ಭಾರತದಲ್ಲಿ ಒಪ್ಪೋ A58 ಸ್ಮಾರ್ಟ್​ಫೋನ್ ಬಿಡುಗಡೆ: ಇದು ಬಜೆಟ್ ಬೆಲೆಯ ಬಂಪರ್ ಫೋನ್

Oppo A58 4G: ಒಪ್ಪೋ A58 4ಜಿ ಸ್ಮಾರ್ಟ್​ಫೋನ್ ಸದ್ಯಕ್ಕೆ ಭಾರತದಲ್ಲಿ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 6GB RAM + 128GB ರೂಪಾಂತರಕ್ಕೆ ಕೇವಲ 14,999 ರೂ. ನಿಗದಿ ಮಾಡಲಾಗಿದೆ. ಇದು ಕಪ್ಪು ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

ಭಾರತದಲ್ಲಿ ಒಪ್ಪೋ A58 ಸ್ಮಾರ್ಟ್​ಫೋನ್ ಬಿಡುಗಡೆ: ಇದು ಬಜೆಟ್ ಬೆಲೆಯ ಬಂಪರ್ ಫೋನ್
Oppo A58 4G
Follow us
|

Updated on: Aug 08, 2023 | 1:47 PM

ಚೀನಾ ಮೂಲದ ಪ್ರಸಿದ್ಧ ಒಪ್ಪೋ (Oppo) ಕಂಪನಿ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಮುಖ್ಯವಾಗಿ ಕಡಿಮೆ ಬೆಲೆಗೆ ಅತ್ಯುತ್ತಮ ಕ್ಯಾಮೆರಾ, ಬ್ಯಾಟರಿ ಇರುವ ಮೊಬೈಲ್ (Mobile) ಲಾಂಚ್ ಮಾಡುತ್ತಿರುವ ಒಪ್ಪೋ ಇದೀಗ ಅಂತಹದೆ ಫೋನಿನೊಂದಿಗೆ ಮತ್ತೆ ಬಂದಿದೆ. ಇಂದು ದೇಶದಲ್ಲಿ ಒಪ್ಪೋ ಎ58 4ಜಿ (Oppo A58 4G) ಸ್ಮಾರ್ಟ್​ಫೋನ್ ಅನಾವರಣಗೊಂಡಿದೆ. ಇದು ಬಜೆಟ್ ಬೆಲೆಯ ಫೋನಾಗಿದ್ದರೂ ಆಕರ್ಷಕ ಕ್ಯಾಮೆರಾ, ವೇಗದ ಚಾರ್ಜಿಂಗ್ ಬೆಂಬಲ, ಬಲಿಷ್ಠ ಪ್ರೊಸೆಸರ್ ಆಯ್ಕೆ ನೀಡಲಾಗಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

ಒಪ್ಪೋ A58 ಬೆಲೆ ಎಷ್ಟು?:

ಒಪ್ಪೋ A58 4ಜಿ ಸ್ಮಾರ್ಟ್​ಫೋನ್ ಸದ್ಯಕ್ಕೆ ಭಾರತದಲ್ಲಿ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 6GB RAM + 128GB ರೂಪಾಂತರಕ್ಕೆ ಕೇವಲ 14,999 ರೂ. ನಿಗದಿ ಮಾಡಲಾಗಿದೆ. ಇದು ಕಪ್ಪು ಮತ್ತು ಹಸಿರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮೂಲಕ ಸೇಲ್ ಕಾಣುತ್ತಿದೆ. ನೀವು ICICI, HDFC, ಮತ್ತು ಕೋಟಕ್ ಬ್ಯಾಂಕ್ ಸೇರಿದಂತೆ ಆಯ್ದ ಬ್ಯಾಂಕ್‌ಗಳ ಕಾರ್ಡ್ ಮೂಲಕ ಪಡೆದುಕೊಂಡರೆ ಹೆಚ್ಚುವರಿ ರಿಯಾಯಿತಿಗಳು ಮತ್ತು ಇತರ ಕೊಡುಗೆಗಳನ್ನು ಪಡೆಯಬಹುದು.

ಬಜೆಟ್ ಪ್ರಿಯರು ಗಮನಿಸಿ: ಇಂದಿನಿಂದ ಮಾರಾಟ ಕಾಣುತ್ತಿದೆ ಅತಿ ಕಡಿಮೆ ಬೆಲೆಯ ಮೋಟೋ G14 ಫೋನ್

ಇದನ್ನೂ ಓದಿ
Image
Flipkart Big Saving Days: ವಿಶೇಷ ಆಫರ್ ಸೇಲ್ ನಡೆಸುತ್ತಿದೆ ಫ್ಲಿಪ್​ಕಾರ್ಟ್, ಇಲ್ಲಿದೆ ಡೀಟೇಲ್ಸ್!
Image
Amazon Great Freedom Festival: ಅಮೆಜಾನ್ ಸೇಲ್​ನಲ್ಲಿ ದೊರೆಯುತ್ತಿದೆ ವಿಶೇಷ ಆಫರ್
Image
ಇಂದು ಅಮೆಜಾನ್ ಫ್ರೀಡಂ ಫೆಸ್ಟಿವಲ್ ಸೇಲ್ ಮುಕ್ತಾಯ: ಕೊನೇ ದಿನ ಈ ಫೋನ್​ಗಳ ಮೇಲೆ ಭರ್ಜರಿ ಡಿಸ್ಕೌಂಟ್
Image
ಒನ್​ಪ್ಲಸ್​ನ ಮೊಟ್ಟ ಮೊದಲ ಫೋಲ್ಡಬಲ್ ಸ್ಮಾರ್ಟ್‌ಫೋನ್ ಬೆಲೆ ಕೇಳಿ ಶಾಕ್ ಆದ ಟೆಕ್ ಜಗತ್ತು: ಎಷ್ಟು ಗೊತ್ತೇ?

ಒಪ್ಪೋ A58 4G ಫೀಚರ್ಸ್:

ಈ ಫೋನ್ 90Hz ನ ರಿಫ್ರೆಶ್ ದರದೊಂದಿಗೆ 6.72-ಇಂಚಿನ ಪೂರ್ಣ-HD+ (2400 x 1080 ಪಿಕ್ಸೆಲ್‌ಗಳು) ಡಿಸ್‌ಪ್ಲೇಯನ್ನು ಹೊಂದಿದೆ. G52 MC2 GPU ಜೊತೆಗೆ ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಇದರ ಇಂಡೋನೇಷಿಯನ್ ಪ್ರತಿರೂಪದಂತೆಯೇ, ಇದು Android 13-ಆಧಾರಿತ ColorOS 13.1 ನೊಂದಿಗೆ ರನ್ ಆಗುತ್ತದೆ.

ಕ್ಯಾಮೆರಾ ವಿಚಾರಕ್ಕೆ ಬಂದರೆ ಹಿಂಬದಿ ಡ್ಯುಯಲ್ ಕ್ಯಾಮೆರಾ ಘಟಕವಿದ್ದು 2-ಮೆಗಾಪಿಕ್ಸೆಲ್ ಸಂವೇದಕದೊಂದಿಗೆ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 8-ಮೆಗಾಪಿಕ್ಸೆಲ್ ಕ್ಯಾಮೆರಾ ಅಳವಡಿಸಲಾಗಿದೆ. ಹಿಂಭಾಗದ ಕ್ಯಾಮೆರಾ ಜೊತೆ ಎಲ್ಇಡಿ ಫ್ಲ್ಯಾಷ್ ಜೋಡಿಸಲಾಗಿದೆ.

ಒಪ್ಪೋ A58 4G 33W ವೈರ್ಡ್ SuperVOOC ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಭದ್ರತೆಗಾಗಿ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ. ಈ ಫೋನ್ 5ಜಿ ಆಯ್ಕೆ ಪಡೆದುಕೊಂಡಿಲ್ಲ. ಬ್ಲೂಟೂತ್ v5.3, 4G, NFC, GPS ಮತ್ತು USB ಟೈಪ್-ಸಿ ಸಂಪರ್ಕವನ್ನು ನೀಡುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ