ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗೂ (Smartphone) ಸೈ ಮಿಡ್ ರೇಂಜ್ ಮೊಬೈಲ್ಗೂ ರೆಡಿ ಎಂಬಂತೆ ಆಕರ್ಷಕ ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ಒಪ್ಪೋ (Oppo) ಸಂಸ್ಥೆಗೆ A ಸರಣಿಯ ಫೋನ್‌ಗಳು ಹೆಚ್ಚಿನ ಹೆಸರು ತಂದುಕೊಟ್ಟಿದೆ. ಇದೀಗ ಒಪ್ಪೋ ಭಾರತದಲ್ಲಿ ಎ ಸರಣಿಯ ಅಡಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಒಪ್ಪೋ ಎ57 2022 (OPPO A57) ಅನ್ನು ಬಿಡುಗಡೆ ಮಾಡಿದೆ. ಮೀಡಿಯಾಟೆಕ್ G35 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿರುವ ಈ ಸ್ಮಾರ್ಟ್ಫೋನ್ಗೆ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.
- ಒಪ್ಪೋ A57 (2022) ಸ್ಮಾರ್ಟ್‌ಫೋನ್ ಭಾರತದಲ್ಲಿ ಕೇವಲ ಒಂದು ಮಾದರಿಯಲ್ಲಷ್ಟೆ ಅನಾವರಣಗೊಂಡಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ 13,999 ರೂ. ನಿಗದಿ ಮಾಡಲಾಗಿದೆ.
- ಈ ಸ್ಮಾರ್ಟ್‌ಫೋನ್ ಪ್ರಸ್ತುತ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಗ್ಲೋಯಿಂಗ್ ಗ್ರೀನ್ ಮತ್ತು ಗ್ಲೋಯಿಂಗ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.
- ಒಪ್ಪೋ A57 (2022) 6.56-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,612×720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ.
- ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾಟೆಕ್ ಹಿಲಿಯೋ G35 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಕಲರ್OS 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ.
- ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
- ಇನ್ನು ಈ ಸ್ಮಾರ್ಟ್‌ಫೋನ್ ಕ್ಯಾಮೆರಾ ಮೂಲಕ 30fps ನಲ್ಲಿ 1080p ವರೆಗೆ ವಿಡಿಯೋ ರೆಕಾರ್ಡ್ ಮಾಡಬಹುದಾದ ಆಯ್ಕೆ ನೀಡಲಾಗಿದೆ. ಇದಲ್ಲದೆ ಕ್ಯಾಮೆರಾದಲ್ಲಿ ಎಲ್ಇಡಿ ಫ್ಲ್ಯಾಷ್, ಎಚ್‌ಡಿಆರ್, ಪನೋರಮಾ ಫೀಚರ್ಸ್‌ಗಳನ್ನು ಕಾಣಬಹುದಾಗಿದೆ.
- 33W ಸೂಪರ್‌ವೂಕ್ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ಬ್ಲೂಟೂತ್ 5.3, USB ಟೈಪ್-C ಪೋರ್ಟ್ ಮತ್ತು 3.mm ಹೆಡ್‌ಫೋನ್ ಜ್ಯಾಕ್ ಅನ್ನು ಸಹ ಹೊಂದಿದೆ.
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ