Oppo A16: 5000mAh ಬ್ಯಾಟರಿ, ಕೇವಲ 13,990 ರೂ.: ಭಾರತದಲ್ಲಿ ಹೊಸ ಒಪ್ಪೋ A16 ಸ್ಮಾರ್ಟ್​ಫೋನ್ ಬಿಡುಗಡೆ

ಒಪ್ಪೋ A16 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಕೇವಲ ಒಂದು ಮಾದರಿಯಲ್ಲಷ್ಟೆ ಖರೀದಿಗೆ ಲಭ್ಯವಿದೆ. 4GB RAM + 64GB ಶೇಖರಣಾ ಮಾದರಿಗೆ ಕೇವಲ 13,990 ರೂ. ನಿಗದಿ ಮಾಡಲಾಗಿದೆ.

Oppo A16: 5000mAh ಬ್ಯಾಟರಿ, ಕೇವಲ 13,990 ರೂ.: ಭಾರತದಲ್ಲಿ ಹೊಸ ಒಪ್ಪೋ A16 ಸ್ಮಾರ್ಟ್​ಫೋನ್ ಬಿಡುಗಡೆ
Oppo A16
Follow us
TV9 Web
| Updated By: Vinay Bhat

Updated on: Sep 20, 2021 | 12:52 PM

ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ಭಿನ್ನ ಪ್ರಕಾರಗಳ ಫೋನುಗಳನ್ನು ಬಿಡುಗಡೆ ಮಾಡಿ ಸೈ ಎನಿಸಿಕೊಂಡಿರುವ ಪ್ರಸಿದ್ಧ ಒಪ್ಪೋ ಕಂಪೆನಿ ಸದ್ಯ ಹೊಸ ಒಪ್ಪೋ ಎ16 (Oppo A16) ಮೊಬೈಲ್ ಅನ್ನು ಅನವಾರಣ ಮಾಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಮಾತ್ರವಲ್ಲದೆ ಆಕರ್ಷಕ ಬ್ಯಾಟರಿ ಸಾಮರ್ಥ್ಯ ಹೊಂದಿರುವ ಈ ಸ್ಮಾರ್ಟ್​ಫೋನ್ ಕಡಿಮೆ ಬೆಲೆಯದ್ದಾಗಿದ್ದು ಭಾರತದಲ್ಲಿ ಬಿಡುಗಡೆ ಆಗಿದೆ.

ಒಪ್ಪೋ A16 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಕೇವಲ ಒಂದು ಮಾದರಿಯಲ್ಲಷ್ಟೆ ಖರೀದಿಗೆ ಲಭ್ಯವಿದೆ. 4GB RAM + 64GB ಶೇಖರಣಾ ಮಾದರಿಗೆ ಕೇವಲ 13,990 ರೂ. ನಿಗದಿ ಮಾಡಲಾಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಮತ್ತು ಆಫ್​ಲೈನ್ ಸ್ಟೋರ್​ಗಳನ್ನು ಈ ಸ್ಮಾರ್ಟ್​ಫೋನ್ ಮಾರಾಟವಾಗುತ್ತಿದೆ. ವಿಶೇಷ ಆಫರ್ ಕೂಡ ನೀಡಲಾಗಿದ್ದು ಹೆಚ್​ಡಿಎಫ್​ಸಿ, ಐಸಿಐಸಿಐ, ಕೋಟಕ್ ಮತ್ತು ಫೆಡರಲ್ ಬ್ಯಾಂಕುದಾರರಿಗೆ 750 ರೂ. ಕ್ಯಾಶ್​ಬ್ಯಾಕ್ ಆಫರ್ ಇದೆ. ಪೇಟಿಂ ಮೂಲಕ ಖರೀದಿಸಿದರೆ 1,500 ರೂ. ವರೆಗೆ ಕ್ಯಾಶ್​ಬ್ಯಾಕ್ ಪಡೆಯಬಹುದು.

ಒಪ್ಪೋ A16 ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ HD + ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G35SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾದ ಆಯ್ಕೆಯನ್ನು ಹೊಂದಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೆ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮೊನೊ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಒಪ್ಪೋ A16 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ ವಿ 5, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

Amazon Mega Music Fest: ಅಮೆಜಾನ್​ನಲ್ಲಿ ಮ್ಯೂಸಿಕ್‌ ಫೆಸ್ಟ್‌ ಸೇಲ್‌: ಹೆಡ್‌ಫೋನ್‌, ಸ್ಪೀಕರ್‌ಗಳು ಬಂಪರ್ ಡಿಸ್ಕೌಂಟ್​ಗೆ ಲಭ್ಯ

Airtel: ಐಪಿಎಲ್ ವೀಕ್ಷಿಸಲು ಅಭಿಮಾನಿಗಳಿಗೆ ಬಂಪರ್ ಆಫರ್ ಪರಿಚಯಿಸಿದ ಏರ್ಟೆಲ್

(Oppo A16 with 5000mAh battery launched in India via amazon Price specifications and more)

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು