AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OnePlus Nord 3: ಭಾರತಕ್ಕೆ ಬರುತ್ತಿದೆ ಬಹುನಿರೀಕ್ಷಿತ ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ ನೋಡಿ

ವಾರಗಳ ಹಿಂದೆಯಷ್ಟೆ ದೇಶದಲ್ಲಿ ಒನ್​ಪ್ಲಸ್ ನಾರ್ಡ್ ಸಿಇ 3 ಲೈಟ್ (OnePlus Nord CE 3 Lite) ಹೆಸರಿನ ಫೋನನ್ನು ರಿಲೀಸ್ ಮಾಡಿದ್ದ ಒನ್​ಪ್ಲಸ್ ಇದೀಗ ಒನ್​ಪ್ಲಸ್ ನಾರ್ಡ್ 3 (OnePlus Nord 3) ಸ್ಮಾರ್ಟ್​ಫೋನನ್ನು ಬಿಡುಗಡೆ ಮಾಡಲು ಮುಂದಾಗಿದೆ.

OnePlus Nord 3: ಭಾರತಕ್ಕೆ ಬರುತ್ತಿದೆ ಬಹುನಿರೀಕ್ಷಿತ ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ ನೋಡಿ
OnePlus Nord 3
Follow us
Vinay Bhat
|

Updated on:Apr 15, 2023 | 12:35 PM

ಭಾರತದಲ್ಲಿ ತನ್ನ ನಾರ್ಡ್ ಸರಣಿಯ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿರುವ ಒನ್​ಪ್ಲಸ್​ ಕಂಪನಿ ಇದೀಗ ಪುನಃ ಬಂದಿದೆ. ಸತತವಾಗಿ ಹಲವಾರು ಹೊಸ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿರುವ ಒನ್​ಪ್ಲಸ್, ಇದೀಗ ಭಾರತೀಯ ಮಾರುಕಟ್ಟೆಯಲ್ಲಿ ಮತ್ತೊಂದು ಹೊಸ ಫೋನ್ ಅನ್ನು ಅನಾವರಣ ಮಾಡಲು ಸಿದ್ಧವಾಗಿದೆ. ವಾರಗಳ ಹಿಂದೆಯಷ್ಟೆ ದೇಶದಲ್ಲಿ ಒನ್​ಪ್ಲಸ್ ನಾರ್ಡ್ ಸಿಇ 3 ಲೈಟ್ (OnePlus Nord CE 3 Lite) ಹೆಸರಿನ ಫೋನನ್ನು ರಿಲೀಸ್ ಮಾಡಿದ್ದ ಒನ್​ಪ್ಲಸ್ ಇದೀಗ ಒನ್​ಪ್ಲಸ್ ನಾರ್ಡ್ 3 (OnePlus Nord 3) ಸ್ಮಾರ್ಟ್​ಫೋನನ್ನು ಬಿಡುಗಡೆ ಮಾಡಲು ಮುಂದಾಗಿದೆ. ಇದು ಒನ್​ಪ್ಲಸ್ ನಾರ್ಡ್ 2 ವಿನ ಮುಂದಿನ ವರ್ಷನ್. ಕೆಲವೇ ವಾರಗಳಲ್ಲಿ ಈ ಫೋನ್ ಭಾರತೀಯ ಮಾರುಕಟ್ಟೆಗೆ ಬರಲಿದೆ ಎಂದು ವರದಿ ಆಗಿದೆ.

ಒನ್​ಪ್ಲಸ್ ನಾರ್ಡ್ 3 ಸ್ಮಾರ್ಟ್​ಫೋನ್​ನ ಅಧಿಕೃತ ಬೆಲೆ ಬಹಿರಂಗವಾಗಿಲ್ಲ. ಆದರೆ, ಮೂಲಗಳ ಪ್ರಕಾರ 30,000-40,000 ರೂ. ಒಳಗೆ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಹಿಂದೆ ಬಿಡುಗಡೆ ಆದ ಒನ್​ಪ್ಲಸ್ ನಾರ್ಡ್ 2 ಆರಂಭಿಕ ಬೆಲೆ 27,999 ರೂ. ಆಗಿದೆ. ಈಗ ಹೊಸ ಫೋನ್ ಸಾಕಷ್ಟು ಅಭಿವೃದ್ದಿ ಹೊಂದಿ ನೂತನ ಆಯ್ಕೆಗಳೊಂದಿಗೆ ಬರಲಿದೆ. ಈ ಫೋನಿನ ಫೀಚರ್ಸ್ ಕುರಿತ ಕೆಲ ಮಾಹಿತಿ ಆನ್​ಲೈನಲ್​ನಲ್ಲಿ ಸೋರಿಕೆ ಆಗಿದೆ.

ಒನ್​ಪ್ಲಸ್ ನಾರ್ಡ್ 3 ಫೋನ್​ನಲ್ಲಿ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ6.7 ಇಂಚಿನ ಅಮೋಲೆಡ್‌ ಪೂರ್ಣ ಹೆಚ್‌ಡಿ+ ಡಿಸ್‌ಪ್ಲೇ ಇರುವ ಸಾಧ್ಯತೆ ಇದೆ. ಇದು 120Hz ರಿಫ್ರೆಶ್ ರೇಟ್‌ ಆಯ್ಕೆ ನೀಡಲಾಗಿದೆ. ಜೊತೆಗೆ ಬಯೋಮೆಟ್ರಿಕ್ ಭದ್ರತೆಗಾಗಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಇನ್‌ಡಿಸ್‌ಪ್ಲೇ ನಲ್ಲಿ ನೀಡಲಾಗಿದೆಯಂತೆ.

ಇದನ್ನೂ ಓದಿ
Image
Realme Narzo N55: ಬೆಸ್ಟ್ ಫೋನ್, ಬಜೆಟ್ ದರಕ್ಕೆ ದೊರೆಯುತ್ತಿದೆ ರಿಯಲ್​ಮಿ ಫೋನ್
Image
Oppo A1 5G: ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಲಗ್ಗೆ ಇರಿಸಿದೆ ಒಪ್ಪೊ ಹೊಸ ಫೋನ್
Image
Xiaomi 13 Pro: 10 ಸಾವಿರ ಡಿಸ್ಕೌಂಟ್​ನಲ್ಲಿ ಲಭ್ಯವಾಗುತ್ತಿದೆ ಶಓಮಿ ಸ್ಮಾರ್ಟ್​ಫೋನ್
Image
Best Smartphones: 10,000 ರೂ. ಒಳಗಿನ ಬೆಸ್ಟ್ ಬಜೆಟ್ ಸ್ಮಾರ್ಟ್​ಫೋನ್ಸ್ ಇಲ್ಲಿದೆ ನೋಡಿ

WhatsApp New Feature: ವಾಟ್ಸ್​ಆ್ಯಪ್​ನಲ್ಲಿ ವಿಡಿಯೋ ಮೆಸೇಜ್ ಆಯ್ಕೆ: ಹೊಸ ಫೀಚರ್ ಕೇಳಿ ದಂಗಾದ ಬಳಕೆದಾರರು

ಈ ಫೋನಿನಲ್ಲಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಇದ್ದರೂ ಅಚ್ಚರಿ ಪಡಬೇಕಿಲ್ಲ. ಬಲಿಷ್ಠವಾದ ಮೀಡಿಯಾಟೆಕ್ ಡೈಮನ್ಸಿಟಿ 900 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 12GB RAM ಹಾಗೂ 256GB ಇಂಟರ್ನಲ್‌ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬರಬಹುದು ಎನ್ನಲಾಗಿದೆ. ಆಂಡ್ರಾಯ್ಡ್ 13 ಬಂಬಲ ಪಡೆದಿರಲಿದೆ. ಮೈಕ್ರೊ ಎಸ್​ಡಿ ಕಾರ್ಡ್ ಮೂಲಕ ಸ್ಟೋರೇಜ್ ಅನ್ನು ಹೆಚ್ಚಿಸಬಹುದು.

ಒನ್​ಪ್ಲಸ್ ನಾರ್ಡ್ 3 ಕ್ಯಾಮೆರಾ ವಿ‍ಚಾರಕ್ಕೆ ಬಂದರೆ, ಇದರಲ್ಲಿರುವ ಹಿಂಭಾಗದ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸಾಮರ್ಥ್ಯದಲ್ಲಿ ಇರಲಿದೆ. ಇದು ಸೋನಿ ಸೆನ್ಸಾರ್ ಸಾಮರ್ಥ್ಯ ಇರುವ ಸಾಧ್ಯತೆ ಇದೆ. ಹಾಗೆಯೆ 8 ಮೆಗಾಪಿಕ್ಸೆಲ್​ನ ಸೆಕೆಂಡರಿ ಕ್ಯಾಮೆರಾ ಇರಲಿದ್ದು 2 ಮೆಗಾಪಿಕ್ಸೆಲ್​ನ ಕ್ಯಾಮೆರಾ ಕೂಡ ಇರಲಿದೆ. ಮುಂಭಾಗ ವಿಡಿಯೋ ಕರೆ ಮತ್ತು ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಈ ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಬ್ಯಾಟರಿಯನ್ನು ಒಳಗೊಂಡಿರುವುದು ಬಹುತೇಕ ಖಚಿತ. ಇದು ಬರೋಬ್ಬರಿ 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿರುವ ಜೊತೆಗೆ ಹಾಟ್‌ಸ್ಪಾಟ್‌, ಬ್ಲೂಟೂತ್‌ 5.1, ವೈಫೈ, ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಎಂದಿನಂತೆ ಇರಲಿದೆ. ಈ ತಿಂಗಳ ಅಂತ್ಯದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಒನ್​ಪ್ಲಸ್ ನಾರ್ಡ್ 3 ಭಾರತದಲ್ಲಿ ಬಿಡುಗಡೆ ಆಗಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Sat, 15 April 23

ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​