AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OnePlus 9RT: ಭಾರತದಲ್ಲಿ ಕೇವಲ ಬೆಲೆಯಿಂದಲೇ ಸುದ್ದಿಯಾಗುತ್ತಿದೆ ಚೀನಾದಲ್ಲಿ ಧೂಳೆಬ್ಬಿಸಿದ ಈ ಸ್ಮಾರ್ಟ್​ಫೋನ್

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಒಟ್ಟು ಮೂರು ಮಾದರಿಯಲ್ಲಿ ಬಿಡುಗಡೆ ಆಗಿತ್ತು. ಭಾರತದಲ್ಲಿ ಇದರ ಬೆಲೆ 40,000 ರೂ. ಇಂದ 44,000 ರೂ. ಇರಬಹುದೆಂದು ಹೇಳಲಾಗಿದೆ.

OnePlus 9RT: ಭಾರತದಲ್ಲಿ ಕೇವಲ ಬೆಲೆಯಿಂದಲೇ ಸುದ್ದಿಯಾಗುತ್ತಿದೆ ಚೀನಾದಲ್ಲಿ ಧೂಳೆಬ್ಬಿಸಿದ ಈ ಸ್ಮಾರ್ಟ್​ಫೋನ್
OnePlus 9RT
TV9 Web
| Updated By: Vinay Bhat|

Updated on: Oct 16, 2021 | 3:24 PM

Share

ಕಳೆದ ವಾರ ಚೀನಾದಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿದ್ದ ಒನ್‌ಪ್ಲಸ್‌ ಕಂಪನಿಯ ಒನ್‌ಪ್ಲಸ್‌ 9ಆರ್​ಟಿ (OnePlus 9RT) ಸ್ಮಾರ್ಟ್​ಫೋನ್‌ (Smartphone) ಸದ್ಯದಲ್ಲೇ ಭಾರತದಲ್ಲೂ ಲಾಂಚ್‌ ಆಗಲಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ (Snapdragon ) 888 SoC ಪ್ರೊಸೆಸರ್‌, 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65T ವಾರ್ಪ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ (Fast Charging) ಸೇರಿದಂತೆ ಭರ್ಜರಿ ಫೀಚರ್​ಗಳನ್ನು ಈ ಸ್ಮಾರ್ಟ್​ಫೋನ್ ಒಳಗೊಂಡಿದೆ. ಭಾರತದಲ್ಲಿ ಒನ್​ಪ್ಲಸ್ 9RT ಸ್ಮಾರ್ಟ್​ಫೋನ್ ಬಿಡುಗಡೆ ಆಗಲಿದೆ ಎಂಬ ಸುದ್ದಿ ಹೊರಬಿದ್ದ ಬೆನ್ನಲ್ಲೇ ಇದರ ಬೆಲೆ ಭರ್ಜರಿ ಸದ್ದು ಮಾಡುತ್ತಿದೆ.

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಒಟ್ಟು ಮೂರು ಮಾದರಿಯಲ್ಲಿ ಬಿಡುಗಡೆ ಆಗಿತ್ತು. 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಬೆಲೆ CNY 3,299 ಆಗಿತ್ತು. ಅಂತೆಯೆ 8GB ಮತ್ತು 256GB ಮಾದರಿಗೆ CNY 3,499 (ಅಂದಾಜು 40,900ರೂ.) ಮತ್ತು 12GB RAM ಮತ್ತು 256GB ಆಯ್ಕೆಯಲ್ಲಿ ಸಿಎನ್‌ವೈ 3,799 (ಸರಿಸುಮಾರು ರೂ. 44,400) ಬೆಲೆಯನ್ನು ಹೊಂದಿದೆ. ಭಾರತದಲ್ಲಿ ಇದರ ಬೆಲೆ 40,000 ರೂ. ಇಂದ 44,000 ರೂ. ಇರಬಹುದೆಂದು ಹೇಳಲಾಗಿದೆ.

ಏನು ವಿಶೇಷತೆ?:

ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62-ಇಂಚಿನ ಫುಲ್‌-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಓಪೋನ ಕಲರ್‌ಓಎಸ್ ಮೇಲೆ ಕಾರ್ಯನಿರ್ವಹಿಸುತ್ತದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮರಾ ಸೆಟಪ್ 4K ವೀಡಿಯೋ ರೆಕಾರ್ಡಿಂಗ್ ನೀಡುತ್ತದೆ ಮತ್ತು ಹೈಬ್ರಿಡ್ ಫೋಕಸ್‌ ಹೊಂದಿದೆ.

4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65T ವಾರ್ಪ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಅನ್ನು ಒಳಗೊಂಡಿದೆ.

Infinix note 11: ಬೆಲೆ ಬಹಿರಂಗ ಪಡಿಸದೆ ಎರಡು ಹೊಸ ಸ್ಮಾರ್ಟ್​ಫೋನ್ ಅನಾವರಣ ಮಾಡಿದ ಇನ್‌ಫಿನಿಕ್ಸ್

Flipkart Big Diwali Sale 2021: ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ದೀಪಾವಳಿ ಸೇಲ್: ಸ್ಮಾರ್ಟ್​ಫೋನ್, ಸ್ಮಾರ್ಟ್​ ಟಿವಿಗಳ ಮೇಲೆ ಬಂಪರ್ ಆಫರ್

(OnePlus 9RT price in India has been tipped online ahead of an official announcement)

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ