OnePlus Nord N20 SE: ಒನ್‌ಪ್ಲಸ್ ನಾರ್ಡ್ N20 SE ಸ್ಮಾರ್ಟ್‌ಫೋನ್ ಬಿಡುಗಡೆ: ಇದರಲ್ಲಿರುವ ಫೀಚರ್ಸ್ ನೀವೇ ನೋಡಿ
ಒನ್‌ಪ್ಲಸ್ ಕಂಪನಿ ಇದೀಗ ದಿಢೀರ್ ಆಗಿ ತನ್ನ ನಾರ್ಡ್ ಸರಣಿಯಲ್ಲಿ ಒನ್‌ಪ್ಲಸ್ ನಾರ್ಡ್ ಎನ್20 ಎಸ್ಇ (OnePlus Nord N20 SE) ಫೋನನ್ನು ಪರಿಚಯಿಸಿದೆ. ಅಚ್ಚರಿ ಎಂದರೆ ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ, ಅತ್ಯಂತ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಪ್ರಸಿದ್ಧ ಒನ್‌ಪ್ಲಸ್ (OnePlus) ಕಂಪನಿ ಜಾಗತಿಕ ಮಾರಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತಿದೆ. ಮೊನ್ನೆಯಷ್ಟೆ ಭಾರತದಲ್ಲಿ ಒನ್‌ಪ್ಲಸ್ 10T (OnePlus 10T) ಅನ್ನು ಅನಾವರಣ ಮಾಡಿದ್ದ ಕಂಪನಿ ಇದೀಗ ದಿಢೀರ್ ಆಗಿ ತನ್ನ ನಾರ್ಡ್ ಸರಣಿಯಲ್ಲಿ ಒನ್‌ಪ್ಲಸ್ ನಾರ್ಡ್ ಎನ್20 ಎಸ್ಇ (OnePlus Nord N20 SE) ಫೋನನ್ನು ಪರಿಚಯಿಸಿದೆ. ಅಚ್ಚರಿ ಎಂದರೆ ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ, ಅತ್ಯಂತ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕೇವಲ 30 ನಿಮಿಷಗಳಲ್ಲಿ 50% ವರೆಗೆ ಚಾರ್ಜ್ ಮಾಡುತ್ತದೆ. ಇದಕ್ಕೆ ತಕ್ಕಂತೆ ಬಲಿಷ್ಠ ಬ್ಯಾಟರಿ ಕೂಡ ನೀಡಲಾಗಿದೆ. ಸದ್ಯಕ್ಕೆ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿರುವ ಒನ್‌ಪ್ಲಸ್ ನಾರ್ಡ್ N20 SE ಸ್ಮಾರ್ಟ್‌ಫೋನ್ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ? ಎಂಬುದನ್ನು ನೋಡೋಣ.
- ಒನ್‌ಪ್ಲಸ್ ನಾರ್ಡ್ N20 SE ಸ್ಮಾರ್ಟ್‌ಫೋನ್ ಬೆಲೆ ಚೀನಾದಲ್ಲಿ $199, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 15,800ರೂ. ಇರಬಹುದು. ಇದು ಚೀನಾದಲ್ಲಿ ಆಗಸ್ಟ್ 8 ರಂದು ಮಾರಾಟವಾಗಲಿದೆ. ಕೆಲವು ತಿಂಗಳ ಬಳಿಕ ಭಾರತಕ್ಕೂ ಕಾಲಿಡಲಿದೆ.
- ಈ ಸ್ಮಾರ್ಟ್‌ಫೋನ್ 6.56 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದೆ.
- ಮೀಡಿಯಾಟೆಕ್ ಹಿಲಿಯೋ G35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12-ಆಧಾರಿತ ಆಕ್ಸಿಜನ್OS 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ.
- ಒನ್‌ಪ್ಲಸ್ ನಾರ್ಡ್ N20 SE ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಕ್ಯಾಮೆರಾ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.
- 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಗಳಲ್ಲಿ ಡಿಜಿಟಲ್ ಜೂಮ್, ಆಟೋ ಫ್ಲ್ಯಾಶ್, ಫೇಸ್ ಡಿಟೆಕ್ಷನ್, ಟಚ್ ಟು ಫೋಕಸ್ ಅನ್ನು ಒಳಗೊಂಡಿದೆ.
- ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಸೂಪರ್‌ವೂಕ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ ನೀವು ಸುಮಾರು 30 ನಿಮಿಷಗಳಲ್ಲಿ 50% ವರೆಗೆ ಬ್ಯಾಟರಿಯನ್ನು ಚಾರ್ಜ್ ಮಾಡಲು ಸಾಧ್ಯವಾಗಲಿದೆ.
ಇದನ್ನೂ ಓದಿ