ಭಾರತದಲ್ಲಿ ಈ ಹಿಂದೆ ತನ್ನ ನಾರ್ಡ್ ಸರಣಿಯ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡಿ ಮಾರುಕಟಟ್ಟೆಯಲ್ಲಿ ಧೂಳೆಬ್ಬಿಸಿದ್ದ ಒನ್‌ಪ್ಲಸ್ ಕಂಪನಿ ಇದೀಗ ಮತ್ತೆ ಬಂದಿದೆ. ದೇಶದಲ್ಲಿ ಬಹುನಿರೀಕ್ಷಿತ ಹೊಸ ಒನ್‌ಪ್ಲಸ್ ನಾರ್ಡ್ ಸಿಇ 2 5G (OnePlus Nord CE 2 5G) ಸ್ಮಾರ್ಟ್‌ಫೋನ್ ಅನಾವರಣಗೊಂಡಿದೆ. ಇದು ಕಳೆದ ವರ್ಷ ಬಿಡುಗಡೆ ಆಗಿ ಸಾಕಷ್ಟು ಬೇಡಿಕೆ ಸೃಷ್ಟಿಸಿದ್ದ ಒನ್‌ಪ್ಲಸ್ ನಾರ್ಡ್ CE 5G ಯ ಉತ್ತರಾಧಿಕಾರಿಯಾಗಿದೆ. ಈ ಹಿಂದಿನ ಸರಣಿಯಂತೆ ಇದುಕೂಡ ಸಾಕಷ್ಟು ವಿಶೇಷತೆಗಳಿಂದ ಕೂಡಿದ್ದು ಆಕರ್ಷಕ ಕ್ಯಾಮೆರಾ, ಅತ್ಯುತ್ತಮ ಬ್ಯಾಟರಿ ಪವರ್, ಮೀಡಿಯಾ ಟೆಕ್ ಡೈಮೆನ್ಸಿಟಿ ಪ್ರೊಸೆಸರ್ ಬಲವನ್ನು ಹೊಂದಿದೆ. ಹಾಗಾದ್ರೆ ಭಾರತದಲ್ಲಿ ಇದರ ಬೆಲೆ ಎಷ್ಟು?, ಉಳಿದಂತೆ ಇತರೆ ವಿಶೇಷತೆಗಳು ಏನು ಎಂಬುದನ್ನು ನೋಡುವುದಾದರೆ…
ಏನು ವಿಶೇಷತೆ?:
ಭಾರತದಲ್ಲಿ ರಿಲೀಸ್ ಆಗಿರುವ ಒನ್‌ಪ್ಲಸ್ ನಾರ್ಡ್ CE 2 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಂಪನಿಯ OxygenOS 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ 119-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಈ ಎರಡೂ ಕ್ಯಾಮೆರಾಗಳು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಬೆಂಬಲದೊಂದಿಗೆ ಬರುತ್ತವೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಕೂಡ ಅಳವಡಿಸಲಾಗಿದೆ.
ದೀರ್ಘ ಬಾಳಿಕೆ ಬರುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಮೂಲಕ 65W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ.
ಬೆಲೆ ಎಷ್ಟು?:
ಭಾರತದಲ್ಲಿ ಒನ್‌ಪ್ಲಸ್ ನಾರ್ಡ್ CE 2 5G ಸ್ಮಾರ್ಟ್‌ಫೋನ್ ಸದ್ಯಕ್ಕೆ ಎರಡು ಮಾದರಿಯಲ್ಲಿ ಬಿಡುಗಡೆ ಆಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 23,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 24,999 ರೂ. ಆಗಿದೆ. ಈ ಸ್ಮಾರ್ಟ್‌ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್, ಚಿಲ್ಲರೆ ಅಂಗಡಿಗಳಲ್ಲಿ ಫೆಬ್ರವರಿ 22 ರಿಂದ ಖರೀದಿಗೆ ಸಿಗಲಿದೆ.
Tips and Tricks: ಈ ಟಿಪ್ಸ್ ಮತ್ತು ಟ್ರಿಕ್ಗಳನ್ನು ಪ್ರಯೋಗಿಸಿ ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಸೂಪರ್ ಫಾಸ್ಟ್ ಮಾಡಿ