OnePlus Nord 2T: 25 ಸಾವಿರಕ್ಕಿಂತಲೂ ಕಡಿಮೆಗೆ ಖರೀದಿಸಿ ಒನ್‌ಪ್ಲಸ್ ನಾರ್ಡ್ 2T 5G: ಈ ಆಫರ್ ಮಿಸ್ ಮಾಡ್ಬೇಡಿ
Amazon Great Freedom Festival sale: ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ ನಡೆಯುತ್ತಿದ್ದು, ಒನ್‌ಪ್ಲಸ್ ನಾರ್ಡ್ 2ಟಿ ಫೋನನ್ನು ಅತ್ಯಂತ ಕಡಿಮೆ ಬೆಲೆಗೆ ಖರೀದಿಸಬಹುದು.
ಭಾರತದಲ್ಲಿ ಪ್ರೀಮಿಯಂ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿ ಭರ್ಜರಿ ಯಶಸ್ಸು ಕಂಡಿರುವ ಒನ್‌ಪ್ಲಸ್ (OnePlus) ಕಂಪನಿ ಇತ್ತೀಚೆಗಷ್ಟೆ ದೇಶದಲ್ಲಿ ಒನ್‌ಪ್ಲಸ್ ನಾರ್ಡ್ 2ಟಿ (OnePlus Nord 2T) ಫೋನನ್ನು ಅನಾವರಣ ಮಾಡಿತ್ತು. ಆಕರ್ಷಕ ಫೀಚರ್ಗಳಿಂದ ಕೂಡಿರುವ ಈ ಸ್ಮಾರ್ಟ್‌ಫೋನ್ ಇದೀಗ ಬಂಪರ್ ಡಿಸ್ಕೌಂಟ್ನಲ್ಲಿ ಕಾಣಿಸಿಕೊಂಡಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಗ್ರೇಟ್ ಫ್ರೀಡಂ ಫೆಸ್ಟಿವಲ್ ಸೇಲ್ (Amazon Great Freedom Festival sale) ನಡೆಯುತ್ತಿದ್ದು, ಈ ಫೋನನ್ನು ಅತ್ಯಂತ ಕಡಿಮೆ ಬೆಲೆಗೆ ಖರೀದಿಸಬಹುದು.
ಭಾರತದಲ್ಲಿ ಒನ್‌ಪ್ಲಸ್ ನಾರ್ಡ್ 2T 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB RAM + 128GB ಸ್ಟೋರೇಜ್ ಆಯ್ಕೆಗೆ 28,999 ರೂ. ಇದೆ. ಹಾಗೆಯೇ 12GB + 256GB ಮಾದರಿಯ ಆಯ್ಕೆಗೆ 33,999 ರೂಪಾಯಿಯನ್ನು ನಿಗದಿ ಮಾಡಲಾಗಿದೆ. ನೀವು ಎಸ್ಬಿಐ ಕಾರ್ಡ್ ಮೂಲಕ ಖರೀದಿಸಿದರೆ 2,000 ರೂ. ಗಳ ರಿಯಾಯಿತಿ ಸಿಗಲಿದೆ. ಆಗ 8GB RAM ಆಯ್ಕೆಯ ಫೋನ್ 26,999 ರೂ. ಗೆ ನಿಮ್ಮದಾಗಿಸಬಹುದು. ಅಲ್ಲದೆ 3000 ರೂ. ಎಕ್ಸ್ಚೇಂಜ್ ಆಫರ್ ಕೂಡ ಇದೆ. ಹೀಗಾಗಿ 29000 ರೂ. ವಿನ ಫೋನನ್ನು ನೀವು 25000 ರೂ. ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದು.
ಒನ್‌ಪ್ಲಸ್ ನಾರ್ಡ್ 2T 5G ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದೆ. ಆಕ್ಟಾ–ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಅನ್ನು ಆಕ್ಷಿಜನ್ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಬೆಂಬಲವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ–ವೈಡ್ ಲೆನ್ಸ್ ಹೊಂದಿದ್ದು, 120 ಡಿಗ್ರಿಗಳ ಫೀಲ್ಡ್–ಆಫ್–ವ್ಯೂ ನೀಡಲಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಒನ್‌ಪ್ಲಸ್ ನಾರ್ಡ್ 2T 5G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS/ NavIC, NFC, ಮತ್ತು USB ಟೈಪ್-C ಪೋರ್ಟ್ ಸೇರಿದೆ. ಅಂತೆಯೆ ಇನ್–ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ನೀಡಲಾಗಿದೆ.
ಮತ್ತಷ್ಟು ಟೆಕ್ನಾಲಜಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:12 pm, Sun, 7 August 22