ಒನ್​ಪ್ಲಸ್​ನ ಈ ಫೋನ್‌ ಮೇಲೆ ಭಾರಿ ರಿಯಾಯಿತಿ: ರೂ. 30 ಸಾವಿರಕ್ಕಿಂತ ಕಡಿಮೆ

OnePlus Nord 3 5G Discounts: ಬಿಡುಗಡೆಯ ಸಮಯದಲ್ಲಿ ಒನ್​ಪ್ಲಸ್ ನಾರ್ಡ್ 3 5G ಸ್ಮಾರ್ಟ್‌ಫೋನ್ ಬೆಲೆ ರೂ. 33,999 ನಿಗದಿಪಡಿಸಲಾಗಿತ್ತು. ಕಂಪನಿಯು ಈ ವರ್ಷದ ಜುಲೈನಲ್ಲಿ ಈ ಫೋನ್ ಅನ್ನು ಭಾರತಕ್ಕೆ ಪರಿಚಯಿಸಿತ್ತು. ಇದೀಗ ಈ ಫೋನಿನ ಮೇಲೆ ಭಾರೀ ರಿಯಾಯಿತಿಯನ್ನು ನೀಡಲಾಗಿದೆ.

ಒನ್​ಪ್ಲಸ್​ನ ಈ ಫೋನ್‌ ಮೇಲೆ ಭಾರಿ ರಿಯಾಯಿತಿ: ರೂ. 30 ಸಾವಿರಕ್ಕಿಂತ ಕಡಿಮೆ
OnePlus Nord 3 5G
Follow us
Vinay Bhat
|

Updated on: Dec 30, 2023 | 11:47 AM

ಚೀನಾದ ಪ್ರಸಿದ್ಧ ಸ್ಮಾರ್ಟ್‌ಫೋನ್ ದೈತ್ಯ ಒನ್​ಪ್ಲಸ್​ (OnePlus) ಮೊಬೈಲ್​ಗೆ ಟೆಕ್ ಮಾರುಕಟ್ಟೆಯಲ್ಲಿ ಭರ್ಜರಿ ಡಿಮ್ಯಾಂಡ್ ಇದೆ. ಆರಂಭದಲ್ಲಿ ಪ್ರೀಮಿಯಂ ಗ್ರಾಹಕರನ್ನು ಗುರಿಯಾಗಿಸಿಕೊಂಡು ಗುರಿಯಾಗಿಸಿಕೊಂಡು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದ ಕಂಪನಿ ನಂತರ ಬಜೆಟ್ ಪ್ರಿಯರಿಗಾಗಿ ಆಕರ್ಷಕ ಫೋನ್‌ಗಳನ್ನು ಅನಾವರಣ ಮಾಡತೊಡಗಿತು. ಜೊತೆಗೆ ಮಧ್ಯಮ ಶ್ರೇಣಿಯಲ್ಲಿ ಕೂಡ ಫೋನುಗಳನ್ನು ರಿಲೀಸ್ ಮಾಡುತ್ತಿದೆ. ಈ ಸಾಲಿನಲ್ಲಿ, ಒನ್​ಪ್ಲಸ್ ಇತ್ತೀಚೆಗೆ ನಾರ್ಡ್ 3 ಎಂಬ ಹೊಸ ಫೋನ್ ಅನ್ನು ತಂದಿದೆ.

ಬಿಡುಗಡೆಯ ಸಮಯದಲ್ಲಿ ಒನ್​ಪ್ಲಸ್ ನಾರ್ಡ್ 3 5G ಸ್ಮಾರ್ಟ್‌ಫೋನ್ ಬೆಲೆ ರೂ. 33,999 ನಿಗದಿಪಡಿಸಲಾಗಿತ್ತು. ಕಂಪನಿಯು ಈ ವರ್ಷದ ಜುಲೈನಲ್ಲಿ ಈ ಫೋನ್ ಅನ್ನು ಭಾರತಕ್ಕೆ ಪರಿಚಯಿಸಿತ್ತು. ಇದೀಗ ಈ ಫೋನಿನ ಮೇಲೆ ಭಾರೀ ರಿಯಾಯಿತಿಯನ್ನು ನೀಡಲಾಗಿದೆ. ಆಯ್ದ ಕ್ರೆಡಿಟ್ ಕಾರ್ಡ್‌ ಉಪಯೋಗಿಸಿ ಖರೀದಿಸಿದರೆ, ಈ ಫೋನ್ ಮೇಲೆ ಹೆಚ್ಚುವರಿ ರೂ. 2 ಸಾವಿರ ರಿಯಾಯಿತಿ ಪಡೆಯಬಹುದು. ಇದರ 8 GB RAM, 128 GB ಸ್ಟೋರೇಜ್ ರೂಪಾಂತರದ ಮೂಲ ಬೆಲೆ ರೂ. 33,999 ಮತ್ತು ರಿಯಾಯಿತಿಯ ಭಾಗವಾಗಿ ರೂ. 29,999 ಗೆ ಖರೀದಿಸಬಹುದು.

iQoo Neo 9 series: ಐಕ್ಯೂಯಿಂದ ಬಂಪರ್ ಫೋನ್ ಬಿಡುಗಡೆ: ಐಕ್ಯೂ ನಿಯೋ 9, ನಿಯೋ 9 ಪ್ರೊ ಅನಾವರಣ

ಇದನ್ನೂ ಓದಿ
Image
ನಿಮ್ಮ 4G ಫೋನ್‌ನಲ್ಲಿ 5G ಸ್ಪೀಡ್​ನಂತೆ ಇಂಟರ್ನೆಟ್ ವರ್ಕ್ ಆಗಬೇಕಾ?
Image
ಸ್ವದೇಶಿ ಸ್ಮಾರ್ಟ್‌ಫೋನ್ ಲಾವಾ ಸ್ಟೋರ್ಮ್ 5G ಮಾರಾಟ ಆರಂಭ: ಇಂದೇ ಖರೀದಿಸಿ
Image
ಈ ವರ್ಷ ಬಿಡುಗಡೆಯಾದ ಬೆಸ್ಟ್ ಬಜೆಟ್ ಸ್ಮಾರ್ಟ್​ಫೋನ್ಸ್ ಇಲ್ಲಿದೆ ನೋಡಿ
Image
ನೀವು ಸ್ಮಾರ್ಟ್​ಫೋನ್ ಅನ್ನು ಈರೀತಿ ಚಾರ್ಜ್ ಮಾಡುತ್ತಿದ್ದರೆ ಇಲ್ಲಿ ಗಮನಿಸಿ

16 GB RAM ಮತ್ತು 256 GB ರೂಪಾಂತರದ ಮೂಲ ಬೆಲೆ ರೂ. 37,999 ಆದರೆ 4 ಸಾವಿರ ರಿಯಾಯಿತಿಯೊಂದಿಗೆ ರೂ. 33,999 ಕ್ಕೆ ಈ ಫೋನನ್ನು ನಿಮ್ಮದಾಗಿಸಬಹುದು. ಈ ಸ್ಮಾರ್ಟ್​ಫೋನ್ ಮಿಸ್ಟಿ ಗ್ರೀನ್ ಮತ್ತು ಟೆಂಪೆಸ್ಟ್ ಗ್ರೇ ಬಣ್ಣಗಳಲ್ಲಿ ಲಭ್ಯವಿದೆ. ಇವುಗಳ ಜೊತೆಗೆ ಐಸಿಐಸಿಐ ಬ್ಯಾಂಕ್, ಸಿಟಿ ಬ್ಯಾಂಕ್, ಒನ್ ಕಾರ್ಡ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸುವವರಿಗೆ ರೂ. 2 ಸಾವಿರ ಹೆಚ್ಚುವರಿ ರಿಯಾಯಿತಿ ಸಿಗಲಿದೆ.

ಒನ್​ಪ್ಲಸ್ ನಾರ್ಡ್ 3 5G ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಇದು 6.74-ಇಂಚಿನ AMOLED ಡಿಸ್​ಪ್ಲೇಯನ್ನು ಹೊಂದಿದೆ. ಇದು 120Hz ನ ರಿಫ್ರೆಶ್ ದರದಿಂದ ಕೂಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಶನ್ 9000 ಪ್ರೊಸೆಸರ್‌ನಿಂದ ಚಾಲಿತವಾಗಿದೆ. ಆಂಡ್ರಾಯ್ಡ್ 13 ಆಧಾರಿತ Oxygen OS 13 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಕ್ಯಾಮೆರಾ ವಿಚಾರಕ್ಕೆ ಬಂದರೆ, ಈ ಫೋನ್ 50 ಮೆಗಾಪಿಕ್ಸೆಲ್ ಹಿಂಬದಿಯ ಕ್ಯಾಮೆರಾ, 8 ಎಂಪಿ ಅಲ್ಟ್ರಾ ವೈಡ್ ಕ್ಯಾಮೆರಾ ಮತ್ತು 2 ಎಂಪಿ ಮ್ಯಾಕ್ರೋ ಲೆನ್ಸ್ ಕ್ಯಾಮೆರಾವನ್ನು ಹೊಂದಿದೆ. ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್‌ಗಳ ಮುಂಭಾಗದ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಫೋನ್ 5,000mAh ಬ್ಯಾಟರಿಯಿಂದ ಚಾಲಿತವಾಗಿದ್ದು 80W SuperVOOC ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ