AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppo A56 5G: ಮಾರುಕಟ್ಟೆಗೆ ಲಗ್ಗೆಯಿಟ್ಟ ಬಲಿಷ್ಠ ಬ್ಯಾಟರಿ, ಭರ್ಜರಿ ಕ್ಯಾಮೆರಾದ ಒಪ್ಪೋ A56 5G ಸ್ಮಾರ್ಟ್​ಫೋನ್

ಚೀನಾದಲ್ಲಿ ಸದ್ಯಕ್ಕೆ ಒಪ್ಪೋ A56 5G ಸ್ಮಾರ್ಟ್‌ಫೋನ್‌ ಕೇವಲ ಒಂದು ಮಾದರಿಯಲ್ಲಷ್ಟೆ ಖರೀದಿಗೆ ಸಿಗಲಿದೆ. 6GB RAM ಮತ್ತು 128GB ವೇರಿಯಂಟ್‌ ಬೆಲೆಯು CNY 1,599 ಆಗಿದೆ, ಅಂದರೆ ಇದರ ಬೆಲೆ ಭಾರತದಲ್ಲಿ ಅಂದಾಜು 18,000 ರೂ. ಒಳಗೆ ಇರಬಹುದು.

Oppo A56 5G: ಮಾರುಕಟ್ಟೆಗೆ ಲಗ್ಗೆಯಿಟ್ಟ ಬಲಿಷ್ಠ ಬ್ಯಾಟರಿ, ಭರ್ಜರಿ ಕ್ಯಾಮೆರಾದ ಒಪ್ಪೋ A56 5G ಸ್ಮಾರ್ಟ್​ಫೋನ್
Oppo A56 5G
Follow us
TV9 Web
| Updated By: Vinay Bhat

Updated on: Oct 26, 2021 | 1:38 PM

ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಸದಾ ಒಂದಲ್ಲಾ ಒಂದು ಫೋನ್​ಗಳನ್ನು ಬಿಡುಗಡೆ ಮಾಡಿ ಸುದ್ದಿಯಲ್ಲಿರುವ ಒಪ್ಪೋ (Oppo) ಕಂಪನಿ ಇದೀಗ ಹೊಸ ಒಪ್ಪೋ ಎ56 5ಜಿ (Oppo A56 5G) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಸಾಕಷ್ಟು ಹೊಸ ತನಗಳಿಂದ ಕೂಡಿರುವ ಈ ಸ್ಮಾರ್ಟ್​ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ (MediaTek Dimensity) 700 ಆಕ್ಟಾ ಕೋರ್ SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದಿಷ್ಟೆ ಅಲ್ಲದೆ ಡ್ಯುಯಲ್‌ ಕ್ಯಾಮೆರಾ ಸೆನ್ಸಾರ್, 5,000mAh ಬ್ಯಾಟರಿ ಬ್ಯಾಕ್‌ಅಪ್‌ ಸೇರಿದಂತೆ ಅಗತ್ಯ ಫೀಚರ್​ಗಳಿಂದ ಕೂಡಿದೆ. ಸದ್ಯಕ್ಕೆ ಒಪ್ಪೋ A56 5G ಸ್ಮಾರ್ಟ್‌ಫೋನ್‌ ಚೀನಾ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಕೆಲವೇ ದಿನಗಳಲ್ಲಿ ಭಾರತದಲ್ಲೀ ರಿಲೀಸ್ ಆಗಲಿದೆ ಎನ್ನಲಾಗಿದೆ.

ಚೀನಾದಲ್ಲಿ ಸದ್ಯಕ್ಕೆ ಒಪ್ಪೋ A56 5G ಸ್ಮಾರ್ಟ್‌ಫೋನ್‌ ಕೇವಲ ಒಂದು ಮಾದರಿಯಲ್ಲಷ್ಟೆ ಖರೀದಿಗೆ ಸಿಗಲಿದೆ. 6GB RAM ಮತ್ತು 128GB ವೇರಿಯಂಟ್‌ ಬೆಲೆಯು CNY 1,599 ಆಗಿದೆ, ಅಂದರೆ ಇದರ ಬೆಲೆ ಭಾರತದಲ್ಲಿ ಅಂದಾಜು 18,000 ರೂ. ಒಳಗೆ ಇರಬಹುದು. ಈ ಫೋನ್ ಬ್ಲೂ, ಬ್ಲ್ಯಾಕ್ ಹಾಗೂ ಪರ್ಪಲ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ.

ಒಪ್ಪೋ A56 5G ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ Dimensity 700 ಆಕ್ಟಾ ಕೋರ್ SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ನಲ್ಲಿ ಕಲರ್ಓಎಸ್ 11.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ.

ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಫೋಟೊ ಎಡಿಟಿಂಗ್ ಆಯ್ಕೆಗಳು ಇವೆ.

5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕಪ್​ನಿಂದ ಈ ಸ್ಮಾರ್ಟ್​ಫೋನ್ ಕೂಡಿದೆ. ಇದರೊಂದಿಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ. ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್ (ನ್ಯಾನೋ) ಸ್ಲಾಟ್‌ಗಳು, ಯುಎಸ್‌ಬಿ ಟೈಪ್-ಸಿ ಪೋರ್ಟ್, ಬ್ಲೂಟೂತ್ v5.1, ವೈ-ಫೈ 5, 3.5 ಎಂಎಂ ಆಡಿಯೊ ಜ್ಯಾಕ್, ಜಿಪಿಎಸ್ ಮತ್ತು ಹೆಚ್ಚಿನವು ಸೇರಿವೆ.

Flipkart Big Diwali Sale: ಭರ್ಜರಿ ಬೇಡಿಕೆ: ಗ್ರಾಹಕರಿಗಾಗಿ ಮತ್ತೊಮ್ಮೆ ದೀಪಾವಳಿ ಸೇಲ್ ಆಯೋಜಿಸಲು ಮುಂದಾದ ಫ್ಲಿಪ್​ಕಾರ್ಟ್

WhatsApp: ವಾಟ್ಸ್​ಆ್ಯಪ್​ನಿಂದ ಬಹುಬೇಡಿಕೆಯ ಫೀಚರ್: ಸ್ಟೇಟಸ್​ನಲ್ಲಿ ವಿಶೇಷ ಆಯ್ಕೆಯ ಹೊಸ ಅಪ್ಡೇಟ್

(Oppo A56 5G has launched in the Chinese market expanding the company A-series portfolio)

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ