AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಪ್ಪೋದಿಂದ ಬಜೆಟ್ ಬೆಲೆಗೆ ಒಪ್ಪೋ A17 ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ ಎಷ್ಟು?, ಏನು ಫೀಚರ್ಸ್

2022 ಎರಡನೇ ಕ್ವಾರ್ಟರ್​ನಲ್ಲಿ ಅತಿ ಕಡಿಮೆ ಸ್ಮಾರ್ಟ್​ಫೋನನ್ನು ಪರಿಚಯಿಸಿರುವ ಒಪ್ಪೋ ಇದೀಗ ದಿಢೀರ್ ಆಗಿ ತನ್ನ A ಸರಣಿಯಲ್ಲಿ ಹೊಸ ಒಪ್ಪೋ ಎ17 (Oppo A17) ಫೋನನ್ನು ಅನಾವರಣ ಮಾಡಿದೆ. ಇದೊಂದು ಪಕ್ಕಾ ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ವಿನ್ಯಾಸ, ಉ್ತತಮ ಬ್ಯಾಟರಿ, ಕ್ಯಾಮೆರಾಗಳನ್ನು (Camera) ಸಹ ಹೊಂದಿದೆ.

ಒಪ್ಪೋದಿಂದ ಬಜೆಟ್ ಬೆಲೆಗೆ ಒಪ್ಪೋ A17 ಸ್ಮಾರ್ಟ್‌ಫೋನ್‌ ಬಿಡುಗಡೆ: ಬೆಲೆ ಎಷ್ಟು?, ಏನು ಫೀಚರ್ಸ್
Oppo A17
TV9 Web
| Edited By: |

Updated on:Sep 27, 2022 | 2:34 PM

Share

ಚೀನಾ ಮೂಲದ ಪ್ರಸಿದ್ಧ ಸ್ಮಾರ್ಟ್​ಫೋನ್ ಬ್ರ್ಯಾಂಡ್ ಒಪ್ಪೋ (Oppo) ಹೊಸ ಮೊಬೈಲ್ ಬಿಡುಗಡೆ ಮಾಡಿ ತಿಂಗಳು ಕಳೆದಿದೆ. 2022 ಎರಡನೇ ಕ್ವಾರ್ಟರ್​ನಲ್ಲಿ ಅತಿ ಕಡಿಮೆ ಸ್ಮಾರ್ಟ್​ಫೋನನ್ನು ಪರಿಚಯಿಸಿರುವ ಒಪ್ಪೋ ಇದೀಗ ದಿಢೀರ್ ಆಗಿ ತನ್ನ A ಸರಣಿಯಲ್ಲಿ ಹೊಸ ಒಪ್ಪೋ ಎ17 (Oppo A17) ಫೋನನ್ನು ಅನಾವರಣ ಮಾಡಿದೆ. ಇದೊಂದು ಪಕ್ಕಾ ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ವಿನ್ಯಾಸ, ಉತ್ತಮ ಬ್ಯಾಟರಿ, ಕ್ಯಾಮೆರಾಗಳನ್ನು (Camera) ಸಹ ಹೊಂದಿದೆ. ಸದ್ಯಕ್ಕೆ ಈ ಫೋನ್ ಮಲೇಷ್ಯಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಕೆಲವೇ ದಿನಗಳಲ್ಲಿ ಭಾರತಕ್ಕೂ ಕಾಲಿಡುವ ಸಾಧ್ಯತೆ ಇದೆಯಂತೆ. ಹಾಗಾದರೆ ಈ ಫೋನಿನ, ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್​ ಇದೆ ಎಂಬುದನ್ನು ನೋಡೋಣ.

  • ಒಪ್ಪೋ A17 ಸ್ಮಾರ್ಟ್‌ಫೋನ್‌ ಬೆಲೆ ಮಲೆಷ್ಯಾದಲ್ಲಿ MYR599, ಅಂದರೆ ಭಾರತದಲ್ಲ ಇದರ ಬೆಲೆ ಸುಮಾರು 10,619ರೂ. ಇರಬಹುದು. ಈ ಫೋನ್‌ ಲೇಕ್ ಬ್ಲೂ ಮತ್ತು ಮಿಡ್ನೈಟ್ ಬ್ಲಾಕ್ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವುದೆ.
  • ಈ ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.56 ಇಂಚಿನ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್​ನಿಂದ ಕೂಡಿದೆ.
  • ಮೀಡಿಯಾ ಟೆಕ್ ಹೆಲಿಯೊ G35 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.
  • ಒಪ್ಪೋ A17 ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಹೊಂದಿದೆ.
  • ಇದಲ್ಲದೆ ವಿಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, 360 ಡಿಗ್ರಿ ಫಿಲ್ ಲೈಟ್, ಪೋರ್ಟ್ರೇಟ್ ರಿಟೌಚಿಂಗ್, HDR ಅನ್ನು ಒಳಗೊಂಡಿದೆ.
  • ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಅನ್ನು ಪಡೆದುಕೊಂಡದೆ.

Published On - 2:25 pm, Tue, 27 September 22

Follow Us
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು
‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು