OnePlus Nord CE 2 Lite: ಬಿಡುಗಡೆ ಆದ ಮರುದಿನವೇ ಮಾರಾಟ ಆರಂಭ: ಒನ್​ಪ್ಲಸ್ ನಾರ್ಡ್ CE 2 ಲೈಟ್ ಫೋನ್​ಗೆ ಭರ್ಜರಿ ಬೇಡಿಕೆ

ನಾರ್ಡ್‌ CE 2 ಗೆ ಹೋಲಿಸಿದರೆ ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ ಬೆಲೆ ಕೂಡ ಕಡಿಮೆಯಾಗಿದೆ. ಹಾಗಾದ್ರೆ ಈ ಫೋನಿನ ವಿಶೇಷತೆ, ಬೆಲೆ, ಆಫರ್ ಏನಿದೆ ಎಂಬ ಬಗ್ಗೆ ತಿಳಿದುಕೊಳ್ಳೋಣ.

OnePlus Nord CE 2 Lite: ಬಿಡುಗಡೆ ಆದ ಮರುದಿನವೇ ಮಾರಾಟ ಆರಂಭ: ಒನ್​ಪ್ಲಸ್ ನಾರ್ಡ್ CE 2 ಲೈಟ್ ಫೋನ್​ಗೆ ಭರ್ಜರಿ ಬೇಡಿಕೆ
OnePlus Nord CE 2 Lite 5G
Follow us
TV9 Web
| Updated By: Vinay Bhat

Updated on: Apr 30, 2022 | 1:49 PM

ಎರಡು ತಿಂಗಳ ಹಿಂದೆಯಷ್ಟೆ ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್​​ಫೋನ್ ಅನ್ನು ಬಿಡುಗಡೆ ಮಾಡಿ ದೊಡ್ಟ ಮಟ್ಟದಲ್ಲಿ ಸದ್ದು ಮಾಡಿದ್ದ ಪ್ರಸಿದ್ಧ ಒನ್​ಪ್ಲಸ್ (OnePlus) ಕಂಪನಿ ನಿನ್ನೆಯಷ್ಟೆ (ಏ. 29) ಒನ್‌ಪ್ಲಸ್‌ ನಾರ್ಡ್‌ ಸಿಇ 2 ಲೈಟ್‌ 5ಜಿ (OnePlus Nord CE 2 Lite 5G) ಫೋನ್‌ ಅನ್ನು ದೇಶದಲ್ಲಿ ಅನಾವರಣ ಮಾಡಿತ್ತು. ಇದೀಗ ರಿಲೀಸ್ ಆದ ಒಂದೆ ದಿನಕ್ಕೆ ಈ ಫೋನಿನ ಸೇಲ್ ಆರಂಭವಾಗಿದೆ. ಆಕರ್ಷಕ ಡಿಸೈನ್, ಭರ್ಜರಿ ಫೀಚರ್​ಗಳಿಂದ ತುಂಬಿರುವ ಈ ಸ್ಮಾರ್ಟ್​​ಫೋನ್ (Smartphone) ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. 5,000mAh ಬ್ಯಾಟರಿ ಸಾಮರ್ಥ್ಯಕ್ಕೆ ಹೇಳಿ ಮಾಡಿಸಿರುವ 33W ಸೂಪರ್VOOC ವೇಗದ ಚಾರ್ಜಿಂಗ್ ಕೂಡ ನೀಡಲಾಗಿದೆ. ನಾರ್ಡ್‌ CE 2 ಗೆ ಹೋಲಿಸಿದರೆ ಇದರ ಬೆಲೆ ಕೂಡ ಕಡಿಮೆಯಾಗಿದೆ. ಹಾಗಾದ್ರೆ ಈ ಫೋನಿನ ವಿಶೇಷತೆ, ಬೆಲೆ, ಆಫರ್ ಏನಿದೆ ಎಂಬ ಬಗ್ಗೆ ತಿಳಿದುಕೊಳ್ಳೋಣ.

  1. ಭಾರತದಲ್ಲಿ ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 19,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 21,999 ರೂ. ಆಗಿದೆ. ಈ ಸ್ಮಾರ್ಟ್‌ಫೋನ್ ಬ್ಲ್ಯಾಕ್‌ ಹಾಗೂ ಬ್ಲೂ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.
  2. ಈ ಸ್ಮಾರ್ಟ್‌ಫೋನ್‌ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್, ಚಿಲ್ಲರೆ ಅಂಗಡಿಗಳಲ್ಲಿ, ರಿಲಯನ್ಸ್ ಡಿಜಿಟಲ್ ಸ್ಟೋರ್ ಮೂಲಕ ಇಂದಿನಿಂದ ಮಾರಾಟ ಕಾಣಲಿದೆ. ಮಾರಾಟದ ಸಂದರ್ಭದಲ್ಲಿ ನೀವು SBI ಕ್ರೆಡಿಟ್ ಕಾರ್ಡ್​ ಮೂಲಕ ಖರೀದಿಸಿದರೆ 1,500 ರೂ. ರಿಯಾಯಿತಿ ಸಿಗಲಿದೆ.
  3. ವಿಶೇಷವಾಗಿ ಇದರಲ್ಲಿ ಗೇಮಿಂಗ್​​ಗಾಗಿ 240Hz ರೀಫ್ರೆಶ್‌ ರೇಟ್ ನೀಡಲಾಗಿದೆ. ಇದಕ್ಕೆ ತಕ್ಕಂತೆ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್‌ ಪ್ರೊಸೆಸರ್‌ ಬಲವನ್ನು ಪಡೆದಿದೆ. ಆಂಡ್ರಾಯ್ಡ್ 12 ಓಎಸ್​ನಿಂದ ಕಾರ್ಯನಿರ್ವಹಿಸುತ್ತದೆ.
  4. ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಕೂಡ ನೀಡಲಾಗಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
  5. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್‌-ಸಿ ಮೂಲಕ 33W ಸೂಪರ್VOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
  6. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ 5.2, NFC, GPS ಮತ್ತು A-GPS ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಹೊಸ ಆಯ್ಕೆಗಳು ಇದರಲ್ಲಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು