Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಮೆರಾ ಪ್ರಿಯರಿಗಾಗಿ ಬಂತು ಬಜೆಟ್ ಸ್ಮಾರ್ಟ್​ಫೋನ್: ಭಾರತದಲ್ಲಿ ಒಪ್ಪೋ A38 ಫೋನ್ ಬಿಡುಗಡೆ

Oppo A38 was launched in India: ಗ್ಲೋಯಿಂಗ್ ಬ್ಲ್ಯಾಕ್ ಮತ್ತು ಗ್ಲೋಯಿಂಗ್ ಗೋಲ್ಡ್ ಬಣ್ಣ ಆಯ್ಕೆಗಳಲ್ಲಿ ರಿಲೀಸ್ ಆಗಿರುವ ಒಪ್ಪೋ A38 ಸ್ಮಾರ್ಟ್​ಫೋನ್ ಕೇವಲ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಖರೀದಿಗೆ ಲಭ್ಯವಿದೆ. ಇದರ 4GB RAM + 128GB ರೂಪಾಂತರಕ್ಕೆ ಭಾರತದಲ್ಲಿ 12,999 ರೂ. ನಿಗದಿ ಮಾಡಲಾಗಿದೆ.

ಕ್ಯಾಮೆರಾ ಪ್ರಿಯರಿಗಾಗಿ ಬಂತು ಬಜೆಟ್ ಸ್ಮಾರ್ಟ್​ಫೋನ್: ಭಾರತದಲ್ಲಿ ಒಪ್ಪೋ A38 ಫೋನ್ ಬಿಡುಗಡೆ
Oppo A38
Follow us
Vinay Bhat
|

Updated on: Sep 08, 2023 | 3:13 PM

ಈ ವಾರದ ಆರಂಭದಲ್ಲಿ ಯುಎಇಯಲ್ಲಿ ಸದ್ದಿಲ್ಲದೆ ಅನಾವರಣಗೊಂಡ ಒಪ್ಪೋ ಕಂಪನಿಯ ಬಹುನಿರೀಕ್ಷಿತ ಸ್ಮಾರ್ಟ್​ಫೋನ್ ಒಪ್ಪೋ A38 (Oppo A38) ಇದೀಗ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ ಚಿಪ್‌ಸೆಟ್‌ನಿಂದ ಚಾಲಿತವಾಗಿದೆ ಮತ್ತು 5,000mAh ಬ್ಯಾಟರಿಯನ್ನು 33W ವೈರ್ಡ್ SuperVOOC ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಪ್ಯಾಕ್ ಮಾಡುತ್ತದೆ. ಹುಬ್ಬೇರಿಸುವಂತಹ ಫೀಚರ್​ಗಳು ಇದರಲ್ಲಿ ಅಡಕವಾಗಿದ್ದರೂ ಈ ಫೋನ್ ಬಜೆಟ್ ಬೆಲೆಗೆ ಲಭ್ಯವಿದೆ.

ಭಾರತದಲ್ಲಿ ಒಪ್ಪೋ A38 ಬೆಲೆ, ಲಭ್ಯತೆ:

ಗ್ಲೋಯಿಂಗ್ ಬ್ಲ್ಯಾಕ್ ಮತ್ತು ಗ್ಲೋಯಿಂಗ್ ಗೋಲ್ಡ್ ಬಣ್ಣ ಆಯ್ಕೆಗಳಲ್ಲಿ ರಿಲೀಸ್ ಆಗಿರುವ ಒಪ್ಪೋ A38 ಸ್ಮಾರ್ಟ್​ಫೋನ್ ಕೇವಲ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಖರೀದಿಗೆ ಲಭ್ಯವಿದೆ. ಇದರ 4GB RAM + 128GB ರೂಪಾಂತರಕ್ಕೆ ಭಾರತದಲ್ಲಿ 12,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಅಧಿಕೃತ ಒಪ್ಪೋ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಮುಂಗಡ-ಆರ್ಡರ್‌ಗಳಿಗೆ ಲಭ್ಯವಿದ್ದು, ಸೆಪ್ಟೆಂಬರ್ 13 ರಿಂದ ಮಾರಾಟವಾಗಲಿದೆ.

ಒಪ್ಪೋ A38 ಫೀಚರ್ಸ್:

ಒಪ್ಪೋ A38 ಸ್ಮಾರ್ಟ್​ಫೋನ್ 6.56-ಇಂಚಿನ HD+ (1612×720 ಪಿಕ್ಸೆಲ್‌ಗಳು) LCD ಡಿಸ್‌ಪ್ಲೇ ಹೊಂದಿದ್ದು, 90Hz ನ ರಿಫ್ರೆಶ್ ದರ ಮತ್ತು 720 nits ವರೆಗಿನ ಗರಿಷ್ಠ ಬ್ರೈಟ್​ನೆಸ್ ಮಟ್ಟವನ್ನು ಹೊಂದಿದೆ. ಡ್ಯುಯಲ್ ನ್ಯಾನೊ ಸಿಮ್-ಬೆಂಬಲಿತ ಫೋನ್ ಆಂಡ್ರಾಯ್ಡ್ 13-ಆಧಾರಿತ ColorOS 13.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. 4GB RAM ಮತ್ತು 128GB ಅಂತರ್ಗತ ಸಂಗ್ರಹಣೆಯೊಂದಿಗೆ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ G85 SoC ನಿಂದ ರನ್ ಆಗುತ್ತದೆ.

ಇದನ್ನೂ ಓದಿ
Image
ತಯಾರಾಗಿ: ಮುಂದಿನ ವಾರ ಭಾರತಕ್ಕೆ ಅಪ್ಪಳಿಸುತ್ತಿದೆ ಮೋಟೋ ಎಡ್ಜ್ 40 ನಿಯೋ
Image
ಗೂಗಲ್ ಪಿಕ್ಸೆಲ್ 8, 8 ಪ್ರೊ ಬಿಡುಗಡೆ ದಿನಾಂಕ ಬಹಿರಂಗ
Image
ಸದ್ಯದಲ್ಲೇ ಗ್ಯಾಲಕ್ಸಿ S23 ಸರಣಿಯಿಂದ ಫ್ಯಾನ್ ಆವೃತ್ತಿ ಬಿಡುಗಡೆ
Image
ಮೋಟೋ G84 5G ಫೋನ್ ಇಂದಿನಿಂದ ಖರೀದಿಗೆ ಲಭ್ಯ

ಜಿ20 ಶೃಂಗಸಭೆಗಾಗಿ G20 ಇಂಡಿಯಾ ಮೊಬೈಲ್ ಆ್ಯಪ್ ಬಿಡುಗಡೆ; ವೈಶಿಷ್ಟ್ಯಗಳು, ಪ್ರಯೋಜನಗಳು ಏನೇನು?

ಕ್ಯಾಮೆರಾ ವಿಚಾರಕ್ಕೆ ಬಂದರೆ, ಒಪ್ಪೋ A38 ಸ್ಮಾರ್ಟ್​ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಘಟಕವನ್ನು ಹೊಂದಿದೆ. 50-ಮೆಗಾಪಿಕ್ಸೆಲ್ AI-ಬೆಂಬಲಿತ ಪ್ರಾಥಮಿಕ ಸೆನ್ಸಾರ್ ಮತ್ತು 2-ಮೆಗಾಪಿಕ್ಸೆಲ್ ಸೆಕೆಂಡರಿ ಸಂವೇದಕವನ್ನು ಹೊಂದಿದೆ. ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 5-ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆಯನ್ನು ನೀಡಲಾಗಿದೆ.

ಒಪ್ಪೋ A38 ಫೋನ್ 5,000mAh ಬ್ಯಾಟರಿಯನ್ನು 33W ವೈರ್ಡ್ SuperVOOC ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಪ್ಯಾಕ್ ಮಾಡಲಾಗಿದೆ. ಭದ್ರತೆಗಾಗಿ, ಹ್ಯಾಂಡ್‌ಸೆಟ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ. ಇದು ವೈಫೈ 5, ಬ್ಲೂಟೂತ್ 5.3, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲ ಪಡೆದಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ