Kannada News Technology OPPO A57 has launched in India as the latest A-series smartphone from OPPO
OPPO A57: ಬಜೆಟ್ ಫೋನ್ ಅಂದ್ರೆ ಇದು: ಭಾರತದಲ್ಲಿ ಒಪ್ಪೋ A57 (2022) ಸ್ಮಾರ್ಟ್‌ಫೋನ್ ಬಿಡುಗಡೆ
ಒಪ್ಪೋ A57 (2022) ಸ್ಮಾರ್ಟ್‌ಫೋನ್ ಭಾರತದಲ್ಲಿ ಕೇವಲ ಒಂದು ಮಾದರಿಯಲ್ಲಷ್ಟೆ ಅನಾವರಣಗೊಂಡಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ 13,999 ರೂ. ನಿಗದಿ ಮಾಡಲಾಗಿದೆ.
OPPO A57
Follow us on
ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗೂ (Smartphone) ಸೈ ಮಿಡ್ ರೇಂಜ್ ಮೊಬೈಲ್ಗೂ ರೆಡಿ ಎಂಬಂತೆ ಆಕರ್ಷಕ ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ಒಪ್ಪೋ(Oppo) ಸಂಸ್ಥೆಗೆ A ಸರಣಿಯ ಫೋನ್‌ಗಳು ಹೆಚ್ಚಿನ ಹೆಸರು ತಂದುಕೊಟ್ಟಿದೆ. ಇದೀಗ ಒಪ್ಪೋ ಭಾರತದಲ್ಲಿ ಎ ಸರಣಿಯ ಅಡಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಒಪ್ಪೋ ಎ57 2022 (OPPO A57) ಅನ್ನು ಬಿಡುಗಡೆ ಮಾಡಿದೆ. ಮೀಡಿಯಾಟೆಕ್ G35 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿರುವ ಈ ಸ್ಮಾರ್ಟ್ಫೋನ್ಗೆ ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.
ಒಪ್ಪೋ A57 (2022) ಸ್ಮಾರ್ಟ್‌ಫೋನ್ ಭಾರತದಲ್ಲಿ ಕೇವಲ ಒಂದು ಮಾದರಿಯಲ್ಲಷ್ಟೆ ಅನಾವರಣಗೊಂಡಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕೆ 13,999 ರೂ. ನಿಗದಿ ಮಾಡಲಾಗಿದೆ.
ಈ ಸ್ಮಾರ್ಟ್‌ಫೋನ್ ಪ್ರಸ್ತುತ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಗ್ಲೋಯಿಂಗ್ ಗ್ರೀನ್ ಮತ್ತು ಗ್ಲೋಯಿಂಗ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.
ಒಪ್ಪೋ A57 (2022) 6.56-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,612×720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾಟೆಕ್ ಹಿಲಿಯೋ G35 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಕಲರ್OS 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಇದನ್ನೂ ಓದಿ
ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಕ್ಯಾಮೆರಾ ಮೂಲಕ 30fps ನಲ್ಲಿ 1080p ವರೆಗೆ ವಿಡಿಯೋ ರೆಕಾರ್ಡ್ ಮಾಡಬಹುದಾದ ಆಯ್ಕೆ ನೀಡಲಾಗಿದೆ. ಇದಲ್ಲದೆ ಕ್ಯಾಮೆರಾದಲ್ಲಿ ಎಲ್ಇಡಿ ಫ್ಲ್ಯಾಷ್, ಎಚ್‌ಡಿಆರ್, ಪನೋರಮಾ ಫೀಚರ್ಸ್‌ಗಳನ್ನು ಕಾಣಬಹುದಾಗಿದೆ.
33W ಸೂಪರ್‌ವೂಕ್ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ಬ್ಲೂಟೂತ್ 5.3, USB ಟೈಪ್-C ಪೋರ್ಟ್ ಮತ್ತು 3.mm ಹೆಡ್‌ಫೋನ್ ಜ್ಯಾಕ್ ಅನ್ನು ಸಹ ಹೊಂದಿದೆ.