OnePlus Nord 2T: ವಿದೇಶದಲ್ಲಿ ಧೂಳೆಬ್ಬಿಸಿದ ಈ ಸ್ಮಾರ್ಟ್‌ಫೋನ್ ಜುಲೈ 1ಕ್ಕೆ ಭಾರತದಲ್ಲಿ ರಿಲೀಸ್
ಒನ್‌ಪ್ಲಸ್ ನಾರ್ಡ್ 2T 5G ಸ್ಮಾರ್ಟ್‌ಫೋನ್ 4,500mAh ಅಥವಾ 5000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿರುವ ಸಾಧ್ಯತೆ ಇದೆ. ಈ ಫೋನ್ 65W SuperVOOC ವೈರ್ಡ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರಲಿದೆ.

ಕಳೆದ ಎರಡು ತಿಂಗಳುಗಳಿಂದ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡಿ ಭರ್ಜರಿ ಸುದ್ದಿಯಲ್ಲಿರುವ ಪ್ರಸಿದ್ಧ ಒನ್‌ಪ್ಲಸ್ (OnePlus) ಕಂಪನಿ ಉತ್ತುಂಗದತ್ತ ಸಾಗುತ್ತಿದೆ. ಭಿನ್ನ ಮಾದರಿಯ ಮೊಬೈಲ್ಗಳನ್ನು ಪರಿಚಯಿಸಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಇದೀಗ ಒನ್‌ಪ್ಲಸ್ ಮತ್ತೊಂದು ಹೊಸ ಫೋನನ್ನು ಭಾರತೀಯ ಮಾರುಕಟ್ಟೆಯಲ್ಲಿ ರಿಲೀಸ್ ಮಾಡಲು ಮುಂದಾಗಿದೆ. ಅದುವೇ ಒನ್‌ಪ್ಲಸ್ ನಾರ್ಡ್ 2ಟಿ 5ಜಿ (OnePlus Nord 2T 5G) ಸ್ಮಾರ್ಟ್‌ಫೋನ್. ಈ ಫೋನ್ ತಿಂಗಳ ಹಿಂದೆಯಷ್ಟೆ ವಿದೇಶದಲ್ಲಿ ರಿಲೀಸ್ ಆಗಿತ್ತು. ಇದೀಗ ಜುಲೈ ರಂದು ಈ ಫೋನ್ ದೇಶಕ್ಕೆ ಕಾಲಿಡಲಿದೆ. ಬಂಪರ್ ಫೀಚರ್ಗಳಿಂದ ಟೆಕ್ ಪ್ರಿಯರ ಹುಬ್ಬೇರುವಂತೆ ಮಾಡಿರುವ ಈ ಫೋನ್ನಲ್ಲಿ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಉಳಿದಂತೆ ಇದರ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.
ಒನ್‌ಪ್ಲಸ್ ನಾರ್ಡ್ 2T 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.43 ಇಂಚಿನ HD+ AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಈ ಡಿಸ್‌ಪ್ಲೇಯ 90Hz ಸ್ಕ್ರೀನ್ ರೀಫ್ರೇಶ್ ರೇಟ್ನಿಂದ ಕೂಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್ ಆಕ್ಸಿಜೆನ್ 12.1 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ.
TCS: ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಸಿಗಲಿದೆ ಚಿಪ್ ಆಧಾರಿತ ಇ- ಪಾಸ್ಪೋರ್ಟ್
ಆಕರ್ಷಕವಾದ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸ್ಪೋರ್ಟಿ ಸೆಲ್ಫಿ ಕ್ಯಾಮೆರಾ ಸಹ ಒಳಗೊಂಡಿದೆ. ವಿಶೇಷವಾಗಿ ಈ ಫೋನ್ನಲ್ಲಿ ನೈಟ್‌ಸ್ಕೇಪ್ ಅಲ್ಟ್ರಾ, ನೈಟ್ ಪೋರ್ಟ್ರೇಟ್, ಒಐಎಸ್, ಎಐ ವಿಡಿಯೋ ವರ್ಧನೆ, ಎಐ ಫೋಟೋ ವರ್ಧನೆ ಮತ್ತು ಡ್ಯುಯಲ್ ವ್ಯೂ ವಿಡಿಯೋದಂತಹ ವೈಶಿಷ್ಟ್ಯಗಳನ್ನು ನೀಡಲಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.
ಒನ್‌ಪ್ಲಸ್ ನಾರ್ಡ್ 2T 5G ಸ್ಮಾರ್ಟ್‌ಫೋನ್ 4,500mAh ಅಥವಾ 5000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿರುವ ಸಾಧ್ಯತೆ ಇದೆ. ಈ ಫೋನ್ 65W SuperVOOC ವೈರ್ಡ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರಲಿದೆ.
ಒನ್‌ಪ್ಲಸ್ ನಾರ್ಡ್ 2T 5G ಒಟ್ಟು ಎರಡು ಮಾದರಿಗಳಲ್ಲಿ ಬಿಡುಗಡೆ ಆಗುವ ನಿರೀಕ್ಷೆಯಿದೆ. ಇದರ ನಿಖರ ಬೆಲೆ ಬಹಿರಂಗವಾಗಿಲ್ಲ. ಮೂಲಗಳ ಪ್ರಕಾರ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ 28,999 ರೂ. ಹಾಗೆಯೇ 12GB RAM + 256GB ಸ್ಟೋರೇಜ್ ರೂಪಾಂತರಕ್ಕೆ 31,999 ರೂ. ಇರಬಹುದು. ಈ ಫೊನ್ ಗ್ರೇ ಶ್ಯಾಡೋ ಮತ್ತು ಜೇಡ್ ಫಾಗ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಸದ್ಯಕ್ಕೆ ಯುರೋಪ್ ಮಾರುಕಟ್ಟೆಯಲ್ಲಿ ಅನಾವರಣಗೊಂಡಿರುವ ಒನ್‌ಪ್ಲಸ್ ನಾರ್ಡ್ 2T 5G ಸ್ಮಾರ್ಟ್‌ಫೋನ್ ಕೆಲವೇ ದಿನಗಳಲ್ಲಿ ಭಾರತಕ್ಕೆ ಕಾಲಿಡಲಿದೆ.
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ