Oppo A1 5G: ಒಪ್ಪೋದಿಂದ ಬಜೆಟ್ ಬೆಲೆಗೆ ಆಕರ್ಷಕ ಒಪ್ಪೋ A1 5G ಸ್ಮಾರ್ಟ್‌ಫೋನ್‌ ಬಿಡುಗಡೆ: ಫೀಚರ್ಸ್ ಏನಿದೆ?

ತನ್ನ A ಸರಣಿಯಲ್ಲಿ ಅನೇಕ ಫೋನ್‌ಗಳನ್ನು ರಿಲೀಸ್ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ಒಪ್ಪೋ A1 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದು, ಸದ್ಯಕ್ಕೆ ವಿದೇಶದಲ್ಲಿ ರಿಲೀಸ್ ಆಗಿದೆ.

Oppo A1 5G: ಒಪ್ಪೋದಿಂದ ಬಜೆಟ್ ಬೆಲೆಗೆ ಆಕರ್ಷಕ ಒಪ್ಪೋ A1 5G ಸ್ಮಾರ್ಟ್‌ಫೋನ್‌ ಬಿಡುಗಡೆ: ಫೀಚರ್ಸ್ ಏನಿದೆ?
Oppo A1 5G
Follow us
|

Updated on:Apr 13, 2023 | 2:05 PM

ಕಳೆದ ಕೆಲವು ತಿಂಗಳುಗಳಿಂದ ಚೀನಾ ಮೂಲದ ಒಪ್ಪೋ (Oppo) ಸಂಸ್ಥೆ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು (Smartphones) ಬಿಡುಗಡೆ ಮಾಡುತ್ತಿದೆ. ಹೆಚ್ಚು ಬಜೆಟ್ ಬೆಲೆಗೆ ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿಯ ಫೋನನ್ನು ಅನಾವರಣ ಮಾಡುತ್ತಿರುವ ಒಪ್ಪೋ ಅದೇ ಮಾದರಿಯ ಫೋನ್​ನೊಂದಿಗೆ ಮತ್ತೆ ಬಂದಿದೆ. ಈಗಾಗಲೇ ತನ್ನ A ಸರಣಿಯಲ್ಲಿ ಅನೇಕ ಫೋನ್‌ಗಳನ್ನು ರಿಲೀಸ್ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ಒಪ್ಪೋ A1 5G (Oppo A1 5G) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದು, ವಿದೇಶದಲ್ಲಿ ರಿಲೀಸ್ ಆಗಿದೆ. ಸದ್ಯದಲ್ಲೇ ಭಾರತಕ್ಕೂ ಈ ಫೋನ್ ಕಾಲಿಡಲಿದೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಮಾಹಿತಿ ಇಲ್ಲಿದೆ ನೋಡಿ.

ಬೆಲೆ ಎಷ್ಟು?:

ಒಪ್ಪೋ A1 5G ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಆಯ್ಕೆಯಲ್ಲಷ್ಟೆ ಅನಾವರಣವಾಗಿದೆ. ಇದರ 12GB RAM + 256GB ಆಯ್ಕೆಯ ಬೆಲೆ RMB 1999 ಆಗಿದೆ. ಅಂದರೆ ಇದರ ಬೆಲೆ ಭಾರತದಲ್ಲಿ ಅಂದಾಜು 23,900 ರೂ. ಇರಬಹುದು. ಈ ಸ್ಮಾರ್ಟ್‌ಫೋನ್‌ ಓಷನ್ ಬ್ಲೂ, ಸ್ಯಾಂಡ್‌ಸ್ಟೋನ್ ಬ್ಲಾಕ್ ಮತ್ತು ಕ್ಯಾಬೇರಿಯಾ ಆರೆಂಜ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ. ಮುಂದಿನ ತಿಂಗಳು ಈ ಸ್ಮಾರ್ಟ್​ಫೋನ್ ಭಾರತಕ್ಕೆ ಬರುವ ನಿರೀಕ್ಷೆಯಿದೆ.

ಇದನ್ನೂ ಓದಿ
Image
Realme Narzo N55: ಇಷ್ಟು ಕಡಿಮೆ ಬೆಲೆಗೆ ಎಷ್ಟೊಂದು ಅದ್ಭುತ ಫೀಚರ್ಸ್: ರಿಯಲ್ ಮಿಯಿಂದ ಅಚ್ಚರಿಯ ನಾರ್ಜೊ N55 ಫೋನ್ ಬಿಡುಗಡೆ
Image
Fire-Boltt Pristine: ಮಹಿಳೆಯರಿಗಾಗಿಯೇ ಆಕರ್ಷಕ ವಿನ್ಯಾಸ ಫೈರ್ ಬೋಲ್ಟ್ ಸ್ಮಾರ್ಟ್​ವಾಚ್
Image
Lava Blaze 2: ಬಜೆಟ್ ದರಕ್ಕೆ ಬೆಸ್ಟ್ ಫೀಚರ್ಸ್ ನೀಡುತ್ತಿದೆ ಹೊಸ ಲಾವಾ ಫೋನ್
Image
ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಭಾರತದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ

Vivo X Fold 2: ಗ್ಯಾಜೆಟ್ ಮಾರುಕಟ್ಟೆಯಲ್ಲಿ ಸ್ಪರ್ಧೆ ಸೃಷ್ಟಿಸಿದ ಫೋಲ್ಡಿಂಗ್ ಫೋನ್

ಫೀಚರ್ಸ್ ಏನಿದೆ?:

ಒಪ್ಪೋ A1 5G ಸ್ಮಾರ್ಟ್‌ಫೋನ್‌ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.71 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. 240Hz ಟಚ್ ಸ್ಯಾಂಪ್ಲಿಂಗ್ ರೇಟ್‌, 680ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಾಗಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಅಳವಡಿಸಲಾಗಿದ್ದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಫೋನ್ ಡ್ಯುಯಲ್-ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮೊನೊ ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ ರಿಯರ್‌ ಕ್ಯಾಮೆರಾ ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಬರಲಿದೆ. ಇದಲ್ಲದೆ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 67W ಸೂಪರ್‌ವೂಕ್‌ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿದೆ. ಡ್ಯುಯಲ್-ಸಿಮ್, ವೈಫೈ 802.11a/b/g/n, ಬ್ಲೂಟೂತ್ 5.1, GPS, 3.5mm ಆಡಿಯೊ ಜಾಕ್ ಅನ್ನು ಹೊಂದಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:04 pm, Thu, 13 April 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ