ಇತ್ತೀಚೆಗಷ್ಟೆ ಭಾರತದಲ್ಲಿ ಒನ್ಪ್ಲಸ್ ನಾರ್ಡ್ ಸಿಇ 3 ಲೈಟ್ (OnePlus Nord CE 3 Lite) ಹೆಸರಿನ ಫೋನನ್ನು ರಿಲೀಸ್ ಮಾಡಿ ಭರ್ಜರಿ ಸದ್ದು ಮಾಡಿದ್ದ ಪ್ರಸಿದ್ಧ ಒನ್ಪ್ಲಸ್ ಕಂಪನಿ ಇದೀಗ ಪುನಃ ಬಂದಿದೆ. ಸತತವಾಗಿ ಹಲವಾರು ಹೊಸ ಸ್ಮಾರ್ಟ್ಫೋನ್ಗಳನ್ನು (Smartphones) ಬಿಡುಗಡೆ ಮಾಡುತ್ತಿರುವ ಒನ್ಪ್ಲಸ್ ಕಂಪನಿ ಹೊಸ ಒನ್ಪ್ಲಸ್ ನಾರ್ಡ್ 3 (OnePlus Nord 3) ಸ್ಮಾರ್ಟ್ಫೋನನ್ನು ರಿಲೀಸ್ ಮಾಡಲು ಮುಂದಾಗಿದೆ. ವೆಬ್ಸೈಟ್ನ ಸೋರ್ಸ್ ಕೋಡ್ನಲ್ಲಿ ಈ ಫೋನ್ ಕಾಣಿಸಿಕೊಂಡಿದ್ದು ಕೆಲವೇ ವಾರಗಳಲ್ಲಿ ಅನಾವರಣಗೊಳ್ಳಲಿದೆ ಎಂದು ಹೇಳಲಾಗಿದೆ. ಇದು ಒನ್ಪ್ಲಸ್ ನಾರ್ಡ್ 2 ವಿನ ಮುಂದಿನ ವರ್ಷನ್ ಆಗಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು, ಆಕರ್ಷಕ ಫೀಚರ್ಗಳಿಂದ ಆವೃತ್ತವಾಗಿದೆ.
ಒನ್ಪ್ಲಸ್ ನಾರ್ಡ್ 3 ಸ್ಮಾರ್ಟ್ಫೋನ್ನ ಅಧಿಕೃತ ಬೆಲೆ ಬಹಿರಂಗವಾಗಿಲ್ಲ. ಆದರೆ, ಮೂಲಗಳ ಪ್ರಕಾರ 30,000-35,000 ರೂ. ಒಳಗೆ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಹಿಂದೆ ಬಿಡುಗಡೆ ಆದ ಒನ್ಪ್ಲಸ್ ನಾರ್ಡ್ 2 ಆರಂಭಿಕ ಬೆಲೆ 27,999 ರೂ. ಆಗಿತ್ತು. ಈಗ ಹೊಸ ಫೋನ್ ಸಾಕಷ್ಟು ಅಭಿವೃದ್ದಿ ಹೊಂದಿ ನೂತನ ಆಯ್ಕೆಗಳೊಂದಿಗೆ ಬರಲಿದೆ. ಈ ಫೋನಿನ ಫೀಚರ್ಸ್ ಕುರಿತ ಕೆಲ ಮಾಹಿತಿ ಆನ್ಲೈನಲ್ನಲ್ಲಿ ಸೋರಿಕೆ ಆಗಿದೆ.
Tech Tips: ಇನ್ನುಂದೆ ಮೊಬೈಲ್ ಕದ್ದರೆ, ಕಳೆದು ಹೋದರೆ ಟೆನ್ಶನ್ ಬೇಡ: ಸರ್ಕಾರ ನಿಮ್ಮ ಮೊಬೈಲ್ ಹುಡುಕಿ ಕೊಡುತ್ತೆ
ಒನ್ಪ್ಲಸ್ ನಾರ್ಡ್ 3 ಫೋನ್ನಲ್ಲಿ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ6.7 ಇಂಚಿನ ಅಮೋಲೆಡ್ ಪೂರ್ಣ ಹೆಚ್‌ಡಿ+ ಡಿಸ್‌ಪ್ಲೇ ಇರುವ ಸಾಧ್ಯತೆ ಇದೆ. ಇದು 120Hz ರಿಫ್ರೆಶ್ ರೇಟ್ ಆಯ್ಕೆ ನೀಡಲಾಗಿದೆ. ಜೊತೆಗೆ ಬಯೋಮೆಟ್ರಿಕ್ ಭದ್ರತೆಗಾಗಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಇನ್‌ಡಿಸ್‌ಪ್ಲೇ ನಲ್ಲಿ ನೀಡಲಾಗಿದೆಯಂತೆ.
ಈ ಫೋನಿನಲ್ಲಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಇದ್ದರೂ ಅಚ್ಚರಿ ಪಡಬೇಕಿಲ್ಲ. ಬಲಿಷ್ಠವಾದ ಮೀಡಿಯಾಟೆಕ್ ಡೈಮನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 12GB RAM ಹಾಗೂ 256GB ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಬಹುದು ಎನ್ನಲಾಗಿದೆ. ಆಂಡ್ರಾಯ್ಡ್ 13 ಬಂಬಲ ಪಡೆದಿರಲಿದೆ. ಮೈಕ್ರೊ ಎಸ್ಡಿ ಕಾರ್ಡ್ ಮೂಲಕ ಸ್ಟೋರೇಜ್ ಅನ್ನು ಹೆಚ್ಚಿಸಬಹುದು.
ಒನ್ಪ್ಲಸ್ ನಾರ್ಡ್ 3 ಕ್ಯಾಮೆರಾ ವಿಚಾರಕ್ಕೆ ಬಂದರೆ, ಇದರಲ್ಲಿರುವ ಹಿಂಭಾಗದ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸಾಮರ್ಥ್ಯದಲ್ಲಿ ಇರಲಿದೆ. ಇದು ಸೋನಿ ಸೆನ್ಸಾರ್ ಸಾಮರ್ಥ್ಯ ಇರುವ ಸಾಧ್ಯತೆ ಇದೆ. ಹಾಗೆಯೆ 8 ಮೆಗಾಪಿಕ್ಸೆಲ್ನ ಸೆಕೆಂಡರಿ ಕ್ಯಾಮೆರಾ ಇರಲಿದ್ದು 2 ಮೆಗಾಪಿಕ್ಸೆಲ್ನ ಕ್ಯಾಮೆರಾ ಕೂಡ ಇರಲಿದೆ. ಮುಂಭಾಗ ವಿಡಿಯೋ ಕರೆ ಮತ್ತು ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಈ ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಬ್ಯಾಟರಿಯನ್ನು ಒಳಗೊಂಡಿರುವುದು ಬಹುತೇಕ ಖಚಿತ. ಇದು ಬರೋಬ್ಬರಿ 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿರುವ ಜೊತೆಗೆ ಹಾಟ್‌ಸ್ಪಾಟ್, ಬ್ಲೂಟೂತ್ 5.1, ವೈಫೈ, ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಎಂದಿನಂತೆ ಇರಲಿದೆ. ಈ ತಿಂಗಳ ಅಂತ್ಯದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಒನ್ಪ್ಲಸ್ ನಾರ್ಡ್ 3 ಭಾರತದಲ್ಲಿ ಬಿಡುಗಡೆ ಆಗಲಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ