OnePlus 9 Pro: ಒನ್‌ಪ್ಲಸ್‌ 10 ಪ್ರೊ ಬಿಡುಗಡೆ ಬೆನ್ನಲ್ಲೇ ಒನ್‌ಪ್ಲಸ್‌ 9 ಪ್ರೊ ಬೆಲೆ ಭರ್ಜರಿ ಇಳಿಕೆ: ಹೊಸ ದರ ಇಲ್ಲಿದೆ

| Updated By: Vinay Bhat

Updated on: Apr 01, 2022 | 3:01 PM

OnePlus 9 Pro Price: ಭಾರತದಲ್ಲಿ ಬಹುನಿರೀಕ್ಷಿತ ಒನ್​ಪ್ಲಸ್ 10 ಪ್ರೊ 5ಜಿ (OnePlus 10 Pro 5G) ಸ್ಮಾರ್ಟ್​​ಫೋನ್ ಬಿಡುಗಡೆ ಆಗಿದೆ. ಇದೀಗ ಒನ್​ಪ್ಲಸ್ ಕಂಪನಿ ತನ್ನ ಹಿಂದಿನ ಆವೃತ್ತಿಯ ಒನ್‌ಪ್ಲಸ್‌ 9 ಪ್ರೊ (OnePlus 9 Pro) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದೆ.

OnePlus 9 Pro: ಒನ್‌ಪ್ಲಸ್‌ 10 ಪ್ರೊ ಬಿಡುಗಡೆ ಬೆನ್ನಲ್ಲೇ ಒನ್‌ಪ್ಲಸ್‌ 9 ಪ್ರೊ ಬೆಲೆ ಭರ್ಜರಿ ಇಳಿಕೆ: ಹೊಸ ದರ ಇಲ್ಲಿದೆ
OnePlus 9 Pro
Follow us on

ಭಾರತದಲ್ಲಿ ಬಹುನಿರೀಕ್ಷಿತ ಒನ್​ಪ್ಲಸ್ 10 ಪ್ರೊ 5ಜಿ (OnePlus 10 Pro 5G) ಸ್ಮಾರ್ಟ್​​ಫೋನ್ ಬಿಡುಗಡೆ ಆಗಿದೆ. ಅತ್ಯಂತ ಬಲಿಷ್ಠವಾದ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌, 5,000mAh ಡ್ಯುಯಲ್‌ ಸೆಲ್‌ ಬ್ಯಾಟರಿ, ಹೊಸ ವೈರ್ಡ್ ಚಾರ್ಜಿಂಗ್ ಟೆಕ್ನಾಲಜಿ ಹೊಂದಿದ್ದು, 32 ನಿಮಿಷಗಳಲ್ಲಿ ಶೂನ್ಯದಿಂದ 100% ಚಾರ್ಜ್ ಆಗುವ ಈ ಫೋನ್ ಮಾರುಕಟ್ಟೆಯಲ್ಲಿ ಧೂಳೆಬ್ಬಿಸುವುದು ಖಚಿತ. ಇದರ ಬಿಡುಗಡೆ ಬೆನ್ನಲ್ಲೇ ಇದೀಗ ಒನ್​ಪ್ಲಸ್ ಕಂಪನಿ ತನ್ನ ಹಿಂದಿನ ಆವೃತ್ತಿಯ ಒನ್‌ಪ್ಲಸ್‌ 9 ಪ್ರೊ (OnePlus 9 Pro) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡಿದೆ. ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ (Amazon) ಈ ಫೋನ್ ಇದೀಗ ಕೇವಲ 59,999 ರೂ. ಗೆ ಮಾರಾಟ ಆಗುತ್ತಿದೆ. ಕಳೆದ ವರ್ಷ ಒನ್‌ಪ್ಲಸ್‌ 9 ಪ್ರೊ 64,999 ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಬಿಡುಗಡೆ ಆಗಿತ್ತು. ಸಿಟಿ ಬ್ಯಾಂಕ್ ಕಾರ್ಡ್‌ ಮೂಲಕ ಖರೀದಿಸುವ ಗ್ರಾಹಕರಿಗೆ 10,000 ರೂ. ಗಳ ವರೆಗೂ ತ್ವರಿತ ರಿಯಾಯಿತಿಯನ್ನು ಕೂಡ ಪಡೆಯಬಹುದಾಗಿದೆ.

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 1,440 x 3,216 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 19.8:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಜೊತೆಗೆ LTPO ತಂತ್ರಜ್ಞಾನ ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಅಳವಡಿಸಲಾಗಿದ್ದು ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ.

ಈ ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್‌ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಸಹ 65T Warp ಚಾರ್ಜ್‌ ಸಪೋರ್ಟ್‌ ಪಡೆದಿದೆ ಹಾಗೂ Warp ಚಾರ್ಜ್ 50w ಸಾಮರ್ಥ್ಯದ ವಾಯರ್‌ ಲೆಸ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಹಾಗೂ ಇತ್ತೀಚಿನ ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5 ಜಿ, 4 ಜಿ ಎಲ್ ಟಿಇ, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್ / ಎ-ಜಿಪಿಎಸ್, ಎನ್ಎಫ್ಸಿ, ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿದಂತೆ ಆಕರ್ಷಕ ಆಯ್ಕೆಗಳಿಂದ ಕೂಡಿದೆ.

OnePlus 10 Pro 5G: ಅರ್ಧ ಗಂಟೆ-ಫುಲ್ ಚಾರ್ಜ್: ಭಾರತದಲ್ಲಿ ಧೂಳೆಬ್ಬಿಸಲು ಬಂತು ಒನ್‌ಪ್ಲಸ್‌ 10 ಪ್ರೊ 5G

Nokia C01 Plus: ಕೇವಲ 6,299 ರೂ. ಗೆ ಬಿಡುಗಡೆ ಆಗಿದೆ ನೋಕಿಯಾದ ಈ ಸ್ಮಾರ್ಟ್​​ಫೋನ್