ಪ್ರಸಿದ್ಧ ಒನ್ಪ್ಲಸ್ (OnePlus) ಕಂಪನಿ ಭಾರತದಲ್ಲಿ ಒನ್ಪ್ಲಸ್ ನಾರ್ಡ್ CE 3 ಲೈಟ್ 5G (OnePlus Nord CE 2 Lite 5G) ಫೋನನ್ನು ಬಿಡುಗಡೆ ಮಾಡಲು ಸಜ್ಜಾಗಿದೆ ನಿಂತಿದೆ. ಈ ಮೊಬೈಲ್ ಇದೇ ಏಪ್ರಿಲ್ 4 ರಂದು ಅನಾವರಣಗೊಳ್ಳುತ್ತಿದೆ. ಹೀಗಿರುವಾಗ ಕಳೆದ ವರ್ಷ ಬಿಡುಗಡೆ ಮಾಡಿದ ಒನ್ಪ್ಲಸ್ ನಾರ್ಡ್ ಸಿಇ 2 ಲೈಟ್ 5ಜಿ (OnePlus Nord CE 2 Lite 5G) ಸ್ಮಾರ್ಟ್ಫೋನ್ ಇದೀಗ ಅತ್ಯಂತ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ. ವಿಶೇಷ ಎಂದರೆ ಇದನ್ನು ನೀವು ಕೇವಲ 1,049 ರೂ. ಗೆ ಖರೀದಿಸಬಹುದು. ಇದರಲ್ಲಿ ಬಲಿಷ್ಠವಾದ ಪ್ರೊಸೆಸರ್ ಇದ್ದು, 5,000mAh ಬ್ಯಾಟರಿ ಸಾಮರ್ಥ್ಯಕ್ಕೆ ಹೇಳಿ ಮಾಡಿಸಿರುವ 33W ಸೂಪರ್VOOC ವೇಗದ ಚಾರ್ಜಿಂಗ್ ಕೂಡ ನೀಡಲಾಗಿದೆ. ಹಾಗಾದರೆ ಈ ಫೋನ್ ಈಗ ಎಷ್ಟು ರೂ. ಗೆ ಮಾರಾಟ ಆಗುತ್ತಿದೆ? ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.
ಆಫರ್ ಏನು?:
ಭಾರತದಲ್ಲಿ ಒನ್ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ಫೋನ್ನ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್ಗೆ 19,999 ರೂ. ಇದೆ. ಇದರ ಮೇಲೆ 1,000 ರೂ. ಡಿಸ್ಕೌಂಟ್ ಮಾಡಲಾಗಿದ್ದು 18,999 ರೂ. ಗೆ ಸೇಲ್ ಆಗುತ್ತಿದೆ. ಜೊತೆಗೆ 17,950 ರೂ. ಗಳ ಎಕ್ಸ್ಚೇಂಜ್ ಆಫರ್ ಘೋಷಿಸಲಾಗಿದೆ. ನಿಮ್ಮಲ್ಲಿರುವ ಹಳೆಯ ಫೋನ್ ಉತ್ತಮವಾಗಿದ್ದು, ಯಾವುದೇ ತೊಂದರೆಯಿಲ್ಲದೆ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆ ಅಷ್ಟೂ ಮೊತ್ತಕ್ಕೆ ಎಕ್ಸ್ಚೇಂಜ್ ಆಗುವ ಸಾಧ್ಯತೆ ಇದೆ. ಹೀಗಾದಲ್ಲಿ ನಾರ್ಡ್ CE 2 ಲೈಟ್ 5G ಫೋನನ್ನು ಕೇವಲ 1,049 ರೂ. ಗೆ ಖರೀದಿಸಬಹುದು.
WhatsApp: ವಾಟ್ಸ್ಆ್ಯಪ್ನಲ್ಲಿರುವ ಈ ಹಿಡನ್ ಫೀಚರ್ ಬಳಸಿದ್ದೀರಾ?: ಇಲ್ಲಿದೆ ನೋಡಿ
ಫೀಚರ್ಸ್ ಏನಿದೆ?:
ಒನ್ಪ್ಲಸ್ ನಾರ್ಡ್ CE 2 ಲೈಟ್ 5G ಸ್ಮಾರ್ಟ್ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.59 ಇಂಚಿನ ಫುಲ್ ಹೆಚ್ಡಿ+ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 202ppi ಪಿಕ್ಸೆಲ್ ಸಾಂದ್ರತೆ, 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ವಿಶೇಷವಾಗಿ ಇದರಲ್ಲಿ ಗೇಮಿಂಗ್ಗಾಗಿ 240Hz ರೀಫ್ರೆಶ್ ರೇಟ್ ನೀಡಲಾಗಿದೆ. ಇದಕ್ಕೆ ತಕ್ಕಂತೆ ಕ್ವಾಲ್ಕಮ್ ಸ್ನ್ಯಾಪ್ಡ್ರಾಗ್ನ್ 695 SoC ಪ್ರೊಸೆಸರ್ ಪ್ರೊಸೆಸರ್ ಬಲವನ್ನು ಪಡೆದಿದೆ. ಆಂಡ್ರಾಯ್ಡ್ 12 ಓಎಸ್ನಿಂದ ಕಾರ್ಯನಿರ್ವಹಿಸುತ್ತದೆ.
ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಇನ್ನು ಈ ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್ಬಿ ಟೈಪ್-ಸಿ ಮೂಲಕ 33W ಸೂಪರ್VOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್ ಸೇರಿದಂತೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆಗಳು ಇದರಲ್ಲಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:39 pm, Mon, 3 April 23