OnePlus 11 5G: 2023ರ ಮೊದಲ ಸ್ಮಾರ್ಟ್​ಫೋನ್ ಪರಿಚಯಿಸಿದ ಒನ್​ಪ್ಲಸ್: ಇದರ ಬೆಲೆ 61,999 ರೂ.: ಏನಿದೆ ಫೀಚರ್ಸ್?

|

Updated on: Feb 09, 2023 | 12:41 PM

ಒನ್​ಪ್ಲಸ್ ಕಂಪನಿ 2023ರ ತನ್ನ ಚೊಚ್ಚಲ ಫೋನ್ ಭಾರಿ ನಿರೀಕ್ಷೆ ಸೃಷ್ಟಿಮಾಡಿದ್ದ ಒನ್‌ಪ್ಲಸ್‌ 11 5ಜಿ (OnePlus 11 5G) ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ದುಬಾರಿ ಬೆಲೆಯ ಈ ಫೋನ್​ನಲ್ಲಿ ಆಕರ್ಷಕ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ಅಳವಡಿಸಲಾಗಿದೆ. ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡ ನೀಡಲಾಗಿದೆ.

OnePlus 11 5G: 2023ರ ಮೊದಲ ಸ್ಮಾರ್ಟ್​ಫೋನ್ ಪರಿಚಯಿಸಿದ ಒನ್​ಪ್ಲಸ್: ಇದರ ಬೆಲೆ 61,999 ರೂ.: ಏನಿದೆ ಫೀಚರ್ಸ್?
OnePlus 11 Smartphone
Follow us on

ಟೆಕ್ ವಲಯದ ಪ್ರಸಿದ್ಧ ಕಂಪನಿ ಒನ್​ಪ್ಲಸ್ (OnePlus) ಇತ್ತೀಚೆಗೆ ತನ್ನ ಸ್ಮಾರ್ಟ್​ಫೋನ್ ಬಿಡುಗಡೆ ಮಾಡುವುದನ್ನು ಕಡಿಮೆ ಮಾಡಿದೆ. ಈ ಹಿಂದೆ ತಿಂಗಳಿಗೆ ಒಂದು, ಎರಡು ಮೊಬೈಲ್​ಗಳನ್ನು ಅನಾವರಣ ಮಾಡುತ್ತಿದ್ದ ಕಂಪನಿ ಇದೀಗ ಸಮಯ ತೆಗೆದುಕೊಂಡು ಆಕರ್ಷಕ ಸ್ಮಾರ್ಟ್​ಫೋನ್ (Smartphone) ಅನ್ನು ಮಾತ್ರ ರಿಲೀಸ್ ಮಾಡುತ್ತಿದೆ. ಅದರಂತೆ ಇದೀಗ ಒನ್​ಪ್ಲಸ್ ಕಂಪನಿ 2023ರ ತನ್ನ ಚೊಚ್ಚಲ ಫೋನ್ ಭಾರಿ ನಿರೀಕ್ಷೆ ಸೃಷ್ಟಿಮಾಡಿದ್ದ ಒನ್‌ಪ್ಲಸ್‌ 11 5ಜಿ (OnePlus 11 5G) ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ದುಬಾರಿ ಬೆಲೆಯ ಈ ಫೋನ್​ನಲ್ಲಿ ಆಕರ್ಷಕ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ಅಳವಡಿಸಲಾಗಿದೆ. ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ? ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ಒನ್‌ಪ್ಲಸ್‌ 11 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ. ಇದರ 8GB RAM + 128GB ಸ್ಟೋರೇಜ್ ಮಾದರಿಗೆ 56,999ರೂ. ಇದೆ. ಅಂತೆಯೆ 12GB RAM + 256G ಸ್ಟೋರೇಜ್ ರೂಪಾಂತರದ ಆಯ್ಕೆಗೆ 61,999ರೂ. ನಿಗದಿ ಮಾಡಲಾಗಿದೆ. ಸ್ಮಾರ್ಟ್‌ಫೋನ್‌ ಎಟರ್ನಲ್ ಗ್ರೀನ್ ಮತ್ತು ಟೈಟಾನ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಫೆಬ್ರವರಿ 14 ವ್ಯಾಲಂಟೈನ್ಸ್ ಡೇ ದಿನದಂದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಸೇಲ್ ಕಾಣಲಿದೆ.

ಇದನ್ನೂ ಓದಿ
Tech Tips: ವಾಟ್ಸ್​ಆ್ಯಪ್ ಚಾಟ್ ಓಪನ್ ಮಾಡದೇ ಮೆಸೇಜ್ ಓದುವುದು ಹೇಗೆ?: ಇಲ್ಲಿದೆ ನೋಡಿ ಟ್ರಿಕ್
Server Down: ಏಕಕಾಲದಲ್ಲಿ ಫೇಸ್​ಬುಕ್, ಯೂಟ್ಯೂಬ್, ಟ್ವಿಟ್ಟರ್, ಇನ್​ಸ್ಟಾಗ್ರಾಮ್ ಡೌನ್
Moto E13: ಇಂದು ಮೋಟೋರೊಲಾದಿಂದ ಮೋಟೋ E13 ಬಿಡುಗಡೆ: ಇದರ ಬೆಲೆ 7,000 ರೂ. ಗಿಂತ ಕಡಿಮೆ
Safer Internet Day 2023: ಇಂದು ವಿಶ್ವ ಸುರಕ್ಷಿತ ಅಂತರ್ಜಾಲ ದಿನ: ಮಕ್ಕಳನ್ನು ಆನ್‌ಲೈನ್​ನಿಂದ ಸುರಕ್ಷಿತವಾಗಿಡಲು ಇಲ್ಲಿದೆ ಟಿಪ್ಸ್

WhatsApp: ವಾಟ್ಸ್​ಆ್ಯಪ್​ನ ಈ ಹೊಸ ಫೀಚರ್​ಗಾಗಿ ಕಾದು ಕುಳಿತ ಬಳಕೆದಾರರು: ಬರುತ್ತಿದೆ ಬಹುಬೇಡಿಕೆಯ ಆಯ್ಕೆ

ಏನು ಫೀಚರ್ಸ್?:

ಒನ್‌ಪ್ಲಸ್‌ 11 5G ಸ್ಮಾರ್ಟ್‌ಫೋನ್‌ 1,440×3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಹೊಂದಿರುವ 6.7 ಇಂಚಿನ ಕ್ವಾಡ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅಮೋಲೆಡ್‌ ಸ್ಕ್ರೀನ್‌ ಅಗಿದೆ. 1,000Hz ವರೆಗಿನ ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿರುವುದು ವಿಶೇಷ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್‌ 13-ಆಧಾರಿತ OxygenOS 13 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌ ನೀಡಲಾಗಿದೆ. ಇದು ಅತ್ಯುತ್ತಮ ಕ್ವಾಲಿಟಿಯ ಫೋಟೋ ಸೆರೆ ಹಿಡಿಯುತ್ತದೆ. ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಪಡೆದಿದೆ. ಹಾಗೆಯೆ ಮುಂಭಾಗ ಸೆಲ್ಫೀಗಾಗಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಒನ್‌ಪ್ಲಸ್‌ 11 ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದಕ್ಕೆ ತಕ್ಕಂತೆ 100W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಆಗುತ್ತದೆ. ಉಳಿದಂತೆ 4G, Wi-Fi 7, ಬ್ಲೂಟೂತ್ 5.3, GPS , A-GPS, NFC, ಮತ್ತು USB 2.0 ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆ ನೀಡಲಾಗಿದೆ. ಒನ್‌ಪ್ಲಸ್‌ 11 5G ಜೊತೆಗೆ ಒನ್‌ಪ್ಲಸ್‌ 11R 5G ಸ್ಮಾರ್ಟ್​ಫೋನ್ ಕೂಡ ಬಿಡುಗಡೆ ಆಗಿದೆ. ಇದರ ಆರಂಭಿಕ ಬೆಲೆ 39,999 ರೂ. ಆಗಿದ್ದು ಫೆಬ್ರವರಿ 28 ರಿಂದ ಖರೀದಿಗೆ ಸಿಗುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ