OnePlus Nord CE 2 Lite 5G: ಬಂಪರ್ ಆಫರ್: ಒನ್​ಪ್ಲಸ್​ನ ಈ ಸ್ಮಾರ್ಟ್​ಫೋನನ್ನು ಕೇವಲ 1,049 ರೂ. ಗೆ ಖರೀದಿಸಿ: ಮಿಸ್ ಮಾಡ್ಬೇಡಿ

Amazon Offer: ಕಳೆದ ವರ್ಷ ಬಿಡುಗಡೆ ಆದ ಒನ್‌ಪ್ಲಸ್‌ ನಾರ್ಡ್‌ ಸಿಇ 2 ಲೈಟ್ 5ಜಿ (OnePlus Nord CE 2 Lite 5G) ಸ್ಮಾರ್ಟ್​​ಫೋನ್ ಇದೀಗ ಅತ್ಯಂತ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ. ವಿಶೇಷ ಎಂದರೆ ಇದನ್ನು ನೀವು ಕೇವಲ 1,049 ರೂ. ಗೆ ಖರೀದಿಸಬಹುದು.

OnePlus Nord CE 2 Lite 5G: ಬಂಪರ್ ಆಫರ್: ಒನ್​ಪ್ಲಸ್​ನ ಈ ಸ್ಮಾರ್ಟ್​ಫೋನನ್ನು ಕೇವಲ 1,049 ರೂ. ಗೆ ಖರೀದಿಸಿ: ಮಿಸ್ ಮಾಡ್ಬೇಡಿ
oneplus nord ce 2 lite 5g
Follow us
Vinay Bhat
|

Updated on:Apr 03, 2023 | 12:50 PM

ಪ್ರಸಿದ್ಧ ಒನ್​ಪ್ಲಸ್ (OnePlus) ಕಂಪನಿ ಭಾರತದಲ್ಲಿ ಒನ್​ಪ್ಲಸ್ ನಾರ್ಡ್ CE 3 ಲೈಟ್ 5G (OnePlus Nord CE 2 Lite 5G) ಫೋನನ್ನು ಬಿಡುಗಡೆ ಮಾಡಲು ಸಜ್ಜಾಗಿದೆ ನಿಂತಿದೆ. ಈ ಮೊಬೈಲ್ ಇದೇ ಏಪ್ರಿಲ್ 4 ರಂದು ಅನಾವರಣಗೊಳ್ಳುತ್ತಿದೆ. ಹೀಗಿರುವಾಗ ಕಳೆದ ವರ್ಷ ಬಿಡುಗಡೆ ಮಾಡಿದ ಒನ್‌ಪ್ಲಸ್‌ ನಾರ್ಡ್‌ ಸಿಇ 2 ಲೈಟ್ 5ಜಿ (OnePlus Nord CE 2 Lite 5G) ಸ್ಮಾರ್ಟ್​​ಫೋನ್ ಇದೀಗ ಅತ್ಯಂತ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ. ವಿಶೇಷ ಎಂದರೆ ಇದನ್ನು ನೀವು ಕೇವಲ 1,049 ರೂ. ಗೆ ಖರೀದಿಸಬಹುದು. ಇದರಲ್ಲಿ ಬಲಿಷ್ಠವಾದ ಪ್ರೊಸೆಸರ್‌ ಇದ್ದು, 5,000mAh ಬ್ಯಾಟರಿ ಸಾಮರ್ಥ್ಯಕ್ಕೆ ಹೇಳಿ ಮಾಡಿಸಿರುವ 33W ಸೂಪರ್VOOC ವೇಗದ ಚಾರ್ಜಿಂಗ್ ಕೂಡ ನೀಡಲಾಗಿದೆ. ಹಾಗಾದರೆ ಈ ಫೋನ್ ಈಗ ಎಷ್ಟು ರೂ. ಗೆ ಮಾರಾಟ ಆಗುತ್ತಿದೆ? ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.

ಆಫರ್ ಏನು?:

ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್​ನ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್​ಗೆ 19,999 ರೂ. ಇದೆ. ಇದರ ಮೇಲೆ 1,000 ರೂ. ಡಿಸ್ಕೌಂಟ್ ಮಾಡಲಾಗಿದ್ದು 18,999 ರೂ. ಗೆ ಸೇಲ್ ಆಗುತ್ತಿದೆ. ಜೊತೆಗೆ 17,950 ರೂ. ಗಳ ಎಕ್ಸ್​ಚೇಂಜ್ ಆಫರ್ ಘೋಷಿಸಲಾಗಿದೆ. ನಿಮ್ಮಲ್ಲಿರುವ ಹಳೆಯ ಫೋನ್ ಉತ್ತಮವಾಗಿದ್ದು, ಯಾವುದೇ ತೊಂದರೆಯಿಲ್ಲದೆ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆ ಅಷ್ಟೂ ಮೊತ್ತಕ್ಕೆ ಎಕ್ಸ್​ಚೇಂಜ್ ಆಗುವ ಸಾಧ್ಯತೆ ಇದೆ. ಹೀಗಾದಲ್ಲಿ ನಾರ್ಡ್‌ CE 2 ಲೈಟ್‌ 5G ಫೋನನ್ನು ಕೇವಲ 1,049 ರೂ. ಗೆ ಖರೀದಿಸಬಹುದು.

ಇದನ್ನೂ ಓದಿ
Image
WhatsApp Ban: ನಿಷೇಧವಾದ ವಾಟ್ಸ್​ಆ್ಯಪ್ ಖಾತೆಯನ್ನು ಮರಳಿ ಪಡೆಯುವುದು ಹೇಗೆ?
Image
WhatsApp Ban: ಭಾರತದಲ್ಲಿ ಬರೋಬ್ಬರಿ 45 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್ ಮಾಡಿದ ಕಂಪನಿ: ಎಚ್ಚರ ವಹಿಸಿ
Image
OnePlus 10R 5G: 150W SuperVOOC ಚಾರ್ಜರ್​ನ ಒನ್​ಪ್ಲಸ್‌ 10R ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ: ಆಫರ್ ಮಿಸ್ ಮಾಡ್ಬೇಡಿ
Image
boAt Lunar Connect Pro: ಸ್ಟೈಲಿಶ್ ಜತೆಗೆ ಸ್ಮಾರ್ಟ್ ವಾಚ್ ಪ್ರಿಯರಿಗಾಗಿ ಹೊಸ ಬೋಟ್ ವಾಚ್

WhatsApp: ವಾಟ್ಸ್ಆ್ಯಪ್​​ನಲ್ಲಿರುವ ಈ ಹಿಡನ್ ಫೀಚರ್ ಬಳಸಿದ್ದೀರಾ?: ಇಲ್ಲಿದೆ ನೋಡಿ

ಫೀಚರ್ಸ್ ಏನಿದೆ?:

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ 1,080 x 2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 202ppi ಪಿಕ್ಸೆಲ್ ಸಾಂದ್ರತೆ, 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ವಿಶೇಷವಾಗಿ ಇದರಲ್ಲಿ ಗೇಮಿಂಗ್​​ಗಾಗಿ 240Hz ರೀಫ್ರೆಶ್‌ ರೇಟ್ ನೀಡಲಾಗಿದೆ. ಇದಕ್ಕೆ ತಕ್ಕಂತೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್‌ ಪ್ರೊಸೆಸರ್‌ ಬಲವನ್ನು ಪಡೆದಿದೆ. ಆಂಡ್ರಾಯ್ಡ್ 12 ಓಎಸ್​ನಿಂದ ಕಾರ್ಯನಿರ್ವಹಿಸುತ್ತದೆ.

ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್‌-ಸಿ ಮೂಲಕ 33W ಸೂಪರ್VOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆಗಳು ಇದರಲ್ಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Mon, 3 April 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್