AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OnePlus 9RT: ಭಾರತದಲ್ಲಿಂದು ಬಹುನಿರೀಕ್ಷಿತ ಒನ್​ಪ್ಲಸ್ 9RT ಫೋನ್ ಲಾಂಚ್: ಬೆಲೆ ಎಷ್ಟು?, ಏನು ವಿಶೇಷತೆ?

OnePlus 9RT Launch: ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್‌, 65T ವಾರ್ಪ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಅಮೋಘ ಫೀಚರ್​ಗಳಿಂದ ಒನ್‌ಪ್ಲಸ್‌ 9RT ಕೂಡಿದೆ. ಇದು ಜನವರಿ 17 ರಿಂದ ಖರೀದಿಗೆ ಸಿಗಲಿದೆಯಂತೆ.

OnePlus 9RT: ಭಾರತದಲ್ಲಿಂದು ಬಹುನಿರೀಕ್ಷಿತ ಒನ್​ಪ್ಲಸ್ 9RT ಫೋನ್ ಲಾಂಚ್: ಬೆಲೆ ಎಷ್ಟು?, ಏನು ವಿಶೇಷತೆ?
OnePlus 9RT
TV9 Web
| Updated By: Vinay Bhat|

Updated on: Jan 14, 2022 | 2:34 PM

Share

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯ ಅತಿದೊಡ್ಡ ತಾಣವಾಗಿರುವ ಭಾರತದಲ್ಲಿ ಇಂದು ಒನ್​ಪ್ಲಸ್ (OnePlus) ಕಂಪನಿಯ ಬಹುನಿರೀಕ್ಷಿತ ಒನ್​ಪ್ಲಸ್ 9ಆರ್​ಟಿ (OnePlus 9RT) ಫೋನ್ ಲಾಂಚ್ ಆಗಲಿದೆ. ಇಂದು (ಜ. 14) ಸಂಜೆ 5 ಗಂಟೆಗೆ ಈ ಸ್ಮಾರ್ಟ್​ಫೋನ್ ಅನಾವರಣಗೊಳ್ಳಲಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಇದರಲ್ಲಿರುವ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್​ನಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆಯಂತೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್‌, 65T ವಾರ್ಪ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಅಮೋಘ ಫೀಚರ್​ಗಳಿಂದ ಒನ್‌ಪ್ಲಸ್‌ 9RT ಕೂಡಿದೆ. ಇದು ಜನವರಿ 17 ರಿಂದ ಅಮೆಜಾನ್​ನಲ್ಲಿ ನಡೆಯಲಿರುವ ಗ್ರೇಟ್ ಇಂಡಿಯನ್ ರಿಪಬ್ಲಿಕ್ ಸೇಲ್​ನಲ್ಲಿ (Amazon Great Indian Republic Day sale) ಖರೀದಿಗೆ ಸಿಗಲಿದೆಯಂತೆ.

ಏನು ವಿಶೇಷತೆ?:

ಮೂಲಗಳ ಪ್ರಕಾರ, ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು 1300 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಓಪೋನ ಕಲರ್‌ಓಎಸ್ ಮೇಲೆ ಕಾರ್ಯನಿರ್ವಹಿಸುತ್ತದೆ.

ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮರಾ ಸೆಟಪ್ 4K ವೀಡಿಯೋ ರೆಕಾರ್ಡಿಂಗ್ ನೀಡುತ್ತದೆ ಮತ್ತು ಹೈಬ್ರಿಡ್ ಫೋಕಸ್‌ ಹೊಂದಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಬಲಿಷ್ಠವಾದ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65T ವಾರ್ಪ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸುತ್ತಿದೆ.

ಬೆಲೆ ಎಷ್ಟು?:

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನಿನ ಖಚಿತ ಬೆಲೆ ಇನ್ನೂ ಬಹಿರಂಗಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ ಇದು ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆಯಂತೆ. ಇದರ ಪ್ರಕಾರ, 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯಕ್ಕೆ 42,999 ರೂ. ಮತ್ತು 12GB RAM ಮತ್ತು 256GB ಇಂಟರ್‌ ಸ್ಟೋರೇಜ್​ಗೆ 46,999 ರೂ. ಇರಬಹುದು ಎಂದು ಹೇಳಲಾಗಿದೆ. ಬ್ಲಾಕ್ ಮತ್ತು ಸಿಲ್ವರ್​ನ ಎರಡು ಬಣ್ಣಗಳಲ್ಲಿ ಇದು ಮಾರುಕಟ್ಟೆಗೆ ಲಗ್ಗೆಯಿಡಲಿದೆ.

Oppo A36: 5000mAh ಬ್ಯಾಟರಿ, ಬಲಿಷ್ಠ ಪ್ರೊಸೆಸರ್: ಬಜೆಟ್ ಬೆಲೆಗೆ ಒಪ್ಪೋ A36 ಸ್ಮಾರ್ಟ್​ಫೋನ್ ಬಿಡುಗಡೆ

ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ