Oppo Reno 7 series: ರಿಲೀಸ್​ಗೂ ಮುನ್ನವೇ ಕ್ಯಾಮೆರಾದಿಂದ ಧೂಳೆಬ್ಬಿಸುತ್ತಿರುವ ಒಪ್ಪೋ ರೆನೋ 7 ಸರಣಿ

| Updated By: Vinay Bhat

Updated on: Jan 24, 2022 | 3:34 PM

OPPO Reno 7, Reno 7 Pro India launch: ಒಪ್ಪೋ ರೆನೋ 7 ಪ್ರೊ ಮತ್ತು ರೆನೋ 7 ಸ್ಮಾರ್ಟ್‌ಫೋನ್‌ ಇದೇ ಫೆಬ್ರವರಿ 4 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ. ಒಪ್ಪೋ ರೆನೋ 7 ಸರಣಿ ಸ್ಮಾರ್ಟ್​​ಫೋನ್​ನ ಪ್ರಮುಖ ಹೈಲೇಟ್ ಇದರ ಕ್ಯಾಮೆರಾ.

Oppo Reno 7 series: ರಿಲೀಸ್​ಗೂ ಮುನ್ನವೇ ಕ್ಯಾಮೆರಾದಿಂದ ಧೂಳೆಬ್ಬಿಸುತ್ತಿರುವ ಒಪ್ಪೋ ರೆನೋ 7 ಸರಣಿ
Oppo Reno 7 series
Follow us on

ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗೂ (Smartphone) ಸೈ ಮಿಡ್ ರೇಂಜ್ ಮೊಬೈಲ್​ಗೂ ರೆಡಿ ಎಂಬಂತೆ ಆಕರ್ಷಕ ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ಒಪ್ಪೋ (Oppo) ಸಂಸ್ಥೆಗೆ ರೆನೋ ಸರಣಿಯ ಫೋನ್‌ಗಳು ಹೆಚ್ಚಿನ ಹೆಸರು ತಂದುಕೊಟ್ಟಿದೆ. ಇದೀಗ ಒಪ್ಪೋ ಭಾರತದಲ್ಲಿ ರೆನೋ ಸರಣಿಯ ಅಡಿಯಲ್ಲಿ ಈ ವರ್ಷದ ಮೊದಲ ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಹೊಸ ಒಪ್ಪೋ ರೆನೋ 7 ಪ್ರೊ ಮತ್ತು ರೆನೋ 7 ಸ್ಮಾರ್ಟ್‌ಫೋನ್‌ ಇದೇ ಫೆಬ್ರವರಿ 4 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ. ಈ ಬಗ್ಗೆ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ ಮಾಹಿತಿ ಹಂಚಿಕೊಂಡಿದೆ. ಈ ಫೋನ್​ನ ಪ್ರಮುಖ ಹೈಲೇಟ್ ಇದರ ಕ್ಯಾಮೆರಾ. ಕೇವಲ ಕ್ಯಾಮೆರಾ ಮಾತ್ರವಲ್ಲದೆ ಒಪ್ಪೋ ರೆನೋ 7 ಪ್ರೊ ಫೋನ್‌ ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ಇದು 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದ್ದು ಬಲಿಷ್ಠ ಪ್ರೊಸೆಸರ್ ಅನ್ನು ಅಳವಡಿಸಲಾಗಿದೆಯಂತೆ. ಕಂಪನಿ ಈ ಫೋನಿನ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಹಾಕಿಲ್ಲ. ಆದರೆ ಮೂಲಗಳ ಪ್ರಕಾರ ಒಪ್ಪೋ ರೆನೋ 7 5G (Oppo Reno 7 series) ಸ್ಮಾರ್ಟ್‌ಫೋನ್‌ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಒಪ್ಪೋ ರೆನೋ 7 5G ಸ್ಮಾರ್ಟ್‌ಫೋನ್‌ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ. ಜೊತೆಗೆ 4500mAh ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಇನ್ನು ಒಪ್ಪೋ ರೆನೊ7 ಪ್ರೊ 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55-ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200-ಮ್ಯಾಕ್ಸ್ SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 ಕಲರ್OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 32 ಮೆಗಾ ಪಿಕ್ಸೆಲ್ ಸೋನಿ IMX709 ಸೆಲ್ಪಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ.

ಈ ಎರಡೂ ಸ್ಮಾರ್ಟ್​ಫೋನಿನ ಅಧಿಕೃತ ಬೆಲೆ ಇನ್ನೂ ಬಹಿರಂಗಗೊಂಡಿಲ್ಲ. ಆದರೆ, ಖಾಸಗಿ ವೆಬ್​ಸೈಟ್ ಒಂದು ಮಾಡಿರುವ ವರದಿಯ ಪ್ರಕಾರ, ಭಾರತದಲ್ಲಿ ಒಪ್ಪೋ ರೆನೋ 7 ಸರಣಿಯ ಬೆಲೆ 28,000 ರೂ. ಮತ್ತು 43,000 ರೂ. ಗಳ ನಡುವೆ ಇರಬಹುದು ಎಂದು ಅಂದಾಜಿಸಲಾಗಿದೆ.

Micromax In Note 2: ಗಣ ರಾಜ್ಯೋತ್ಸವ ಪ್ರಯುಕ್ತ ಬಿಡುಗಡೆ ಆಗುತ್ತಿದೆ ಭಾರತದ ಹೊಸ ಸ್ಮಾರ್ಟ್​ಫೋನ್

Airtel vs Jio vs Vi: 84 ದಿನಗಳ ವ್ಯಾಲಿಡಿಟಿಗೆ ಕಡಿಮೆ ಬೆಲೆಯ ಪ್ರಿಪೇಯ್ಡ್ ಪ್ಲಾನ್: ಇಲ್ಲಿದೆ ಅತ್ಯುತ್ತಮ ಆಯ್ಕೆ