Oppo F19s: 5000mAh ಬ್ಯಾಟರಿ, 48MP ಕ್ಯಾಮೆರಾ: ಒಪ್ಪೋದಿಂದ F19s ಹೆಸರಿನ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ

ಒಪ್ಪೋ ಸಂಸ್ಥೆಯು ದೇಶದ ಮಾರುಕಟ್ಟೆಯಲ್ಲಿ ಒಪ್ಪೋ F19s ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಸದ್ಯಕ್ಕೆ ಕೇವಲ ಒಂದು ಆಯ್ಕೆಯಲ್ಲಷ್ಟೆ ಈ ಫೋನ್ ಬಿಡುಗಡೆ ಆಗಿದೆ

Oppo F19s: 5000mAh ಬ್ಯಾಟರಿ, 48MP ಕ್ಯಾಮೆರಾ: ಒಪ್ಪೋದಿಂದ F19s ಹೆಸರಿನ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ
Oppo F19s
Follow us
TV9 Web
| Updated By: Vinay Bhat

Updated on: Sep 28, 2021 | 1:02 PM

ಭಾರತದಲ್ಲಿ ತನ್ನ ಮಾರುಕಟ್ಟೆಯನ್ನು ಕಳೆದುಕೊಳ್ಳುತ್ತಿರುವ ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆ ಒಪ್ಪೋ (Opppo) ಮತ್ತೆ ಮೇಲೇಳಲು ಹರಸಾಹಸ ಪಡುತ್ತಿದೆ. ಇದರ ನಡುವೆಯೂ ಹೊಸ ಹೊಸ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿದೆ. ಸದ್ಯ ಇದೀದ ಒಪ್ಪೋ ಸಂಸ್ಥೆಯು ತನ್ನ ಬಹು ನಿರೀಕ್ಷಿತ ಎಫ್19ಎಸ್ (Oppo F19s) ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಅನಾವರಣ ಮಾಡಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್, 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸೇರಿದಂತೆ ಅನೇಕ ಆಕರ್ಷಕ ಫೀಚರ್​ಗಳಿಂದ ಈ ಸ್ಮಾರ್ಟ್​ಫೋನ್ ಕೂಡದೆ. ಅಲ್ಲದೆ ಇದು ಬಜೆಟ್ ಬೆಲೆಗೆ ಲಭ್ಯವಿರುವುದು ವಿಶೇಷದ ಸಂಗತಿ.

ಹೌದು, ಒಪ್ಪೋ ಸಂಸ್ಥೆಯು ದೇಶದ ಮಾರುಕಟ್ಟೆಯಲ್ಲಿ ಒಪ್ಪೋ F19s ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಸದ್ಯಕ್ಕೆ ಕೇವಲ ಒಂದು ಆಯ್ಕೆಯಲ್ಲಷ್ಟೆ ಈ ಫೋನ್ ಬಿಡುಗಡೆ ಆಗಿದೆ. 6GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಬೆಲೆಯು 19,990 ರೂ. ಆಗಿದೆ. ಗ್ಲೋವಿಂಗ್ ಬ್ಲ್ಯಾಕ್, ಗ್ಲೋವಿಂಗ್ ಗೋಲ್ಡ್‌ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ ಮತ್ತು ಒಪ್ಪೋ ಕಂಪೆನಿಯ ಅಧಿಕೃತ ವೆಬ್‌ಸೈಟ್‌ ಮೂಲಕ ಖರೀದಿಸಬಹುದು.

ಒಪ್ಪೋ F19s ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್‌ ರೆಸಲ್ಯೂಶನ್ ಜೊತೆಗೆ 6.43-ಇಂಚಿನ ಪೂರ್ಣ-ಹೆಚ್‌ಡಿ ಪ್ಲಸ್‌ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್‌ ಸಪೋರ್ಟ್‌ ಪಡೆದುಕೊಂಡಿವೆ.

ಇನ್ನೂ ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ತೃತೀಯ ಕ್ಯಾಮೆರಾ ಕ್ರಮವಾಗಿ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್‌ ಪಡೆದಿದೆ. ಇದರೊಂದಿಗೆ ಎಡಿಟಿಂಗ್ ಆಯ್ಕೆಗಳನ್ನು ಪಡೆದಿದೆ.

ಒಪ್ಪೋ F19s ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿಯನ್ನು ಪಡೆದಿದ್ದು, 33W ಫ್ಲ್ಯಾಶ್ ಚಾರ್ಜ್ 4.0 ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5, USB ಟೈಪ್-ಸಿ, USB OTG ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿದಂತೆ ಇತ್ತೀಚೆಗಿನ ಪ್ರಮುಖ ಆಯ್ಕೆಗಳನ್ನು ಒಳಗೊಂಡಿದೆ.

Oppo K9 Pro 5G: 64MP ಕ್ಯಾಮೆರಾ, 60W ಫ್ಲ್ಯಾಶ್ ಚಾರ್ಜ್: ಒಪ್ಪೋ K9 ಪ್ರೊ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ

IQOO Z5: ಶವೋಮಿಗೆ ಬಿಗ್ ಶಾಕ್: ವಿದೇಶದಲ್ಲಿ ಧೂಳೆಬ್ಬಿಸಿದ ಐಕ್ಯೂ Z5 5G ಸ್ಮಾರ್ಟ್​ಫೋನ್ ಭಾರತದಲ್ಲಿ ಬಿಡುಗಡೆ

(Oppo F19s launched in India with Snapdragon 662 and 33watt fast charging at just Rs 19990)

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?