ಭಾರತದಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಬೆಲೆ ಹೆಚ್ಚಳ ಕಾರ್ಯ ಮುಂದುವರೆದಿದೆ. ಶವೋಮಿ (Xiaomi), ಸ್ಯಾಮ್ಸಂಗ್ (Samsung) ಬಳಿಕ ಇದೀಗ ಒಪ್ಪೋ ಕಂಪೆನಿ ತನ್ನ ಎರಡು ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ ಏರಿಕೆ ಮಾಡಿದೆ. ಆಕರ್ಷಕ ಫೀಚರ್ಗಳಿಂದ ಕೂಡಿರುವ ಒಪ್ಪೋ ಎ54 ಮತ್ತು ಒಪ್ಪೋ ಎಫ್19 (Oppo A54 and Oppo F19) ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ 1,000ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ಒಪ್ಪೋ A54 ಸ್ಮಾರ್ಟ್‌ಫೋನ್ ಇದೀಗ 14,990 ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಇದರ 4GB + 128GB ಸ್ಟೋರೇಜ್ ಬೆಲೆ ಕೂಡ 14,490 ರೂ. ಆಗಿದೆ. ಇನ್ನು ಒಪ್ಪೋ F19 ಸ್ಮಾರ್ಟ್‌ಫೋನ್ 18,990 ರೂ. ನಿಂದ 19,990 ರೂ. ಗೆ ಏರಿಕೆ ಆಗಿದೆ. ಈ ಸ್ಮಾರ್ಟ್‌ಫೋನ್‌ಗಳು ಈಗಾಗಲೇ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart), ಅಮೆಜಾನ್ (Amazon) ಪ್ಲಾಟ್‌ಫಾರ್ಮ್ ಸೈಟ್‌ಗಳಲ್ಲಿ ಮಾರಾಟದಲ್ಲಿವೆ.
ಒಪ್ಪೋ A54 ಸ್ಮಾರ್ಟ್‌ಫೋನ್ 720×1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.51-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 (MT6765V) SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10. ಆಧಾರಿತ ಕಲರ್ ಒಎಸ್ 7.2 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಚಾರ್ಜಿಂಗ್ ಬೆಂಬಲಿಸಲಿದೆ.
ಒಪ್ಪೋ F19 ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯದ 6.43-ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಲರ್ಓಎಸ್ 11.1 ಮೇಲೆ ರನ್ ಆಗಲಿದೆ. ಇನ್ನು ಈ ಫೋನ್ ಟ್ರಿಪಲ್ ಕ್ಯಾಮೆರಾ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಇದಲ್ಲದೆ 5,000mAh ಬ್ಯಾಟರಿಯನ್ನು 33W ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ.
Telegram Update: ವಾಟ್ಸ್ಆ್ಯಪ್ಗೆ ಸೆಡ್ಡು ಹೊಡೆದ ಟೆಲಿಗ್ರಾಂ: ಹೊಸ ಅಪ್ಡೇಟ್ನಲ್ಲಿ ಸೂಪರ್ ಫೀಚರ್ಸ್
iOS 15: ಐಫೋನ್ ಬಳಕೆದಾರರ ಗಮನಕ್ಕೆ; ನಿಮ್ಮ ಮೊಬೈಲ್ಗೆ ಇಂದು ಹೊಸ ಅಪ್ಡೇಟ್ ಸಿಗಲಿದೆ
(Oppo A54 and Oppo F19 Oppo has increased the prices of some of its popular smartphones in India)