: ಒನ್‌ಪ್ಲಸ್‌ 9 ಪ್ರೊ ಫೋನ್ ಬೆಲೆಯಲ್ಲಿ ದಿಢೀರ್ ಇಳಿಕೆ: ಈ ಆಫರ್ ಮಿಸ್ ಮಾಡ್ಬೇಡಿ

OnePlus 9 Pro Price Drop: ಒನ್‌ಪ್ಲಸ್‌ 10 ಪ್ರೊ ಗೆ ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ ಎಂಬೊತ್ತಿಗೆ ಒನ್​ಪ್ಲಸ್ ಕಂಪನಿ ತನ್ನ ಹಿಂದಿನ ಆವೃತ್ತಿಯ ಒನ್‌ಪ್ಲಸ್‌ 9 ಪ್ರೊ (OnePlus 9 Pro) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದೆ

OnePlus 9 Pro: ಶಾಕಿಂಗ್: ಒನ್‌ಪ್ಲಸ್‌ 9 ಪ್ರೊ ಫೋನ್ ಬೆಲೆಯಲ್ಲಿ ದಿಢೀರ್ ಇಳಿಕೆ: ಈ ಆಫರ್ ಮಿಸ್ ಮಾಡ್ಬೇಡಿ
OnePlus 9 Pro
TV9 Web
| Updated By: Vinay Bhat|

Updated on:Jun 06, 2022 | 3:13 PM

Share

ಭಾರತದಲ್ಲಿ ಇತ್ತೀಚೆಗಷ್ಟೆ ಒನ್​ಪ್ಲಸ್ 10 ಪ್ರೊ 5ಜಿ (OnePlus 10 Pro 5G) ಸ್ಮಾರ್ಟ್​​ಫೋನ್ ಬಿಡುಗಡೆ ಆಗಿತ್ತು. ಈ ಫೋನ್ ಅತ್ಯಂತ ಬಲಿಷ್ಠವಾದ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌, 5,000mAh ಡ್ಯುಯಲ್‌ ಸೆಲ್‌ ಬ್ಯಾಟರಿ, ಹೊಸ ವೈರ್ಡ್ ಚಾರ್ಜಿಂಗ್ ಟೆಕ್ನಾಲಜಿ ಹೊಂದಿದ್ದು, 32 ನಿಮಿಷಗಳಲ್ಲಿ ಶೂನ್ಯದಿಂದ 100% ಚಾರ್ಜ್ ಆಗುವ ಈ ಫೋನ್ ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ. 10 ಪ್ರೊ ಗೆ ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ ಎಂಬೊತ್ತಿಗೆ ಒನ್​ಪ್ಲಸ್ ಕಂಪನಿ ತನ್ನ ಹಿಂದಿನ ಆವೃತ್ತಿಯ ಒನ್‌ಪ್ಲಸ್‌ 9 ಪ್ರೊ (OnePlus 9 Pro) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದೆ. ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ (Amazon) ಈ ಫೋನ್ ಇದೀಗ ಕೇವಲ 44,999 ರೂ. ಗಳಿಗೆ ಖರೀದಿಸಲು ಅವಕಾಶವನ್ನು ಒದಗಿಸಲಾಗಿದೆ. ಕಳೆದ ವರ್ಷ ಒನ್‌ಪ್ಲಸ್‌ 9 ಪ್ರೊ 64,999 ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಬಿಡುಗಡೆ ಆಗಿತ್ತು.

  1. ಈ ಸ್ಮಾರ್ಟ್‌ಪೋನ್ 49,999 ರೂ.ಗಳ ಎಂಆರ್‌ಪಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಇದರ ಜೊತೆಗೆ CITI ಕ್ರೆಡಿಟ್ ಕಾರ್ಡ್ ಹೊಂದಿರುವ ಗ್ರಾಹಕರು ಈ ಸ್ಮಾರ್ಟ್‌ಫೋನ್ ಮೇಲೆ ಮತ್ತೆ 5,000 ರೂ. ಇನ್‌ಸ್ಟಂಟ್ ರಿಯಾಯಿತಿಯಲ್ಲಿ ಖರೀದಿಸಬಹುದು ಎಂದು ಕಂಪೆನಿ ತಿಳಿಸಿರುವುದರಿಂದ, ಈ ಸಾಧನವು ಸೀಮಿತ ಅವಧಿಯವರೆಗೆ ಕೇವಲ 44,999 ರೂ.ಗಳ ಭರ್ಜರಿ ಬೆಲೆಯಲ್ಲಿ ಖರೀದಿಗೆ ದೊರೆಯುತ್ತಿದೆ.
  2. ಅದಲ್ಲದೆ, ಗ್ರಾಹಕರು ತಮ್ಮ ಹಳೆಯ ಸಾಧನವನ್ನು ವಿನಿಮಯ ಮಾಡಿಕೊಂಡರೆ ಗ್ರಾಹಕರು 14,600 ರೂ.ಗಳ ವರೆಗಿನ ಎಕ್ಸ್‌ಚೇಂಜ್ ಬೆಲೆಯಲ್ಲಿ OnePlus 9 Pro ಸ್ಮಾರ್ಟ್‌ಫೋನನ್ನು ಖರೀದಿಸಬಹುದಾಗಿದೆ.
  3. ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 1,440 x 3,216 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 19.8:9 ಆಗಿದೆ.
  4. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಜೊತೆಗೆ LTPO ತಂತ್ರಜ್ಞಾನ ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಅಳವಡಿಸಲಾಗಿದ್ದು ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ.
  5. ಇದನ್ನೂ ಓದಿ
    Image
    ನಾಳೆ ಬಿಡುಗಡೆ ಆಗಲಿದೆ ಬಹುನಿರೀಕ್ಷಿತ ರಿಯಲ್‌ ಮಿ GT ನಿಯೋ 3T: ಬೆಲೆ ಎಷ್ಟು?, ಏನು ಫೀಚರ್ಸ್?
    Image
    WhatsApp: ಬಳಕೆದಾರರ ಸುರಕ್ಷತೆಗೆ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟ ವಾಟ್ಸ್​ಆ್ಯಪ್: ಏನದು ನೋಡಿ
    Image
    ಇಂದಿನಿಂದ Apple WWDC 2022 ಈವೆಂಟ್‌ ಪ್ರಾರಂಭ: iOS 16 ಬಿಡುಗಡೆ ಆಗುವ ನಿರೀಕ್ಷೆ
    Image
    Moto E32s: ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E32s ಫೋನ್ ಮಾರಾಟ ಇಂದಿನಿಂದ ಆರಂಭ
  6. ಈ ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್‌ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.
  7. ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಸಹ 65T Warp ಚಾರ್ಜ್‌ ಸಪೋರ್ಟ್‌ ಪಡೆದಿದೆ ಹಾಗೂ Warp ಚಾರ್ಜ್ 50w ಸಾಮರ್ಥ್ಯದ ವಾಯರ್‌ ಲೆಸ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.
  8. ಇತ್ತೀಚಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್ / ಎ-ಜಿಪಿಎಸ್, ಎನ್ಎಫ್ಸಿ, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿದಂತೆ ಆಕರ್ಷಕ ಆಯ್ಕೆಗಳಿಂದ ಕೂಡಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Mon, 6 June 22

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ