ಒಪ್ಪೋ A97 5G ಸ್ಮಾರ್ಟ್‌ಫೋನ್ ಸದ್ಯಕ್ಕೆ ಚೀನಾ ಮಾರುಕಟ್ಟೆಯಲ್ಲಿ ಮಾತ್ರ ಅನಾವರಣಗೊಂಡಿದೆ. ಕೆಲವೇ ತಿಂಗಳಲ್ಲಿ ಭಾರತಕ್ಕೂ ಕಾಲಿಡುವ ನಿರೀಕ್ಷೆಯಿದೆ.
Ad
Oppo A97 5G
Follow us on
ಬಜೆಟ್ ಬೆಲೆಗೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡುವುದರಲ್ಲಿ ಒಪ್ಪೋ (Oppo) ಎತ್ತಿದ ಕೈ. ಈಗಾಗಲೇ ಕಡಿಮೆ ದರಕ್ಕೆ ಅನೇಕ ಫೋನ್ಗಳನ್ನು ರಿಲೀಸ್ ಮಾಡಿ ಸೈ ಎನಿಸಿಕೊಂಡಿದೆ. ಇದೇ ಸಾಲಿನಲ್ಲಿ ಮತ್ತೊಂದು ಮೊಬೈಲ್ ಅನ್ನು ಇದೀಗ ಒಪ್ಪೋ ಬಿಡುಗಡೆ ಮಾಡಿದ್ದು ಇದರ ಹೆಸರು ಒಪ್ಪೋ ಎ97 (Oppo A97). ವಿಶೇಷ ಎಂದರೆ ಈ ಫೋನ್ 5G ಯಿಂದ ಆವೃತ್ತವಾಗಿದೆ. ಮೀಡಿಯಾ ಟೆಕ್ ಡೈಮಮ್ಸಿಟಿ ಪ್ರೊಸೆಸರ್, ಬಲಿಷ್ಠ ಬ್ಯಾಟರಿ, ಫಾಸ್ಟ್ ಚಾರ್ಜರ್, 48 ಮೆಗಾಫಿಕ್ಸೆಲ್ ಕ್ಯಾಮೆರಾ ಸೇರಿದಂತೆ ಅತ್ಯುತ್ತಮ ಫೀಚರ್ಗಳು ಇದರಲ್ಲಿ ಅಡಕವಾಗಿದೆ. ಹಾಗಿದ್ದರೆ ಈ ಫೋನಿನ ಬೆಲೆ ಎಷ್ಟು?, ಇತರೆ ಫೀಚರ್ಸ್ ಏನೇನಿದೆ ಎಂಬುದನ್ನು ನೋಡೋಣ.
ಒಪ್ಪೋ A97 5G ಸ್ಮಾರ್ಟ್‌ಫೋನ್ ಸದ್ಯಕ್ಕೆ ಚೀನಾ ಮಾರುಕಟ್ಟೆಯಲ್ಲಿ ಮಾತ್ರ ಅನಾವರಣಗೊಂಡಿದೆ. ಕೆಲವೇ ತಿಂಗಳಲ್ಲಿ ಭಾರತಕ್ಕೂ ಕಾಲಿಡುವ ನಿರೀಕ್ಷೆಯಿದೆ.
ಇದರ 12GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಚೀನಾದಲ್ಲಿ CNY 1,999, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 23,600 ರೂ. ಎನ್ನಬಹುದು. ಜುಲೈ 15 ರಿಂದ ಈ ಫೋನ್ ಮಾರಾಟವಾಗಲಿದೆ.
ಒಪ್ಪೋ A97 5G ಸ್ಮಾರ್ಟ್‌ಫೋನ್ 6.66-ಇಂಚಿನ ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080×2,020 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಿಂದ ಕೂಡಿದೆ.
ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು AI-ಚಾಲಿತ ಸ್ಮಾರ್ಟ್ ಐ ಪ್ರೊಟೆಕ್ಷನ್ ಅನ್ನು ಪಡೆದಿದೆ. ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ನೀಡಲಾಗಿದೆ.
Nothing phone (1): ಇಂದು ವಿಶ್ವವೇ ಕಾಯುತ್ತಿರುವ ನಥಿಂಗ್ ಫೋನ್ 1 ಬಿಡುಗಡೆ: ಬೆಲೆ ಎಷ್ಟು? ಫೀಚರ್ಸ್ ಏನು?
Xiaomi 12 Lite: 108MP ಕ್ಯಾಮೆರಾ, 67W ಫಾಸ್ಟ್ ಚಾರ್ಜರ್: ಶವೋಮಿಯಿಂದ ಮತ್ತೊಂದು ಪವರ್ಫುಲ್ ಫೋನ್ ರಿಲೀಸ್
Moto G42: 50MP ಕ್ಯಾಮೆರಾ, 5000mAh ಬ್ಯಾಟರಿ: ಭರ್ಜರಿ ಸೇಲ್ ಕಾಣುತ್ತಿದೆ ಕಡಿಮೆ ಬೆಲೆಯ ಮೋಟೋ G42
ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಕಲರ್ ಒಎಸ್ 12 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಒಪ್ಪೋ A97 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.
ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಫ್ಲ್ಯಾಷ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಸಿಂಗಲ್ ಚಾರ್ಜ್‌ನಲ್ಲಿ 15 ಗಂಟೆಗಳವರೆಗೆ ವಿಡಿಯೋ ಪ್ಲೇಬ್ಯಾಕ್ ಟೈಂ ಅನ್ನು ನೀಡಲಿದೆ.
ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-ಸಿ ಬೆಂಬಲಿಸಲಿದೆ. ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಪಡೆದುಕೊಂಡಿದೆ.