OnePlus Nord N300 5G: ಒನ್‌ಪ್ಲಸ್​ನಿಂದ ವಿಶೇಷವಾದ ನಾರ್ಡ್‌ N300 ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ ಎಷ್ಟು?, ಏನು ವಿಶೇಷತೆ?

ಹೆಚ್ಚಾಗಿ ತನ್ನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನಸೆಳೆದಿರುವ ಕಂಪನಿ ಇದೀಗ ಒನ್‌ಪ್ಲಸ್‌ ನಾರ್ಡ್‌ ಎನ್​300 (OnePlus Nord N300 5G) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ.

OnePlus Nord N300 5G: ಒನ್‌ಪ್ಲಸ್​ನಿಂದ ವಿಶೇಷವಾದ ನಾರ್ಡ್‌ N300 ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ ಎಷ್ಟು?, ಏನು ವಿಶೇಷತೆ?
oneplus nord n300
Follow us
TV9 Web
| Updated By: Vinay Bhat

Updated on:Oct 25, 2022 | 3:13 PM

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಒನ್​ಪ್ಲಸ್​ ಕಂಪನಿಯ ಫೋನುಗಳ ಬಿಡುಗಡೆ ಸಂಖ್ಯೆ ಕಡಿಮೆ ಆಗುತ್ತಿದೆ. ಅಪರೂಪಕ್ಕೆ ಮೊಬೈಲ್​ಗಳನ್ನು ಅನಾವರಣ ಮಾಡುತ್ತಿರುವ ಒನ್​ಪ್ಲಸ್​ (OnePlus) ಇದೀಗ ವಿಶೇಷ ಸ್ಮಾರ್ಟ್​ಫೋನ್​ನೊಂದಿಗೆ ಬಂದಿದೆ. ಹೆಚ್ಚಾಗಿ ತನ್ನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನಸೆಳೆದಿರುವ ಕಂಪನಿ ಇದೀಗ ಒನ್‌ಪ್ಲಸ್‌ ನಾರ್ಡ್‌ ಎನ್​300 (OnePlus Nord N300 5G) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ಬಲಿಷ್ಠವಾದ ಪ್ರೊಸೆಸರ್ ಅನ್ನು ಹೊಂದಿರುವ ಈ ಫೋನ್​ನಲ್ಲಿ 5,000mAh ಸಾಮರ್ಥ್ಯದ ಬ್ಯಾಟರಿ ಇದ್ದು, ವೇಗದ ಚಾರ್ಜಿಂಗ್ ಕೂಡ ನೀಡಲಾಗಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ.

ಒನ್‌ಪ್ಲಸ್‌ ನಾರ್ಡ್‌ N300 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಯುಎಸ್‌ನಲ್ಲಿ ಮಾತ್ರ ಬಿಡುಗಡೆ ಆಗಿದೆ. ಕೆಲ ಸಮಯದ ಬಳಿಕ ಇದು ಭಾರತಕ್ಕೂ ಕಾಲಿಡಲಿದೆ. ಯುಎಸ್‌ನಲ್ಲಿ ಇದರ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಯ ಬೆಲೆ $228, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 19,000ರೂ. ಎನ್ನಬಹುದು.

ಈ ಸ್ಮಾರ್ಟ್‌ಫೋನ್‌ 1612 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು 6.65-ಇಂಚಿನ HD+ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ.ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಮೀಡಿಯಾಟೆಕ್‌ ಡೈಮೆನ್ಸಿಟಿ 810 SoC 5G ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಮೈಕ್ರೊ-SD ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಬಹುದು.

ಇದನ್ನೂ ಓದಿ
Image
WhatsApp Down: ಸ್ಥಗಿತವಾಗಿದ್ದ ವಾಟ್ಸ್​ಆ್ಯಪ್​ ಸೇವೆ ಈಗ ಲಭ್ಯ: ಸಮಸ್ಯೆ ಬಗೆಹರಿಸಿದ ಮೆಟಾ
Image
Truecaller: ಟ್ರೂ ಕಾಲರ್​ನಲ್ಲಿ ಕಾಣಿಸುವ ನಿಮ್ಮ ಹೆಸರನ್ನು ಬದಲಾಯಿಸಬೇಕೇ: ಇಲ್ಲಿದೆ ನೋಡಿ ಟ್ರಿಕ್
Image
Airtel: ದಿನಕ್ಕೆ 3GB ಡೇಟಾ: ಏರ್ಟೆಲ್​ನ ಈ ಪ್ಲಾನ್ ಹಾಕಿಸಿಕೊಂಡರೆ ಸಿಗಲಿದೆ ಭರ್ಜರಿ ಆಫರ್
Image
ದೀಪಾವಳಿ ಹಿನ್ನೆಲೆ ಹೊಸ ಸ್ಟಿಕ್ಕರ್‌ಗಳು ಮತ್ತು ಸ್ಟೋರಿ ವೈಶಿಷ್ಟ್ಯವನ್ನು ಬಿಡುಗಡೆ ಮಾಡಿದ ಇನ್​ಸ್ಟಾಗ್ರಾಮ್

ಒನ್‌ಪ್ಲಸ್‌ ನಾರ್ಡ್‌ N300 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್​ನಲ್ಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/NSA, ಡ್ಯುಯಲ್ 4G VoLTE, ಬ್ಲೂಟೂತ್ 5.1, ಜಿಪಿಎಸ್‌, ಗ್ಲೋನಾಸ್‌, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಅನ್ನು ನೀಡಲಾಗಿದೆ.

Published On - 3:12 pm, Tue, 25 October 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್