AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

OnePlus Nord CE 2 5G: ಬಹುನಿರೀಕ್ಷಿತ ಒನ್‌ಪ್ಲಸ್‌ ನಾರ್ಡ್‌ CE 2 5G ಫೋನ್ ಬಿಡುಗಡೆ: ಇದನ್ನು ಖರೀದಿಸಲು ಕ್ಯೂ ಗ್ಯಾರಂಟಿ

OnePlus Nord CE 2 5G Price: ದೇಶದಲ್ಲಿ ಬಹುನಿರೀಕ್ಷಿತ ಹೊಸ ಒನ್‌ಪ್ಲಸ್‌ ನಾರ್ಡ್‌ ಸಿಇ 2 5G (OnePlus Nord CE 2 5G) ಸ್ಮಾರ್ಟ್‌ಫೋನ್‌ ಅನಾವರಣಗೊಂಡಿದೆ. ಈ ಹಿಂದಿನ ಸರಣಿಯಂತೆ ಇದುಕೂಡ ಸಾಕಷ್ಟು ವಿಶೇಷತೆಗಳಿಂದ ಕೂಡಿದ್ದು ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿ ಪವರ್, ಮೀಡಿಯಾ ಟೆಕ್ ಡೈಮೆನ್ಸಿಟಿ ಪ್ರೊಸೆಸರ್‌ ಬಲವನ್ನು ಹೊಂದಿದೆ.

OnePlus Nord CE 2 5G: ಬಹುನಿರೀಕ್ಷಿತ ಒನ್‌ಪ್ಲಸ್‌ ನಾರ್ಡ್‌ CE 2 5G ಫೋನ್ ಬಿಡುಗಡೆ: ಇದನ್ನು ಖರೀದಿಸಲು ಕ್ಯೂ ಗ್ಯಾರಂಟಿ
OnePlus Nord CE 2 5G
TV9 Web
| Edited By: |

Updated on: Feb 18, 2022 | 7:32 AM

Share

ಭಾರತದಲ್ಲಿ ಈ ಹಿಂದೆ ತನ್ನ ನಾರ್ಡ್ ಸರಣಿಯ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಮಾರುಕಟಟ್ಟೆಯಲ್ಲಿ ಧೂಳೆಬ್ಬಿಸಿದ್ದ ಒನ್​ಪ್ಲಸ್ ಕಂಪನಿ ಇದೀಗ ಮತ್ತೆ ಬಂದಿದೆ. ದೇಶದಲ್ಲಿ ಬಹುನಿರೀಕ್ಷಿತ ಹೊಸ ಒನ್‌ಪ್ಲಸ್‌ ನಾರ್ಡ್‌ ಸಿಇ 2 5G (OnePlus Nord CE 2 5G) ಸ್ಮಾರ್ಟ್‌ಫೋನ್‌ ಅನಾವರಣಗೊಂಡಿದೆ. ಇದು ಕಳೆದ ವರ್ಷ ಬಿಡುಗಡೆ ಆಗಿ ಸಾಕಷ್ಟು ಬೇಡಿಕೆ ಸೃಷ್ಟಿಸಿದ್ದ ಒನ್‌ಪ್ಲಸ್‌ ನಾರ್ಡ್‌ CE 5G ಯ ​​ಉತ್ತರಾಧಿಕಾರಿಯಾಗಿದೆ. ಈ ಹಿಂದಿನ ಸರಣಿಯಂತೆ ಇದುಕೂಡ ಸಾಕಷ್ಟು ವಿಶೇಷತೆಗಳಿಂದ ಕೂಡಿದ್ದು ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿ ಪವರ್, ಮೀಡಿಯಾ ಟೆಕ್ ಡೈಮೆನ್ಸಿಟಿ ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗಾದ್ರೆ ಭಾರತದಲ್ಲಿ ಇದರ ಬೆಲೆ ಎಷ್ಟು?, ಉಳಿದಂತೆ ಇತರೆ ವಿಶೇಷತೆಗಳು ಏನು ಎಂಬುದನ್ನು ನೋಡುವುದಾದರೆ…

ಏನು ವಿಶೇಷತೆ?:

ಭಾರತದಲ್ಲಿ ರಿಲೀಸ್ ಆಗಿರುವ ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಂಪನಿಯ OxygenOS 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ 119-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಈ ಎರಡೂ ಕ್ಯಾಮೆರಾಗಳು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಬೆಂಬಲದೊಂದಿಗೆ ಬರುತ್ತವೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಕೂಡ ಅಳವಡಿಸಲಾಗಿದೆ.

ದೀರ್ಘ ಬಾಳಿಕೆ ಬರುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್‌-ಸಿ ಮೂಲಕ 65W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ.

ಬೆಲೆ ಎಷ್ಟು?:

ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಎರಡು ಮಾದರಿಯಲ್ಲಿ ಬಿಡುಗಡೆ ಆಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 23,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 24,999 ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್, ಚಿಲ್ಲರೆ ಅಂಗಡಿಗಳಲ್ಲಿ ಫೆಬ್ರವರಿ 22 ರಿಂದ ಖರೀದಿಗೆ ಸಿಗಲಿದೆ.

Tips and Tricks: ಈ ಟಿಪ್ಸ್​ ಮತ್ತು ಟ್ರಿಕ್​ಗಳನ್ನು ಪ್ರಯೋಗಿಸಿ ನಿಮ್ಮ ಸ್ಮಾರ್ಟ್​ಫೋನ್ ಅನ್ನು ಸೂಪರ್ ಫಾಸ್ಟ್ ಮಾಡಿ

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ