AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

OnePlus Nord CE 3 5G: ಬಹುನಿರೀಕ್ಷಿತ ಒನ್‌ಪ್ಲಸ್‌ ನಾರ್ಡ್‌ CE 3 5G ಫೋನ್ ಫೀಚರ್ಸ್ ಲೀಕ್: ಇದನ್ನು ಖರೀದಿಸಲು ಕ್ಯೂ ಗ್ಯಾರಂಟಿ

ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ ಬಗ್ಗೆ ಖಚಿತ ಮಾಹಿತಿ ಕಂಪನಿ ಇನ್ನೂ ಬಹಿರಂಗ ಪಡಿಸಿಲ್ಲ. ಆದರೆ, ಮೂಲಗಳ ಪ್ರಕಾರ ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಿಂದ ಇರುವುದು ಬಹುತೇಕ ಖಚಿತ.

OnePlus Nord CE 3 5G: ಬಹುನಿರೀಕ್ಷಿತ ಒನ್‌ಪ್ಲಸ್‌ ನಾರ್ಡ್‌ CE 3 5G ಫೋನ್ ಫೀಚರ್ಸ್ ಲೀಕ್: ಇದನ್ನು ಖರೀದಿಸಲು ಕ್ಯೂ ಗ್ಯಾರಂಟಿ
OnePlus Nord CE 3
Follow us
TV9 Web
| Updated By: Vinay Bhat

Updated on: Jan 22, 2023 | 12:32 PM

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ತನ್ನ ನಾರ್ಡ್ ಸರಣಿಯ ಫೋನ್​ಗಳನ್ನು (Smartphone) ಬಿಡುಗಡೆ ಮಾಡಿ ಧೂಳೆಬ್ಬಿಸಿದ್ದ ಒನ್​ಪ್ಲಸ್ ಕಂಪನಿ ಇದೀಗ ಮತ್ತೆ ಬಂದಿದೆ. ಬಹುನಿರೀಕ್ಷಿತ ಹೊಸ ಒನ್‌ಪ್ಲಸ್‌ ನಾರ್ಡ್‌ ಸಿಇ 3 (OnePlus Nord CE 3) ಸ್ಮಾರ್ಟ್‌ಫೋನ್‌ ಅನಾವರಣ ಮಾಡಲು ಸಜ್ಜಾಗಿ ನಿಂತಿದೆ. ಇದು ಕಳೆದ ವರ್ಷ ಬಿಡುಗಡೆ ಆಗಿ ಸಾಕಷ್ಟು ಬೇಡಿಕೆ ಸೃಷ್ಟಿಸಿದ್ದ ಒನ್‌ಪ್ಲಸ್‌ ನಾರ್ಡ್‌ CE 2 5G ಯ ​​ಉತ್ತರಾಧಿಕಾರಿಯಾಗಿದೆ. ಈ ಹಿಂದಿನ ಸರಣಿಯಂತೆ ಇದುಕೂಡ ಸಾಕಷ್ಟು ವಿಶೇಷತೆಗಳಿಂದ ಕೂಡಿದ್ದು ಆಕರ್ಷಕ ಕ್ಯಾಮೆರಾ (Camera), ಅತ್ಯುತ್ತಮ ಬ್ಯಾಟರಿ ಪವರ್, ಬಲಿಷ್ಠ ಪ್ರೊಸೆಸರ್‌ ಬಲವನ್ನು ಹೊಂದಿರಲಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಇದೀಗ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.

ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ ಬಗ್ಗೆ ಖಚಿತ ಮಾಹಿತಿ ಕಂಪನಿ ಇನ್ನೂ ಬಹಿರಂಗ ಪಡಿಸಿಲ್ಲ. ಆದರೆ, ಮೂಲಗಳ ಪ್ರಕಾರ ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿರಲಿದೆ. ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆಯಲಿದೆ ಎಂದು ಅಂದಾಜಿಸಲಾಗಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಪಡೆಯಲಿದೆ ಎನ್ನಲಾಗಿದೆ.

Best Smartphones: 10,000 ರೂ. ಒಳ​ಗಿನ ಹೊಚ್ಚ ಹೊಸ ಬೊಂಬಾಟ್ ಸ್ಮಾರ್ಟ್​ಫೋನ್ ಬೇಕೇ?: ಇಲ್ಲಿದೆ ನೋಡಿ

ಇದನ್ನೂ ಓದಿ
Image
BSNL: ಬರೋಬ್ಬರಿ 9 ಒಟಿಟಿ ಸೌಲಭ್ಯ: ಬಿಎಸ್​ಎನ್​ಎಲ್ ಹೊಸ ಪ್ಲಾನ್ ಕಂಡು ದಂಗಾದ ಜಿಯೋ, ಏರ್ಟೆಲ್
Image
Reliance Jio: ಅಮೆಜಾನ್, ನೆಟ್​ಫ್ಲಿಕ್ಸ್​ ಫ್ರೀ ಆಗಿ ನೋಡಬೇಕಾ?: ಜಿಯೋದಲ್ಲಿದೆ ಧಮಾಕ ಪ್ಲಾನ್
Image
Vivo Y55s 5G: ವಿವೋದಿಂದ ಆಕರ್ಷಕ ವಿವೋ Y55s 5G (2023) ಸ್ಮಾರ್ಟ್‌ಫೋನ್‌ ಬಿಡುಗಡೆ: ಏನು ಫೀಚರ್ಸ್?, ಬೆಲೆ ಎಷ್ಟು?
Image
Galaxy S23 Series: ಬಹುನಿರೀಕ್ಷಿತ ಗ್ಯಾಲಕ್ಸಿ S23 ಸರಣಿಯ ಬೆಲೆ ಸೋರಿಕೆ: ಭಾರತದಲ್ಲಿ ಈ ಫೋನ್​ಗೆ ಎಷ್ಟು ರೂ. ನೋಡಿ?

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಇದರಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ನೀಡಲಾಗಿದೆ. ಮುಖ್ಯ ಕ್ಯಾಮೆರಾ ಬರೋಬ್ಬರಿ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಿಂದ ಇರುವುದು ಬಹುತೇಕ ಖಚಿತ. ಉಳಿದಂತೆ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಹೊಂದಿರಬಹುದು ಎಂಬ ನಿರೀಕ್ಷೆಯಿದೆ. ಇದರೊಂದಿಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಅಳವಡಿಸಲಾಗಿದೆ ಎಂಬ ಮಾತುಕೂಡ ಇದೆ.

ಒನ್‌ಪ್ಲಸ್‌ ನಾರ್ಡ್‌ CE 3 ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಬ್ಯಾಟರಿಯನ್ನು ಒಳಗೊಂಡಿರುತ್ತದೆ ಎಂದು ಹೇಳಲಾಗಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿರುವ ಜೊತೆಗೆ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಎಂದಿನಂತೆ ಇರಲಿದೆ. ಈ ಸ್ಮಾರ್ಟ್‌ಫೋನ್‌ನ ಬೆಲೆ ಇನ್ನು ಬಹಿರಂಗವಾಗಿಲ್ಲ. ಆದರೆ ಇದು ಭಾರತದಲ್ಲಿ 30,000 ರೂ. ಆಸುಪಾಸಿನಲ್ಲಿ ಇರಬಹುದು. ಫೆಬ್ರವರಿ ಮೊದಲ ವಾರದಲ್ಲಿ ಈ ಫೋನ್ ಭಾರತದಲ್ಲಿ ರಿಲೀಸ್ ಆಗಲಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು