AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppo Find X9 Series: ಬರೋಬ್ಬರಿ 7,500mAh ಬ್ಯಾಟರಿಯೊಂದಿಗೆ ಭಾರತದಲ್ಲಿ ಬಿಡುಗಡೆ ಆಯಿತು ಹೊಸ ಒಪ್ಪೋ ಸ್ಮಾರ್ಟ್​ಫೋನ್

Oppo Find X9 and Oppo Find X9 Pro Launched: ಪ್ರಸಿದ್ಧ ಒಪ್ಪೋ ಕಂಪನಿಯ ಎರಡು ಹೊಸ ಸ್ಮಾರ್ಟ್ಫೋನ್ ಒಪ್ಪೋ ಫೈಂಡ್ X9 ಮತ್ತು ಫೈಂಡ್ X9 ಪ್ರೊ ಭಾರತದಲ್ಲಿ ಅನಾವರಣಗೊಂಡಿದೆ. ಇದು 3nm ಮೀಡಿಯಾ ಟೆಕ್ ಡೈಮೆನ್ಸಿಟಿ 9500 ಚಿಪ್‌ಸೆಟ್ ಹೊಂದಿದ್ದು, 16GB ವರೆಗಿನ LPDDR5X RAM ಮತ್ತು 512GB ವರೆಗಿನ UFS 4.1 ಆನ್‌ಬೋರ್ಡ್ ಸ್ಟೋರೇಜ್ ಹೊಂದಿದೆ.

Oppo Find X9 Series: ಬರೋಬ್ಬರಿ 7,500mAh ಬ್ಯಾಟರಿಯೊಂದಿಗೆ ಭಾರತದಲ್ಲಿ ಬಿಡುಗಡೆ ಆಯಿತು ಹೊಸ ಒಪ್ಪೋ ಸ್ಮಾರ್ಟ್​ಫೋನ್
Oppo Find X9 And Oppo Find X9 Pro
ಪ್ರೀತಿ ಭಟ್​, ಗುಣವಂತೆ
| Edited By: |

Updated on: Nov 18, 2025 | 3:27 PM

Share

ಬೆಂಗಳೂರು (ನ. 18): ಭಾರತದಲ್ಲಿ ಒಪ್ಪೋ ಫೈಂಡ್ X9 (Oppo Find X9) ಸರಣಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಒಪ್ಪೋ ಫೈಂಡ್ X9 ಮತ್ತು ಫೈಂಡ್ X9 ಪ್ರೊ ಎಂಬ ಎರಡು ಫೋನುಗಳಿವೆ. ಎರಡೂ ಹ್ಯಾಂಡ್‌ಸೆಟ್‌ಗಳು ಮೀಡಿಯಾ ಟೆಕ್‌ನ ಪ್ರಮುಖ ಡೈಮೆನ್ಸಿಟಿ 9500 ಚಿಪ್‌ಸೆಟ್‌ನಿಂದ ಚಾಲಿತವಾಗಿದೆ. ಫೈಂಡ್ X9 ಸರಣಿಯು ಹ್ಯಾಸೆಲ್‌ಬ್ಲಾಡ್ ಅಭಿವೃದ್ಧಿಪಡಿಸಿದ ಟ್ರಿಪಲ್ ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯನ್ನು ಹೊಂದಿರುತ್ತದೆ. ಫೈಂಡ್ X9 ಮತ್ತು ಫೈಂಡ್ X9 ಪ್ರೊ ಆಂಡ್ರಾಯ್ಡ್ 16 ಆಧಾರಿತ ಕಲರ್​ ಒಎಸ್ 16 ನಲ್ಲಿ ರನ್ ಆಗುತ್ತವೆ. ಈ ಫೋನುಗಳ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಒಪ್ಪೋ ಫೈಂಡ್ X9, ಒಪ್ಪೋ ಫೈಂಡ್ X9 ಪ್ರೊ ಬೆಲೆ, ಲಭ್ಯತೆ

ಭಾರತದಲ್ಲಿ ಒಪ್ಪೋ ಫೈಂಡ್ X9 ನ 12GB+256GB RAM ಮತ್ತು ಸ್ಟೋರೇಜ್ ಕಾನ್ಫಿಗರೇಶನ್ ಬೆಲೆ ರೂ. 74,999 ರಿಂದ ಪ್ರಾರಂಭವಾಗುತ್ತದೆ. ಇದು 16GB+512GB ರೂಪಾಂತರದಲ್ಲಿಯೂ ಲಭ್ಯವಿದೆ, ಇದರ ಬೆಲೆ ರೂ. 84,999. ಇನ್ನು ಒಪ್ಪೋ ಫೈಂಡ್ X9 ಪ್ರೊ 16GB RAM ಮತ್ತು 512GB ಆನ್‌ಬೋರ್ಡ್ ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ, ಇದರ ಬೆಲೆ ರೂ. 1,09,999.

ಒಪ್ಪೋ ಫೈಂಡ್ X9 ಫೀಚರ್ಸ್

ಈ ಹ್ಯಾಂಡ್‌ಸೆಟ್ 6.59-ಇಂಚಿನ AMOLED ಡಿಸ್​ಪ್ಲೇ, 120Hz ರಿಫ್ರೆಶ್ ದರ ಹೊಂದಿದೆ. ಡಿಸ್​ಪ್ಲೇ ಮೇಲ್ಭಾಗದಲ್ಲಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಹೊಂದಿದೆ. ಹ್ಯಾಸೆಲ್‌ಬ್ಲಾಡ್-ಟ್ಯೂನ್ ಮಾಡಲಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ನೀಡಲಾಗಿದೆ, ಇದರಲ್ಲಿ 50-ಮೆಗಾಪಿಕ್ಸೆಲ್ (f/1.6) ಸೋನಿ LYT-808 ವೈಡ್ ಕ್ಯಾಮೆರಾ, 50-ಮೆಗಾಪಿಕ್ಸೆಲ್ (f/2.0) ಅಲ್ಟ್ರಾವೈಡ್ ಕ್ಯಾಮೆರಾ ಮತ್ತು 50-ಮೆಗಾಪಿಕ್ಸೆಲ್ (f/2.6) ಸೋನಿ LYT-600 ಟೆಲಿಫೋಟೋ ಕ್ಯಾಮೆರಾ OIS ಜೊತೆಗೆ ಸೇರಿವೆ. 32-ಮೆಗಾಪಿಕ್ಸೆಲ್ ಸೋನಿ IMX615 ಫ್ರಂಟ್-ಫೇಸಿಂಗ್ ಕ್ಯಾಮೆರಾವನ್ನು ಹೊಂದಿದೆ.

Upcoming Smartphones: ಒಂದಲ್ಲ.. ಎರಡಲ್ಲ.. ಈ ವಾರ ರಿಲೀಸ್ ಆಗಲಿದೆ 5 ಶಕ್ತಿಶಾಲಿ ಸ್ಮಾರ್ಟ್‌ಫೋನ್ಸ್

3nm ಮೀಡಿಯಾ ಟೆಕ್ ಡೈಮೆನ್ಸಿಟಿ 9500 ಚಿಪ್‌ಸೆಟ್ ಹೊಂದಿದ್ದು, 16GB ವರೆಗಿನ LPDDR5X RAM ಮತ್ತು 512GB ವರೆಗಿನ UFS 4.1 ಆನ್‌ಬೋರ್ಡ್ ಸ್ಟೋರೇಜ್ ಹೊಂದಿದೆ. ಇದು VC ಕೂಲಿಂಗ್ ವ್ಯವಸ್ಥೆಯನ್ನು ಹೊಂದಿದೆ. 7,025mAh ಸಿಲಿಕಾನ್-ಕಾರ್ಬನ್ ಬ್ಯಾಟರಿ ನೀಡಲಾಗಿದ್ದು, ಇದು 80W ವೈರ್ಡ್ ಫಾಸ್ಟ್ ಚಾರ್ಜಿಂಗ್, 50W ಏರ್‌ವಿಒಒಸಿ ವೈರ್‌ಲೆಸ್ ಚಾರ್ಜಿಂಗ್ ಮತ್ತು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಒಪ್ಪೋ ಫೈಂಡ್ X9 ಪ್ರೊ ಫೀಚರ್ಸ್:

ಒಪ್ಪೋ ಫೈಂಡ್ X9 ಪ್ರೊ ದೊಡ್ಡದಾದ 6.78-ಇಂಚಿನ ಡಿಸ್​​ಪ್ಲೇಯನ್ನು ಹೊಂದಿದೆ. 50-ಮೆಗಾಪಿಕ್ಸೆಲ್ (f/1.5) ಸೋನಿ LYT-828 ಪ್ರಾಥಮಿಕ ಕ್ಯಾಮೆರಾವನ್ನು 1/1.28-ಇಂಚಿನ ಸೆನ್ಸರ್, 23mm ಫೋಕಲ್ ಲೆಂತ್ ಮತ್ತು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS), 50-ಮೆಗಾಪಿಕ್ಸೆಲ್ (f/2.0) ಸ್ಯಾಮ್​ಸಂಗ್ ISOCELL 5KJN5 ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು 15mm ಫೋಕಲ್ ಲೆಂತ್ ಮತ್ತು 200-ಮೆಗಾಪಿಕ್ಸೆಲ್ (f/2.1) ಟೆಲಿಫೋಟೋ ಕ್ಯಾಮೆರಾವನ್ನು 70mm ಫೋಕಲ್ ಲೆಂತ್ ಮತ್ತು OIS ಜೊತೆಗೆ ಹೊಂದಿದೆ. ಮುಂಭಾಗದಲ್ಲಿ, ಇದು 50-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ.

ಈ ಹ್ಯಾಂಡ್‌ಸೆಟ್ ಫೈಂಡ್ X9 ನಂತೆಯೇ ಚಿಪ್‌ಸೆಟ್, ಸಂಗ್ರಹಣೆ ಮತ್ತು ಸಾಫ್ಟ್‌ವೇರ್ ಬೆಂಬಲವನ್ನು ಹೊಂದಿದೆ. 80W ಸೂಪರ್‌ವಿಒಒಸಿ ವೈರ್ಡ್ ಮತ್ತು 50W ಏರ್‌ವಿಒಒಸಿ ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ 7,500mAh ಸಿಲಿಕಾನ್-ಕಾರ್ಬನ್ ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಬೆಂಬಲವೂ ಇದೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ