OnePlus Nord CE 2 Lite: ಒನ್​​ಪ್ಲಸ್ ಕಂಪನಿಯ ಈ ಸ್ಮಾರ್ಟ್​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಇಂದೇ ಖರೀದಿಸಿ

| Updated By: Vinay Bhat

Updated on: Aug 20, 2022 | 6:40 AM

ಒನ್‌ಪ್ಲಸ್‌ ಕಂಪನಿಯ ಅಧಿಕೃತ ವೆಬ್‌ಸೈಟ್‌ ಸೇರಿದಂತೆ ಇ ಕಾಮರ್ಸ್ ತಾಣವಾದ ಅಮೆಜಾನ್‌, ರಿಲಯನ್ಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್​​ಗಳಲ್ಲಿ ನಾರ್ಡ್‌ CE 2 5G ಫೋನಿನ ಬೆಲೆಯಲ್ಲಿ 1,000ರೂ. ಇಳಿಕೆ ಮಾಡಲಾಗಿದೆ.

OnePlus Nord CE 2 Lite: ಒನ್​​ಪ್ಲಸ್ ಕಂಪನಿಯ ಈ ಸ್ಮಾರ್ಟ್​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಇಂದೇ ಖರೀದಿಸಿ
OnePlus Nord CE 2 Lite
Follow us on

ಒನ್‌ಪ್ಲಸ್‌ (OnePlus) ಕಂಪನಿ ಈ ವರ್ಷ ಅನೇಕ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಈ ಪೈಕಿ ಕಳೆದ ಏಪ್ರಿಲ್​ನಲ್ಲಿ ಬಿಡುಗಡೆ ಮಾಡಿದ ಒನ್​ಪ್ಲಸ್ ನಾರ್ಡ್‌ ಸಿಇ 2 ಲೈಟ್‌ 5ಜಿ (OnePlus Nord CE 2 Lite 5G) ಫೋನ್‌ ಕೂಡ ಒಂದು. ಅತ್ಯುತ್ತಮ ಡಿಸೈನ್, ಭರ್ಜರಿ ಫೀಚರ್​ಗಳಿಂದ ತುಂಬಿರುವ ಈ ಸ್ಮಾರ್ಟ್​​ಫೋನ್ (Smartphone) ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. 5,000mAh ಬ್ಯಾಟರಿ ಸಾಮರ್ಥ್ಯಕ್ಕೆ ಹೇಳಿ ಮಾಡಿಸಿರುವ 33W ಸೂಪರ್VOOC ವೇಗದ ಚಾರ್ಜಿಂಗ್ ಕೂಡ ನೀಡಲಾಗಿದೆ. ಇದೀಗ ಈ ಫೋನಿನ ಬೆಲೆಯಲ್ಲಿ ದಿಢೀರ್ ಇಳಿಕೆ ಮಾಡಲಾಗಿದೆ.

ಒನ್‌ಪ್ಲಸ್‌ ಕಂಪನಿಯ ಅಧಿಕೃತ ವೆಬ್‌ಸೈಟ್‌ ಸೇರಿದಂತೆ ಇ ಕಾಮರ್ಸ್ ತಾಣವಾದ ಅಮೆಜಾನ್‌, ರಿಲಯನ್ಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್​​ಗಳಲ್ಲಿ ನಾರ್ಡ್‌ CE 2 5G ಫೋನಿನ ಬೆಲೆಯಲ್ಲಿ 1,000ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ ಇದೀಗ ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 19,999 ರೂ. ಬದಲಾಗಿ 18,999 ರೂ. ಗೆ ಮಾರಾಟ ಆಗುತ್ತಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ ಈ 20,999 ರೂ. ಆಗಿದೆ. ಇದರ ಜೊತೆಗೆ ನೀವು ಎಸ್​ಬಿಐ ಕ್ರೆಡಿಟ್ ಕಾರ್ಡ್​ ಮೂಲಕ ಖರೀದಿಸಿದರೆ 1,500 ರೂ. ರಿಯಾಯಿತಿ ಸಿಗಲಿದೆ.

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್ 5G ಸ್ಮಾರ್ಟ್‌ಫೋನ್‌ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ವಿಶೇಷವಾಗಿ ಇದರಲ್ಲಿ ಗೇಮಿಂಗ್​​ಗಾಗಿ 240Hz ರೀಫ್ರೆಶ್‌ ರೇಟ್ ನೀಡಲಾಗಿದೆ. ಇದಕ್ಕೆ ತಕ್ಕಂತೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್‌ ಪ್ರೊಸೆಸರ್‌ ಬಲವನ್ನು ಪಡೆದಿದೆ. ಆಂಡ್ರಾಯ್ಡ್ 12 ಓಎಸ್​ನಿಂದ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ
World Photography Day: ಇಂದು ವಿಶ್ವ ಫೋಟೋಗ್ರಫಿ ದಿನ: ಭಾರತದಲ್ಲಿರುವ ಬೆಸ್ಟ್ ಕ್ಯಾಮೆರಾ ಸ್ಮಾರ್ಟ್​​​ಫೋನ್​ಗಳು ಇಲ್ಲಿದೆ ನೋಡಿ
Moto G62 5G: ಅತಿ ಕಡಿಮೆ ಬೆಲೆಯ 5G ಫೋನ್ ಮೋಟೋ G62 ಈಗ ಖರೀದಿಗೆ ಲಭ್ಯ: ಏನಿದೆ ಫೀಚರ್ಸ್?
WhatsApp: ವಾಟ್ಸ್​ಆ್ಯಪ್​ನಿಂದ ಶಾಕಿಂಗ್ ನ್ಯೂಸ್: ಇನ್ನುಂದೆ ಇರಲ್ಲ ಈ ಫೀಚರ್
Nothing Phone (1): ಬಿಡುಗಡೆ ಆದ ಒಂದೇ ತಿಂಗಳಲ್ಲಿ ಬೆಲೆ ಏರಿಕೆ: ನಥಿಂಗ್ ಫೋನ್ 1ಗೆ ಅಷ್ಟೊಂದು ಡಿಮ್ಯಾಂಡ್?

ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್‌ಸಿ ಮೂಲಕ 33W ಸೂಪರ್VOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆಗಳು ಇದರಲ್ಲಿದೆ.