OnePlus Nord 2T 5G: ಒನ್‌ಪ್ಲಸ್‌ ನಾರ್ಡ್ 2T 5G ಬಿಡುಗಡೆ: ಟೆಕ್ ಪ್ರಿಯರ ಹುಬ್ಬೇರುವಂತೆ ಮಾಡಿದೆ ಈ ಫೋನ್

ಒನ್​ಪ್ಲಸ್ ಮತ್ತೊಂದು ಹೊಸ ಫೋನನ್ನು ಮಾರುಕಟ್ಟೆಯಲ್ಲಿ ರಿಲೀಸ್ ಮಾಡಿದ್ದು ಭರ್ಜರಿ ಸೌಂಡ್ ಮಾಡುತ್ತಿದೆ. ಅದುವೇ ಒನ್‌ಪ್ಲಸ್‌ ನಾರ್ಡ್ 2ಟಿ 5ಜಿ (OnePlus Nord 2T 5G) ಸ್ಮಾರ್ಟ್‌ಫೋನ್‌.

OnePlus Nord 2T 5G: ಒನ್‌ಪ್ಲಸ್‌ ನಾರ್ಡ್ 2T 5G ಬಿಡುಗಡೆ: ಟೆಕ್ ಪ್ರಿಯರ ಹುಬ್ಬೇರುವಂತೆ ಮಾಡಿದೆ ಈ ಫೋನ್
OnePlus Nord 2T 5G
Follow us
TV9 Web
| Updated By: Vinay Bhat

Updated on: May 20, 2022 | 2:12 PM

ಕಳೆದ ಎರಡು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿರುವ ಪ್ರಸಿದ್ಧ ಒನ್​ಪ್ಲಸ್ (OnePlus) ಕಂಪನಿ ಉತ್ತುಂಗದತ್ತ ಸಾಗುತ್ತಿದೆ. ಭಿನ್ನ ಮಾದರಿಯ ಮೊಬೈಲ್​ಗಳನ್ನು ಪರಿಚಯಿಸಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಇದೀಗ ಒನ್​ಪ್ಲಸ್ ಮತ್ತೊಂದು ಹೊಸ ಫೋನನ್ನು ಮಾರುಕಟ್ಟೆಯಲ್ಲಿ ರಿಲೀಸ್ ಮಾಡಿದ್ದು ಭರ್ಜರಿ ಸೌಂಡ್ ಮಾಡುತ್ತಿದೆ. ಅದುವೇ ಒನ್‌ಪ್ಲಸ್‌ ನಾರ್ಡ್ 2ಟಿ 5ಜಿ (OnePlus Nord 2T 5G) ಸ್ಮಾರ್ಟ್‌ಫೋನ್‌. ಬಂಪರ್ ಫೀಚರ್​ಗಳಿಂದ ಟೆಕ್ ಪ್ರಿಯರ ಹುಬ್ಬೇರುವಂತೆ ಮಾಡಿರುವ ಈ ಫೋನ್​ನಲ್ಲಿ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. 4,500mAh ಬ್ಯಾಟರಿ ಬ್ಯಾಕ್‌ಅಪ್​ಗೆ ಸೂಕ್ತವೆನಿಸುವ 65W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಉಳಿದಂತೆ ಇದರ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.

  1. ಒನ್‌ಪ್ಲಸ್‌ ನಾರ್ಡ್ 2T 5G ಒಟ್ಟು ಎರಡು ಮಾದರಿಗಳಲ್ಲಿ ಜಾಗತೀಕ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಇದರ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ EUR 399, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 32,600 ರೂ. ಎನ್ನಬಹುದು. ಹಾಗೆಯೇ 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆಯು EUR 499 (ಭಾರತದಲ್ಲಿ ಅಂದಾಜು 40,800ರೂ) ಆಗಿದೆ.
  2. ಈ ಫೊನ್ ಗ್ರೇ ಶ್ಯಾಡೋ ಮತ್ತು ಜೇಡ್ ಫಾಗ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಸದ್ಯಕ್ಕೆ ಯುರೋಪ್ ಮಾರುಕಟ್ಟೆಯಲ್ಲಿ ಅನಾವರಣಗೊಂಡಿರುವ ಒನ್‌ಪ್ಲಸ್‌ ನಾರ್ಡ್ 2T 5G ಸ್ಮಾರ್ಟ್​​ಫೋನ್ ಕೆಲವೇ ತಿಂಗಳಲ್ಲಿ ಭಾರತಕ್ಕೂ ಕಾಲಿಡಲಿದೆ.
  3. ಒನ್‌ಪ್ಲಸ್‌ ನಾರ್ಡ್ 2T 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.43 ಇಂಚಿನ HD+ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇಯ 90Hz ಸ್ಕ್ರೀನ್‌ ರೀಫ್ರೇಶ್‌ ರೇಟ್​ನಿಂದ ಕೂಡಿದೆ.
  4. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 12.1 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ.
  5. ಇದನ್ನೂ ಓದಿ
    Image
    Oppo Reno 8 Series: ಕ್ಯಾಮೆರಾ ಪ್ರಿಯರ ನಿದ್ದೆ ಕೆಡಿಸಿದ ಒಪ್ಪೋ ರೆನೋ 8 ಸರಣಿ: ಇದರಲ್ಲಿ ಅಂಥದ್ದೇನಿದೆ ನೋಡಿ
    Image
    Realme Narzo 50 5G Series: ಭಾರತದಲ್ಲಿ ಬಜೆಟ್ ಬೆಲೆಗೆ Realme Narzo 50 5G, Narzo 50 Pro 5G ಫೋನ್ ಬಿಡುಗಡೆ
    Image
    Moto Edge 30: 50MP ಕ್ಯಾಮೆರಾ, ಭರ್ಜರಿ ಬ್ಯಾಟರಿ: ಅತ್ಯಂತ ಹಗುರವಾದ ಮೋಟೋ ಎಡ್ಜ್‌ 30 ಫೋನ್ ಮಾರಾಟ ಆರಂಭ
    Image
    ಭಾರತೀಯ ಮಾರುಕಟ್ಟೆಗೆ ಬಂದಿದೆ Vivo ಕಂಪನಿಯ ಹೊಸ ಮೊಬೈಲ್, Vivo X80 Pro
  6. ಆಕರ್ಷಕವಾದ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸ್ಪೋರ್ಟಿ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ.
  7. ವಿಶೇಷವಾಗಿ ಈ ಫೋನ್​ನಲ್ಲಿ ನೈಟ್‌ಸ್ಕೇಪ್ ಅಲ್ಟ್ರಾ, ನೈಟ್ ಪೋರ್ಟ್ರೇಟ್, ಒಐಎಸ್, ಎಐ ವಿಡಿಯೋ ವರ್ಧನೆ, ಎಐ ಫೋಟೋ ವರ್ಧನೆ ಮತ್ತು ಡ್ಯುಯಲ್ ವ್ಯೂ ವಿಡಿಯೋದಂತಹ ವೈಶಿಷ್ಟ್ಯಗಳನ್ನು ನೀಡಲಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.
  8. ಒನ್‌ಪ್ಲಸ್‌ ನಾರ್ಡ್ 2T 5G ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 80W SuperVOOC ವೈರ್ಡ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ