ಬಜೆಟ್ ಹಾಗೂ ಮಧ್ಯಮ ಬೆಲೆಗೆ ಆಕರ್ಷಕ ಕ್ಯಾಮೆರಾದ ಸ್ಮಾರ್ಟ್ಫೋನ್ಗಳನ್ನು (Smartphones) ಬಿಡುಗಡೆ ಮಾಡುವುದರಲ್ಲಿ ಒಪ್ಪೋ ಕಂಪನಿಯನ್ನು ಮೀರಿಸುವರಿಲ್ಲ. ಅದು 8 ಮೆಗಾಫಿಕ್ಸೆಲ್ ಕ್ಯಾಮೆರಾ ಆಗಿದ್ದರೂ ಆ ಫೋಟೋದಲ್ಲಿ ಏನೋ ಒಂದುರೀತಿಯ ಮ್ಯಾಜಿಕ್ ಇರುತ್ತದೆ. ಈಗಾಗಲೇ ತನ್ನ ರೆನೋ ಸರಣಿಯಲ್ಲಿ ಅತ್ಯುತ್ತಮ ಕ್ಯಾಮೆರಾ ಫೋನ್ಗಳನ್ನು ರಿಲೀಸ್ ಮಾಡಿ ಯಶಸ್ಸು ಸಾಧಿಸಿರುವ ಒಪ್ಪೋ (Oppo) ಇದೀಗ 108 ಮೆಗಾಫಿಕ್ಸೆಲ್ ಕ್ಯಾಮೆರಾದ ಮೊಟ್ಟ ಮೊದಲ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. ತನ್ನ A ಸರಣಿಯಡಿಯಲ್ಲಿ ಹೊಸ ಒಪ್ಪೋ ಎ1 ಪ್ರೊ (Oppo A1 Pro) ಫೋನನ್ನು ಒಪ್ಪೋ ಬಿಡುಗಡೆ ಮಾಡಿದೆ. ಕೇವಲ ಕ್ಯಾಮೆರಾ ಮಾತ್ರವಲ್ಲದೆ, ಬ್ಯಾಟರಿ, ಪ್ರೊಸೆಸರ್ ವಿಚಾರದಲ್ಲೂ ಈ ಫೋನ್ ಭರ್ಜರಿ ಸೌಂಡ್ ಮಾಡುತ್ತಿದೆ. ಹಾಗಾದರೆ ಒಪ್ಪೋ A1 ಪ್ರೊ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.
ಒಪ್ಪೋ A1 ಪ್ರೊ ಸ್ಮಾರ್ಟ್‌ಫೋನ್ ಸದ್ಯಕ್ಕೆ ಚೀನಾ ಮಾರುಕಟ್ಟೆಯಲ್ಲಿ ಮಾತ್ರ ಬಿಡುಗಡೆ ಆಗಿದೆ. ಕೆಲ ತಿಂಗಳಲ್ಲಿ ಇದು ಭಾರತಕ್ಕೂ ಕಾಲಿಡಲಿದೆಯಂತೆ. ಚೀನಾದಲ್ಲಿ ಈ ಫೋನಿನ 8GB + 128GB ಸ್ಟೋರೇಜ್ ಆಯ್ಕೆಗೆ RMB 1799, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 20,650ರೂ. ಎನ್ನಬಹುದು. 8GB + 256GB ಸ್ಟೋರೇಜ್ ಆಯ್ಕೆಗೆ RMB 1999 (ಅಂದಾಜು 22,940ರೂ.) ಹಾಗೂ 12GB + 256GB ಸ್ಟೋರೇಜ್ ಮಾದರಿಗೆ RMB 2299 (ಅಂದಾಜು 26,380ರೂ.).
ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 1080 x 2412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದ್ದು 120Hz ರಿಫ್ರೆಶ್ ರೇಟಟ್ನಿಂದ ಕೂಡಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಕಲರ್ ಒಎಸ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರೆನೊ 619 GPU ಮತ್ತು ಇಂಟಿಗ್ರೇಟೆಡ್ 5G ಮೋಡೆಮ್ ಅಳವಡಿಸಲಾಗಿದೆ.
ಒಪ್ಪೋ A1 ಪ್ರೊ ಸ್ಮಾರ್ಟ್‌ಫೋನ್ ಡ್ಯುಯಲ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 108 ಮೆಗಾಪಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್ ಅನ್ನು ಪಡೆದಿದೆ. ಜೊತೆಗೆ LED ಫ್ಲ್ಯಾಷ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಈ ಕ್ಯಾಮೆರಾಗಳುಸ ಸಾಕಷ್ಟು ವಿಶೇಷತೆಯಿಂದ ಕೂಡಿದ್ದು, ಅನೇಕ ಫಿಲ್ಟರ್ಗಳ ಆಯ್ಕೆ ಇದೆ.
4800mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 67W ಸೂಪರ್ VOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ USB 2.0 ಟೈಪ್-ಸಿ ಪೋರ್ಟ್ ಅನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 5G, ವೈಫೈ, ಬ್ಲೂಟೂತ್ 5.1, NFC, GPS ಸೇರಿದಂತೆ ನೂತನ ಮೊಬೈಲ್ಗಳಲ್ಲಿರುವ ಎಲ್ಲ ಆಯ್ಕೆ ನೀಡಲಾಗಿದೆ.