ಭಾರತದಲ್ಲಿಂದು ಬಹುನಿರೀಕ್ಷಿತ ಒನ್​ಪ್ಲಸ್ ನಾರ್ಡ್ CE 4 ಬಿಡುಗಡೆ: ಬೆಲೆ ಎಷ್ಟು?

OnePlus Nord CE 4 Launch Date: ಭಾರತೀಯ ಮಾರುಕಟ್ಟೆಯಲ್ಲಿ ಚೀನಾದ ಸ್ಮಾರ್ಟ್‌ಫೋನ್ ದೈತ್ಯ ಒನ್​ಪ್ಲಸ್ ತನ್ನ ಹೊಸ ಫೋನ್ ಒನ್​ಪ್ಲಸ್ ನಾರ್ಡ್ CE 4 ಅನ್ನು ಅನಾವರಣ ಮಾಡುತ್ತಿದೆ. ಏಪ್ರಿಲ್ 1 ರಂದು ಲಾಂಚ್ ಆಗಲಿರುವ ಈ ಫೋನ್​ನಲ್ಲಿ ಯಾವ ರೀತಿಯ ಫೀಚರ್​ಗಳು ಇರಲಿವೆ ನೋಡೋಣ.

ಭಾರತದಲ್ಲಿಂದು ಬಹುನಿರೀಕ್ಷಿತ ಒನ್​ಪ್ಲಸ್ ನಾರ್ಡ್ CE 4 ಬಿಡುಗಡೆ: ಬೆಲೆ ಎಷ್ಟು?
OnePlus Nord CE 4
Follow us
Vinay Bhat
|

Updated on: Apr 01, 2024 | 6:55 AM

ಪ್ರಸಿದ್ಧ ಎಲೆಕ್ಟ್ರಾನಿಕ್ ದೈತ್ಯ ಒನ್​ಪ್ಲಸ್ ಸಂಸ್ಥೆ ಮಾರುಕಟ್ಟೆಯಲ್ಲಿ ಯಾವ ರೀತಿಯ ಕ್ರೇಜ್ ಹೊಂದಿದೆ ಎಂದು ಹೇಳಬೇಕಾಗಿಲ್ಲ. ಆರಂಭದಲ್ಲಿ ಪ್ರೀಮಿಯಂ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡು ಸ್ಮಾರ್ಟ್​ಫೋನ್​ಗಳನ್ನು ತಂದ ಒನ್​ಪ್ಲಸ್ ಇತ್ತೀಚೆಗೆ ಬಜೆಟ್ ಬೆಲೆಗೆ ಕೂಡ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಿದೆ. ಈಗಾಗಲೇ ಹಲವು ಬಜೆಟ್ ಫೋನ್​ಗಳನ್ನು ತಂದಿರುವ ಒನ್​ಪ್ಲಸ್ ಇದೀಗ ಹೊಸ ಫೋನ್ ಪರಿಚಯಿಸಲು ಹೊರಟಿದೆ. ಇಂದು ಭಾರತೀಯ ಮಾರುಕಟ್ಟೆಯಲ್ಲಿ ಚೀನಾದ ಸ್ಮಾರ್ಟ್‌ಫೋನ್ ದೈತ್ಯ ಒನ್​ಪ್ಲಸ್ ತನ್ನ ಹೊಸ ಫೋನ್ ಒನ್​ಪ್ಲಸ್ ನಾರ್ಡ್ CE 4 (OnePlus Nord CE 4) ಅನ್ನು ಅನಾವರಣ ಮಾಡುತ್ತಿದೆ. ಏಪ್ರಿಲ್ 1 ರಂದು ಲಾಂಚ್ ಆಗಲಿರುವ ಈ ಫೋನ್​ನಲ್ಲಿ ಯಾವ ರೀತಿಯ ಫೀಚರ್​ಗಳು ಇರಲಿವೆ ನೋಡೋಣ.

ಒನ್​ಪ್ಲಸ್ ನಾರ್ಡ್ CE 4 ಸ್ಮಾರ್ಟ್​ಫೋನ್ 6.7-ಇಂಚಿನ AMOLED ಡಿಸ್ಪ್ಲೇಯನ್ನು ಹೊಂದಿರುತ್ತದೆ. ಈ ಫೋನ್ ಡಿಸ್​ಪ್ಲೇಯು 120Hz ರಿಫ್ರೆಶ್ ದರ ಮತ್ತು 93.4 ಪ್ರತಿಶತ ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಈ 5G ಸ್ಮಾರ್ಟ್‌ಫೋನ್ ಶಕ್ತಿಯುತ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜನ್ 3 ಪ್ರೊಸೆಸರ್‌ನಿಂದ ಚಾಲಿತವಾಗಲಿದೆ. 8GB RAM ನೊಂದಿಗೆ ಬರುತ್ತಿದೆ, RAM ಅನ್ನು ವಾಸ್ತವಿಕವಾಗಿ 8GB ವರೆಗೆ ಹೆಚ್ಚಿಸಬಹುದು.

ಫ್ಲಿಪ್​ಕಾರ್ಟ್​ನಲ್ಲಿ ಆರ್ಡರ್ ಮಾಡಿದ್ದು ಸ್ಮಾರ್ಟ್​ಫೋನ್: ಬಂದಿದ್ದು ಕಲ್ಲು

ಇದರಲ್ಲಿರುವ ಪ್ರೊಸೆಸರ್ ಬಹುಕಾರ್ಯಕಕ್ಕೆ ತುಂಬಾ ಉಪಯುಕ್ತವಾಗಿದೆ. ನೀವು ಒಂದೇ ಬಾರಿಗೆ 15 ಅಪ್ಲಿಕೇಶನ್‌ಗಳನ್ನು ತೆರೆಯಬಹುದು ಮತ್ತು ಅವುಗಳನ್ನು ಉಪಗೋಗಿಸಬಹುದು. ಈ ಫೋನ್ 5500 mAh ನ ಶಕ್ತಿಯುತ ಬ್ಯಾಟರಿಯೊಂದಿಗೆ ಬರುತ್ತಿದ್ದು, ಇದು 100 ವ್ಯಾಟ್ಸ್ ಸೂಪರ್ ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದನ್ನು ಕೇವಲ 29 ನಿಮಿಷಗಳಲ್ಲಿ 100 ಪ್ರತಿಶತದಷ್ಟು ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ.

ಕ್ಯಾಮೆರಾದ ಬಗ್ಗೆ ಹೇಳುವುದಾದರೆ, ಈ ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್‌ಗಳ ಹಿಂಭಾಗದ ಕ್ಯಾಮೆರಾವನ್ನು ಹೊಂದಿದೆ. ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಬೆಂಬಲದೊಂದಿಗೆ 50MP Sony LYT-600 ಪ್ರಾಥಮಿಕ ಸಂವೇದಕವನ್ನು ಒದಗಿಸಲಾಗಿದೆ. ಇದು ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್​ಫೋನ್ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್​ಲ್ಲಿ ಕಾರ್ಯನಿರ್ವಹಿಸುತ್ತದೆ. ಬೆಲೆಗೆ ಸಂಬಂಧಿಸಿದಂತೆ, ಈ ಸ್ಮಾರ್ಟ್‌ಫೋನ್‌ನ ಮೂಲ ರೂಪಾಂತರದ ಬೆಲೆ ರೂ. 25 ಸಾವಿರ ಎಂದು ಅಂದಾಜಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ