ಚೀನಾದ ಪ್ರಸಿದ್ಧ ಸ್ಮಾರ್ಟ್‌ಫೋನ್ ತಯಾರಿಕ ಕಂಪನಿ ಒಪ್ಪೋ ಇದೀಗ ಭಾರತದಲ್ಲಿ ತನ್ನ ಹೊಸ ಕ್ಲಾಮ್‌ಶೆಲ್-ಶೈಲಿಯ ಫೋಲ್ಡಬಲ್ ಫೋನ್ ಒಪ್ಪೋ ಫೈಂಡ್ N3 ಫ್ಲಿಪ್ (Oppo Find N3 Flip) ಅನ್ನು ಬಿಡುಗಡೆ ಮಾಡಿದೆ. ಈ ಹ್ಯಾಂಡ್‌ಸೆಟ್ ಮೀಡಿಯಾ ಟೆಕ್‌ನ ಆಕ್ಟಾ-ಕೋರ್ ಡೈಮೆನ್ಸಿಟಿ 9200 ಚಿಪ್‌ಸೆಟ್ ಜೊತೆಗೆ 12GB RAM ನಿಂದ ಚಾಲಿತವಾಗಿದೆ. ಜೊತೆಗೆ ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಒಳಗೊಂಡಿದೆ. ಇದು ಮೂರು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ. ಈ ಫೋನಿನ ಕುರಿತ ಸಂಪೂರ್ಣ ಮಾಹಿತಿ ನೋಡೋಣ.
ಭಾರತದಲ್ಲಿ ಒಪ್ಪೋ ಫೈಂಡ್ N3 ಫ್ಲಿಪ್ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ ಏಕೈಕ 12GB RAM + 256GB ಸ್ಟೋರೇಜ್ ಆಯ್ಕೆಗೆ 94,999 ರೂ. ನಿಗದಿ ಮಾಡಲಾಗಿದೆ. ಈ ಹ್ಯಾಂಡ್‌ಸೆಟ್ ಕ್ರೀಮ್ ಗೋಲ್ಡ್, ಮಿಸ್ಟಿ ಪಿಂಕ್, ಸ್ಲೀಕ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಒಪ್ಪೋದ ಆನ್‌ಲೈನ್ ಸ್ಟೋರ್, ಫ್ಲಿಪ್‌ಕಾರ್ಟ್ ಮತ್ತು ದೇಶದಾದ್ಯಂತ ಚಿಲ್ಲರೆ ಅಂಗಡಿಗಳ ಮೂಲಕ ಈ ಫೋನ್ ಅಕ್ಟೋಬರ್ 22 ರಂದು ಸಂಜೆ 6 ಗಂಟೆಯಿಂದ ಮಾರಾಟವಾಗಲಿದೆ. ಒಪ್ಪೋ ಬಳಕೆದಾರರಿಗೆ ಹೆಚ್ಚುವರಿಯಾಗಿ 8,000 ರೂ. ವಿನಿಮಯ ರಿಯಾಯಿತಿ ಮತ್ತು 12,000 ರೂ. ವರೆಗೆ ಕ್ಯಾಶ್‌ಬ್ಯಾಕ್ ಕೊಡುಗೆಗಳನ್ನು ಘೋಷಿಸಿದೆ.
ಡ್ಯುಯಲ್-ಸಿಮ್ (Nano+eSIM) ಒಪ್ಪೋ ಫೈಂಡ್ N3 ಫ್ಲಿಪ್ ಆಂಡ್ರಾಯ್ಡ್ 13 ನ ಒಪ್ಪೋ ColorOS 13.2 ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದು 6.8-ಇಂಚಿನ ಪೂರ್ಣ-HD (1,080×2,520 ಪಿಕ್ಸೆಲ್‌ಗಳು) LTPO AMOLED ಇನ್ನರ್ ಡಿಸ್ ಪ್ಲೇ ಹೊಂದಿದ್ದು, 1Hz ಮತ್ತು 120Hz ನಡುವಿನ ಡೈನಾಮಿಕ್ ರಿಫ್ರೆಶ್ ದರದಿಂದ ಕೂಡಿದೆ. 3.26-ಇಂಚಿನ (382×720 ಪಿಕ್ಸೆಲ್‌ಗಳು) ಕವರ್ ಡಿಸ್‌ಪ್ಲೇಯು AMOLED ಪ್ಯಾನೆಲ್ ಜೊತೆಗೆ 900 ನಿಟ್‌ಗಳ ಗರಿಷ್ಠ ಬ್ರೈಟ್ನೆಸ್ ಹೊಂದಿದೆ.
ಸದ್ದಿಲ್ಲದೆ ರಿಲೀಸ್ ಆಯಿತು ಮೋಟೋರೊಲಾ ಎಡ್ಜ್ 2023: ಭರ್ಜರಿ ಸೇಲ್ ಖಚಿತ
ಒಪ್ಪೋ ಫೈಂಡ್ N3 ಫ್ಲಿಪ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 9200 ಚಿಪ್ ಜೊತೆಗೆ ARM Immortalis-G715 MC11 GPU ಅನ್ನು ಹೊಂದಿದೆ. ಇದು 12GB LPDDR5X RAM ಮತ್ತು 256GB UFS 4.0 ಅಂತರ್ಗತ ಸಂಗ್ರಹಣೆಯನ್ನು ಹೊಂದಿದೆ.
ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಸೋನಿ IMX890 ಸಂವೇದಕ ಮತ್ತು f/1.8 ದ್ಯುತಿರಂಧ್ರದೊಂದಿಗೆ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ನೀಡಲಾಗಿದೆ. ಸೋನಿ IMX581 ಸಂವೇದಕ ಮತ್ತು f/2.2 ದ್ಯುತಿರಂಧ್ರದೊಂದಿಗೆ 48-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾ ಹಾಗೂ ಸೋನಿ IMX709 ಸಂವೇದಕ ಮತ್ತು f/2.0 ದ್ಯುತಿರಂಧ್ರದೊಂದಿಗೆ 32-ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾವನ್ನು ನೀಡಲಾಗಿದೆ.
ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಒಪ್ಪೋ ಫೈಂಡ್ N3 ಫ್ಲಿಪ್ 32-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಒಳಗೊಂಡಿದೆ. ಇದು ಇನ್ನರ್ ಡಿಸ್ ಪ್ಲೇಯಲ್ಲಿದೆ. ಸೋನಿ IMX709 RGBW ಸಂವೇದಕವನ್ನು f/2.4 ದ್ಯುತಿರಂಧ್ರದಿಂದ ಕೂಡಿದೆ. ಈ ಹ್ಯಾಂಡ್‌ಸೆಟ್ ಡಾಲ್ಬಿ ಅಟ್ಮಾಸ್‌ನೊಂದಿಗೆ ಡ್ಯುಯಲ್ ಸ್ಪೀಕರ್ ಸೆಟಪ್ ಅನ್ನು ಹೊಂದಿದೆ.
ಒಪ್ಪೋ ಫೈಂಡ್ N3 ಫ್ಲಿಪ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 7, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಹ್ಯಾಂಡ್‌ಸೆಟ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ. ಇದು 44W SuperVOOC ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 4,300mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ