OnePlus Nord CE 3: ಅದ್ಭುತ ಕ್ಯಾಮೆರಾ, ಭರ್ಜರಿ ಫೀಚರ್ಸ್: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಒನ್​ಪ್ಲಸ್ ನಾರ್ಡ್ CE 3

ಬಹುನಿರೀಕ್ಷಿತ ಹೊಸ ಒನ್‌ಪ್ಲಸ್‌ ನಾರ್ಡ್‌ ಸಿಇ 3 (OnePlus Nord CE 3) ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಲು ಸಜ್ಜಾಗಿ ನಿಂತಿದೆ. ಇದು ಕಳೆದ ವರ್ಷ ಬಿಡುಗಡೆ ಆಗಿ ಸಾಕಷ್ಟು ಬೇಡಿಕೆ ಸೃಷ್ಟಿಸಿದ್ದ ಒನ್‌ಪ್ಲಸ್‌ ನಾರ್ಡ್‌ CE 2 5G ಯ ​​ಉತ್ತರಾಧಿಕಾರಿಯಾಗಿದೆ.

OnePlus Nord CE 3: ಅದ್ಭುತ ಕ್ಯಾಮೆರಾ, ಭರ್ಜರಿ ಫೀಚರ್ಸ್: ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಒನ್​ಪ್ಲಸ್ ನಾರ್ಡ್ CE 3
OnePlus Nord CE 3
Follow us
Vinay Bhat
|

Updated on: Mar 04, 2023 | 11:49 AM

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಒನ್​ಪ್ಲಸ್ ಕಂಪನಿಯ ನಾರ್ಡ್ ಸರಣಿಯ ಫೋನ್​ಗಳಿಗೆ (Smartphone) ಭರ್ಜರಿ ಬೇಡಿಕೆ ಇದೆ. ವರ್ಷಕ್ಕೆ ಎರಡರಿಂದ ಮೂರು ನಾರ್ಡ್ ಸರಣಿಯಲ್ಲಿ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿ ಧೂಳೆಬ್ಬಿಸುವ ಒನ್​ಪ್ಲಸ್ ಕಂಪನಿ ಇದೀಗ ಮತ್ತೆ ಬಂದಿದೆ. ಬಹುನಿರೀಕ್ಷಿತ ಹೊಸ ಒನ್‌ಪ್ಲಸ್‌ ನಾರ್ಡ್‌ ಸಿಇ 3 (OnePlus Nord CE 3) ಸ್ಮಾರ್ಟ್‌ಫೋನ್‌ ಅನಾವರಣ ಮಾಡಲು ಸಜ್ಜಾಗಿ ನಿಂತಿದೆ. ಇದು ಕಳೆದ ವರ್ಷ ಬಿಡುಗಡೆ ಆಗಿ ಸಾಕಷ್ಟು ಬೇಡಿಕೆ ಸೃಷ್ಟಿಸಿದ್ದ ಒನ್‌ಪ್ಲಸ್‌ ನಾರ್ಡ್‌ CE 2 5G ಯ ​​ಉತ್ತರಾಧಿಕಾರಿಯಾಗಿದೆ. ಈ ಹಿಂದಿನ ಸರಣಿಯಂತೆ ಇದುಕೂಡ ಸಾಕಷ್ಟು ವಿಶೇಷತೆಗಳಿಂದ ಕೂಡಿದ್ದು ಆಕರ್ಷಕ ಕ್ಯಾಮೆರಾ (Camera), ಅತ್ಯುತ್ತಮ ಬ್ಯಾಟರಿ ಪವರ್, ಬಲಿಷ್ಠ ಪ್ರೊಸೆಸರ್‌ ಬಲವನ್ನು ಹೊಂದಿರಲಿದೆ. ಈ ಫೋನ್‌ ಲಾಂಚ್‌ ಆಗುವ ಮುನ್ನವೇ ಭಾರೀ ಸದ್ದು ಮಾಡುತ್ತಿದ್ದು ಇದರ ಫೀಚರ್ಸ್ ಕೂಡ ಬಹಿರಂಗಗೊಂಡಿದೆ.

ಬಹುನಿರೀಕ್ಷಿತ ಒನ್​ಪ್ಲಸ್ ನಾರ್ಡ್ CE 3 ಸ್ಮಾರ್ಟ್​ಫೋನ್ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ6.72 ಇಂಚಿನ ಅಮೋಲೆಡ್‌ ಪೂರ್ಣ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಹಾಗೆಯೇ ಇದು 120Hz ರಿಫ್ರೆಶ್ ರೇಟ್‌ ಆಯ್ಕೆಯೊಂದಿಗೆ ಬಯೋಮೆಟ್ರಿಕ್ ಭದ್ರತೆಗಾಗಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಇನ್‌ಡಿಸ್‌ಪ್ಲೇ ನಲ್ಲಿ ನೀಡಲಾಗಿದೆಯಂತೆ. ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆಯಲಿದೆ ಎಂದು ಅಂದಾಜಿಸಲಾಗಿದೆ. ಬಲಿಷ್ಠವಾದ ಸ್ನಾಪ್‌ಡ್ರಾಗನ್ 782G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 12GB RAM ಹಾಗೂ 256GB ಇಂಟರ್ನಲ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.

Moto G73 5G: ಭಾರತೀಯ ಮಾರುಕಟ್ಟೆಗೆ ಅಪ್ಪಳಿಸುತ್ತಿದೆ ಮೋಟೋ ಕಂಪನಿಯ ಹೊಸ ಸ್ಮಾರ್ಟ್​ಫೋನ್: ಇದರ ಫೀಚರ್ಸ್ ನೋಡಿ

ಇದನ್ನೂ ಓದಿ
Image
Tech Tips: ಇಂಟರ್ನೆಟ್ ಇಲ್ಲದೆಯೂ ಇಮೇಲ್ ಕಳುಹಿಸುವ ಟ್ರಿಕ್ ಗೊತ್ತೇ?: ಇಲ್ಲಿದೆ ನೋಡಿ
Image
Tech Tips: ಮನೆಯಲ್ಲೇ ಕುಳಿತು ಆನ್​ಲೈನ್ ಮೂಲಕ ಹಣ ಗಳಿಸಲು ಇಲ್ಲಿದೆ ನೋಡಿ ಸುಲಭ ಮಾರ್ಗ
Image
Amazon Echo Dot: ಅಲೆಕ್ಸಾ ಪ್ರಿಯರಿಗಾಗಿ ಬಂತು ಹೊಸ ಸ್ಮಾರ್ಟ್​ಸ್ಪೀಕರ್
Image
Apple: ಶೀಘ್ರದಲ್ಲೇ ಕರ್ನಾಟಕದಲ್ಲಿ ಆ್ಯಪಲ್ ತಯಾರಿಕಾ ಘಟಕ: ಇನ್ನುಂದೆ ರಾಜ್ಯದಲ್ಲೇ ತಯಾರಾಗುತ್ತೆ ಐಫೋನ್​ಗಳು

ಈ ಫೋನಿನ ಕ್ಯಾಮೆರಾ ವಿ‍ಚಾರಕ್ಕೆ ಬಂದರೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಹೊಂದಿದ್ದು, ಅದರಲ್ಲಿ 50 ಮೆಗಾಪಿಕ್ಸೆಲ್ ಪ್ರಮುಖ ಕ್ಯಾಮೆರಾ ಇದೆ. ಇದು ಸೋನಿ IMX890 ಸೆನ್ಸಾರ್ ಸಾಮರ್ಥ್ಯದಿಂದ ಕೂಡಿದೆ. ಹಾಗೆಯೆ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಹಾಗೂ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ರಚನೆ ಪಡೆದುಕೊಂಡಿರಲಿದೆ. ಹಾಗೆಯೇ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಒನ್‌ಪ್ಲಸ್‌ ನಾರ್ಡ್ CE 3 ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಬ್ಯಾಟರಿಯನ್ನು ಒಳಗೊಂಡಿರುತ್ತದೆ ಎಂದು ಹೇಳಲಾಗಿದೆ. ಇದು 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿರುವ ಜೊತೆಗೆ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಎಂದಿನಂತೆ ಇರಲಿದೆ. ಈ ಸ್ಮಾರ್ಟ್‌ಫೋನ್‌ನ ಬೆಲೆ ಇನ್ನು ಬಹಿರಂಗವಾಗಿಲ್ಲ. ಆದರೆ ಇದು ಭಾರತದಲ್ಲಿ 30,000 ರೂ. ಆಸುಪಾಸಿನಲ್ಲಿ ಇರಬಹುದು. ಫೆಬ್ರವರಿ ಮೊದಲ ವಾರದಲ್ಲಿ ಈ ಫೋನ್ ಭಾರತದಲ್ಲಿ ರಿಲೀಸ್ ಆಗಲಿದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ನಾರ್ಡ್‌ CE 2 ಬೆಲೆ 23,999 ರೂ. ಆಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ