OnePlus 11 5G: ಒನ್ಪ್ಲಸ್ನ 2023ರ ಮೊದಲ ಸ್ಮಾರ್ಟ್‌ಫೋನ್ ಇಂದಿನಿಂದ ಖರೀದಿಗೆ ಲಭ್ಯ: ಯಾವುದು?, ಏನು ಫೀಚರ್ಸ್?
ಕಳೆದ ವಾರ ಒನ್‌ಪ್ಲಸ್ ಕಂಪನಿ 2023ರ ತನ್ನ ಚೊಚ್ಚಲ ಫೋನ್ ಒನ್‌ಪ್ಲಸ್ 11 5ಜಿ (OnePlus 11 5G) ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ದುಬಾರಿ ಬೆಲೆಯ ಈ ಫೋನ್ನಲ್ಲಿ ಆಕರ್ಷಕ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ಅಳವಡಿಸಲಾಗಿದ್ದು ಇಂದಿನಿಂದ ಖರೀದಿಗೆ ಸಿಗುತ್ತಿದೆ.
ಟೆಕ್ ವಲಯದ ಪ್ರಸಿದ್ಧ ಕಂಪನಿ ಒನ್‌ಪ್ಲಸ್ (OnePlus) ಇತ್ತೀಚೆಗೆ ತನ್ನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವುದನ್ನು ಕಡಿಮೆ ಮಾಡಿದೆ. ಈ ಹಿಂದೆ ತಿಂಗಳಿಗೆ ಒಂದು, ಎರಡು ಮೊಬೈಲ್ಗಳನ್ನು ಅನಾವರಣ ಮಾಡುತ್ತಿದ್ದ ಕಂಪನಿ ಇದೀಗ ಸಮಯ ತೆಗೆದುಕೊಂಡು ಆಕರ್ಷಕ ಸ್ಮಾರ್ಟ್‌ಫೋನ್ (Smartphone) ಅನ್ನು ಮಾತ್ರ ರಿಲೀಸ್ ಮಾಡುತ್ತಿದೆ. ಅದರಂತೆ ಕಳೆದ ವಾರ ಒನ್‌ಪ್ಲಸ್ ಕಂಪನಿ 2023ರ ತನ್ನ ಚೊಚ್ಚಲ ಫೋನ್ ಒನ್‌ಪ್ಲಸ್ 11 5ಜಿ (OnePlus 11 5G) ಅನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ದುಬಾರಿ ಬೆಲೆಯ ಈ ಫೋನ್ನಲ್ಲಿ ಆಕರ್ಷಕ ಕ್ಯಾಮೆರಾ, ಬ್ಯಾಟರಿ, ಪ್ರೊಸೆಸರ್ ಅಳವಡಿಸಲಾಗಿದ್ದು ಇಂದಿನಿಂದ ಖರೀದಿಗೆ ಸಿಗುತ್ತಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ? ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಒನ್‌ಪ್ಲಸ್ 11 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಒಟ್ಟು ಎರಡು ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 8GB RAM + 128GB ಸ್ಟೋರೇಜ್ ಮಾದರಿಗೆ 56,999ರೂ. ಇದೆ. ಅಂತೆಯೆ 12GB RAM + 256G ಸ್ಟೋರೇಜ್ ರೂಪಾಂತರದ ಆಯ್ಕೆಗೆ 61,999ರೂ. ನಿಗದಿ ಮಾಡಲಾಗಿದೆ. ಸ್ಮಾರ್ಟ್‌ಫೋನ್ ಎಟರ್ನಲ್ ಗ್ರೀನ್ ಮತ್ತು ಟೈಟಾನ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ.
ಈ ಸ್ಮಾರ್ಟ್‌ಫೋನ್ ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಸೇಲ್ ಕಾಣಲಿದೆ. ಆಫರ್ ಕೂಡ ಘೋಷಿಸಲಾಗಿದ್ದು ರೆಡ್ ಕೇಬಲ್ ಕ್ಲಬ್ ಚಂದಾದಾರರು 2,000 ರೂ. ಗಳ ರಿಯಾಯಿತಿ ಪಡೆಯಬಹುದು. ಹಾಗೆಯೆ ಐಸಿಐಸಿಐ ಬ್ಯಾಂಕ್ ದಾರರಿಗೆ 1,000 ರೂ. ಗಳ ಡಿಸ್ಕೌಂಟ್ ನೀಡಲಾಗಿದೆ.
Valentine’s Day: ವಾಲೆಂಟೈನ್ಸ್ ಡೇಗೆ ಈ ಸ್ಮಾರ್ಟ್‌ಫೋನ್ ಗಿಫ್ಟ್ ಕೊಡಿ: ನಥಿಂಗ್ ಫೋನ್ 1 ಮೇಲೆ ಬಂಪರ್ ಡಿಸ್ಕೌಂಟ್
ಏನು ಫೀಚರ್ಸ್?:
ಒನ್‌ಪ್ಲಸ್ 11 5G ಸ್ಮಾರ್ಟ್‌ಫೋನ್ 1,440×3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಹೊಂದಿರುವ 6.7 ಇಂಚಿನ ಕ್ವಾಡ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅಮೋಲೆಡ್ ಸ್ಕ್ರೀನ್ ಅಗಿದೆ. 1,000Hz ವರೆಗಿನ ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿರುವುದು ವಿಶೇಷ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು ಆಂಡ್ರಾಯ್ಡ್ 13-ಆಧಾರಿತ OxygenOS 13 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್ ನೀಡಲಾಗಿದೆ. ಇದು ಅತ್ಯುತ್ತಮ ಕ್ವಾಲಿಟಿಯ ಫೋಟೋ ಸೆರೆ ಹಿಡಿಯುತ್ತದೆ. ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಪಡೆದಿದೆ. ಹಾಗೆಯೆ ಮುಂಭಾಗ ಸೆಲ್ಫೀಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಒನ್‌ಪ್ಲಸ್ 11 ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದಕ್ಕೆ ತಕ್ಕಂತೆ 100W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಆಗುತ್ತದೆ. ಉಳಿದಂತೆ 4G, Wi-Fi 7, ಬ್ಲೂಟೂತ್ 5.3, GPS , A-GPS, NFC, ಮತ್ತು USB 2.0 ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆ ನೀಡಲಾಗಿದೆ. ಒನ್‌ಪ್ಲಸ್ 11 5G ಜೊತೆಗೆ ಒನ್‌ಪ್ಲಸ್ 11R 5G ಸ್ಮಾರ್ಟ್‌ಫೋನ್ ಕೂಡ ಬಿಡುಗಡೆ ಆಗಿದೆ. ಇದರ ಆರಂಭಿಕ ಬೆಲೆ 39,999 ರೂ. ಆಗಿದ್ದು ಫೆಬ್ರವರಿ 28 ರಿಂದ ಖರೀದಿಗೆ ಸಿಗುತ್ತದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ