Oppo A96: 50MP ಕ್ಯಾಮೆರಾ, 5000mAh ಬ್ಯಾಟರಿ: ಬಜೆಟ್ ಬೆಲೆಗೆ ಒಪ್ಪೋ ಕಂಪನಿಯ ಎರಡು ಫೋನ್ ರಿಲೀಸ್
Oppo A76: ಒಪ್ಪೋ ಸಂಸ್ಥೆ ಇದೀಗ ಭಾರತದಲ್ಲಿ ಹೊಸದಾಗಿ ಎರಡು ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಅದುವೆ ಒಪ್ಪೋ ಎ96 ಮತ್ತು ಒಪ್ಪೋ ಎ76. ಈ ಎರಡು ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 680 SoC ಪ್ರೊಸೆಸರ್ ಪಡೆದಿವೆ. ಜೊತೆಗೆ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದ್ದು 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ನೀಡಲಾಗಿದೆ.
ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗೂ ಸೈ ಮಿಡ್ ರೇಂಜ್ ಮೊಬೈಲ್ಗೂ ರೆಡಿ ಎಂಬಂತೆ ಆಕರ್ಷಕ ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ಒಪ್ಪೋ (Oppo) ಸಂಸ್ಥೆ ಇದೀಗ ಭಾರತದಲ್ಲಿ ಹೊಸದಾಗಿ ಎರಡು ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ಅದುವೆ ಒಪ್ಪೋ ಎ96 (Oppo A96) ಮತ್ತು ಒಪ್ಪೋ ಎ76 (Oppo A76). ಈ ಎರಡು ಸ್ಮಾರ್ಟ್‌ಫೋನ್‌ಗಳು (Smartphone) ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 680 SoC ಪ್ರೊಸೆಸರ್ ಪಡೆದಿವೆ. ಜೊತೆಗೆ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದ್ದು 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ನೀಡಲಾಗಿದೆ. ಭಾರತದಲ್ಲಿ ಬಜೆಟ್ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು ಆಕರ್ಷಕ ಸ್ಮಾರ್ಟ್ಫೋನ್ಗಳ ಸಾಲಿಗೆ ಇದೀಗ ಈ ಫೋನ್ ಕೂಡ ಸೇರ್ಪಡೆಯಾಗಿದೆ. ಹಾಗಾದ್ರೆ ಇದರ ಬೆಲೆ ಎಷ್ಟು?, ಇತರೆ ವಿಶೇಷತೆ ಏನು? ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಭಾರತದಲ್ಲಿ ಒಪ್ಪೋ ಕಂಪನಿಯ ಈ ಎರಡೂ ಸ್ಮಾರ್ಟ್‌ಫೋನ್ ಸದ್ಯಕ್ಕೆ ಒಂದು ಸ್ಟೋರೆಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. ಈ ಪೈಕಿ ಒಪ್ಪೋ A96 ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 19,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಸ್ಟಾರ್ರಿ ಬ್ಲಾಕ್ ಮತ್ತು ಸನ್‌ಸೆಟ್ ಬ್ಲೂ ಬಣ್ಣಗಳನ್ನು ಪಡೆದಿದೆ. ಅದೇ ರೀತಿ ಒಪ್ಪೋ A76 ಫೋನಿನ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 17,499 ರೂ. ಆಗಿದೆ. ಇದು ಗ್ಲೋಯಿಂಗ್ ಬ್ಲ್ಯಾಕ್ ಮತ್ತು ಗ್ಲೋಯಿಂಗ್ ಬ್ಲೂ ಬಣ್ಣಗಳ ಆಯ್ಕೆ ಒಳಗೊಂಡಿದೆ. ಇನ್ನು ಈ ಎರಡೂ ಫೋನ್‌ಗಳು ಒಪ್ಪೋ ಇಂಡಿಯಾ ಆನ್‌ಲೈನ್ ಸ್ಟೋರ್ ಮತ್ತು ದೇಶದ ಆಫ್‌ಲೈನ್ ಚಿಲ್ಲರೆ ವ್ಯಾಪಾರಿಗಳ ಮೂಲಕ ಸಿಗಲಿದೆ.
ಏನು ವಿಶೇಷತೆ?:
ಒಪ್ಪೋ A96 ಸ್ಮಾರ್ಟ್‌ಫೋನ್ 1,080 x 2,412 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಬಲ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಪಡೆದಿದೆ. ಈ ಫೋನಿನ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟಅಪ್ ನೀಡಲಾಗಿದೆ. ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಕೂಡ ನೀಡಲಾಗಿದೆ.
ಒಪ್ಪೋ A76 ಸ್ಮಾರ್ಟ್‌ಫೋನ್ 720×1,612 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಇದುಕೂಡ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್ ಬಲ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ನೀಡಲಾಗಿದೆ. ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಇದರೊಂದಿಗೆ 5000mAh ಸಾಮರ್ಥ್ಯದ ದೀರ್ಘ ಬಾಳಿಕೆ ಬರುವ ಬ್ಯಾಟರಿಯನ್ನು ಅಳವಡಿಸಲಾಗಿದೆ.
Best Smartphone: ಭರ್ಜರಿ ಸೇಲ್: 20,000 ರೂ. ಒಳಗಿನ ಈ ಹೊಸ 4 ಸ್ಮಾರ್ಟ್ಫೋನ್ಗಳಿಗೆ ಎಲ್ಲಿಲ್ಲದ ಬೇಡಿಕೆ
iQoo Z6 5G: ಇಂದಿನಿಂದ ಹೊಸ ಐಕ್ಯೂ Z6 5G ಫೋನ್ ಖರೀದಿಗೆ ಲಭ್ಯ: ಈ ಆಫರ್ ಮಿಸ್ ಮಾಡ್ಬೇಡಿ
Published On - 2:46 pm, Tue, 22 March 22